ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ನಡೆಸುತ್ತಿದ್ದು, ಅದು ಪೂರ್ಣವಾಗುವ ವರೆಗೆ ತಾನು ಈ ಸಂಬಂಧ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ತನಿಖೆ ಮುಗಿಯುವ ವರೆಗೆ ಈ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ತನಿಖೆಯ ಬಳಿಕ ವಾಸ್ತವಾಂಶ ಬೆಳಕಿಗೆ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಪ್ರಶ್ನೆಗಳು ಬಂದರೆ ಉತ್ತರ ನೀಡಲಾಗುವುದು ಎಂದು ಅವರು ನುಡಿದಿದ್ದಾರೆ.
ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್ Read More »










