ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು
ಕಡಬ: ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್ ಒಂದರ ಎದುರು ರಸ್ತೆಯಲ್ಲಿ ನಿಂತಿದ್ದ ಗೋವನ್ನು ಅಪರಿಚಿತರು ಕದ್ದು, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿದ ಘಟನೆ ನಡೆದಿದೆ. ಈ ಕುಕೃತ್ಯ ಮೇ 6 ರಂದು ರಾತ್ರಿ ಸಮಯದಲ್ಲಿ ನಡೆದಿದ್ದು, ಇಬ್ಬರು ಖದೀಮರು ಗೋವನ್ನು ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕಾರೊಂದಕ್ಕೆ ತುಂಬುತ್ತಿರುವ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುಬ್ರಹ್ಮಣ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು Read More »










