ದಕ್ಷಿಣ ಕನ್ನಡ

ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಕೇಸಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದರೆ ಸಹಾಯವಾಣಿಗೆ ಕರೆ ಮಾಡಲು ಮನವಿ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದು, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇದ್ದರೆ 0824-2005301ಕ್ಕೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದ್ದಾರೆ. ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೇ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದೆ. ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ […]

ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ Read More »

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ

ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ – ಬೆಳ್ಳಾರೆ – ನೆಟ್ಟಾರು ಮಾರ್ಗವಾಗಿ ಈಶ್ವರಮಂಗಲಕ್ಕೆ 5 ಎಮ್ಮೆಗಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ನೆಟ್ಟಾರಿನಲ್ಲಿ ಪಿಕಪ್ ಅನ್ನು ತಡೆದು ನಿಲ್ಲಿಸಿ ಇಬ್ಬರು ಆರೋಪಿಗಳು, 5 ಎಮ್ಮೆಗಳನ್ನು ಪಿಕಪ್ ಸಮೇತ ವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ ದೇಲಂಪಾಡಿ ಮುಜಾಮಿನ್ ಮತ್ತು ಅಬ್ದುಲ್ಲ ಬಂಧಿತ ಆರೋಪಿಗಳು. ಆರೋಪಿಗಳನ್ನು

ಸುಳ್ಯ : ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ Read More »

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ

ಉಡುಪಿ: 2024-25 ನೇ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ‘ಉತ್ತೇಜನ ‘ ಜ್ಞಾನದ ಸಿರಿಗೆ ಸನ್ಮಾನ ಘೋಷ ವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆ ಹೈಸ್ಕೂಲ್ ವಿಭಾಗದ 2024 – 25ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಉತ್ತೇಜನ’ ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದಾಗಿದೆ. ಇದೇ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಸಿದ್ದಾಪುರ ಸಂಸ್ಥೆಯ

ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ : ಉತ್ತೇಜನ – 2025 ಕಾರ್ಯಕ್ರಮ Read More »

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಪಂಪ್‌ವೆಲ್‌ನಲ್ಲಿರುವ ಭಾರತ್ ಆಗ್ರೋ ಎಂಬ ಮಳಿಗೆಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಕೋಳಿ ಆಹಾರ ಮತ್ತು ಪೀಠೋಪಕರಣ ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು : ಕೋಳಿ ಆಹಾರ ಮಳಿಗೆಯಲ್ಲಿ ಬೆಂಕಿ ಅವಘಡ Read More »

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ?

ಶವ ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಿಧೆಡೆ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಸೋಮವಾರ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಲಿನ ಪ್ರದೇಶಗಳಲ್ಲಿ ತಾನು ಮೃತದೇಹಗಳನ್ನು ಹೂತು ಹಾಕಿರುವ 13 ಸ್ಥಳಗಳನ್ನು ತೋರಿಸಿದ್ದಾನೆ. ಪೊಲೀಸರು ಈ 13 ಸ್ಥಳಗಳನ್ನು ನಂಬರ್ ನೀಡಿ ಗುರುತಿಸಿದ್ದಾರೆ. ಅದರ ಸುತ್ತ ಟೇಪ್ ಕಟ್ಟಲಾಗಿದ್ದು ಈ ಸ್ಥಳಗಳಲ್ಲಿ ರಾತ್ರಿ ಪೊಲೀಸ್ ಗಸ್ತನ್ನು ಏರ್ಪಡಿಸಲಾಗಿತ್ತು. ಮಂಗಳವಾರವೇ ಮೃತದೇಹಗಳನ್ನು ಹೂತು ಹಾಕಿದ ಸ್ಥಳಗಳಲ್ಲಿ ಅಗೆದು ಅವಶೇಷಗಳನ್ನು

ಧರ್ಮಸ್ಥಳ ಪ್ರಕರಣ : ಇಂದೇ ಗುರುತಿಸಿದ ಸ್ಥಳಗಳ ಅಗೆತ ಕಾರ್ಯಾಚರಣೆ? Read More »

ವೆನ್ಲಾಕ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಡೇ ಕೇರ್‌ ಸೆಂಟರ್‌ ಸ್ಥಾಪನೆ : ಕ್ಯಾ.ಬ್ರಿಜೇಶ್‌ ಚೌಟ

ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಯೋಜನೆ ಮಂಗಳೂರು: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ-ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಶುಶ್ರೂಷೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ

ವೆನ್ಲಾಕ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಡೇ ಕೇರ್‌ ಸೆಂಟರ್‌ ಸ್ಥಾಪನೆ : ಕ್ಯಾ.ಬ್ರಿಜೇಶ್‌ ಚೌಟ Read More »

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ

ಪೊಳಲಿ: ದಕ್ಷಿಣಕನ್ನಡ ಜಿಲ್ಲಾ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ವತಿಯಿಂದ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ,124 ತೃತೀಯ ಭಾಷೆಯಲ್ಲಿ 100, 99 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಸರ್ವಮಂಗಳ ಸಭಾಭವನದಲ್ಲಿ ಸಂಪನ್ನಗೊಂಡಿತು. ದೇವಸ್ಥಾನದ ಆನುವಂಶಿಕ ಮೊಕ್ತೇಸರ ವೇದಮೂರ್ತಿ ಮಾಧವ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರ ಮಂಗಳೂರಿನ ಶಾರದಾ ವಿದ್ಯಾಲಯದ ಉಪನ್ಯಾಸಕ ರಮೇಶ ಅಚಾರ್ಯ ಮಾತನಾಡಿ, ಸಂಸ್ಕೃತ ಕಲಿತು ಭಾರತೀಯತೆ

ಸಂಸ್ಕೃತ ಕಲಿತು ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಳ್ಳಿ: ರಮೇಶ ಆಚಾರ್ಯ Read More »

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು

ಸುಳ್ಯ: ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ಬೈಲು ನಿವಾಸಿ ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್ ಚೆದ್ಮಾರ್ ಅವರ ತಾಯಿ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ. ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ

ಸುಳ್ಯ: ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಮಹಿಳೆ ಸಾವು Read More »

ಧರ್ಮಸ್ಥಳ : ಬಸ್‌ ತಂಗುದಾಣಕ್ಕೆ ನುಗ್ಗಿ ಬಂದ ಬೃಹತ್‌ ಕಾಡಾನೆ

ಒಂಟಿ ಸಲಗ ಕಂಡು ಬಸ್‌ಗಾಗಿ ಕಾಯುತ್ತಿದ್ದ ಶಾಲಾ ಮಕ್ಕಳು ಭಯಭೀತ ಬೆಳ್ತಂಗಡಿ : ಧರ್ಮಸ್ಥಳ ಸಮೀಪದ ಬೊಳಿಯಾರ್‌ನಲ್ಲಿ ಇಂದು ಬೆಳಗ್ಗೆ ಒಂಟಿ ಸಲಗವೊಂದು ಬಸ್‌ ತಂಗುದಾಣಕ್ಕೆ ನುಗ್ಗಿ ಬಂದು ಆತಂಕ ಸೃಷ್ಟಿಸಿದೆ. ರಸ್ತೆ ಬದಿ ಬಸ್ ತಂಗುದಾಣದಲ್ಲಿ ಶಾಲಾ ಮಕ್ಕಳು ಬಸ್‌ಗಾಗಿ ಕಾಯುತ್ತಿದ್ದ ವೇಳೆ ರಸ್ತೆಯಲ್ಲಿ ಪ್ರತ್ಯಕ್ಷವಾದ ಬೃಹತ್‌ ಗಾತ್ರದ ಒಂಟಿ ಸಲಗ ಬಸ್ ತಂಗುದಾಣದ ಕಡೆಗೆ ನುಗ್ಗಿ ಬಂದಿದೆ. ತಂಗುದಾಣದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಹತ್ತಿರದಲ್ಲಿದ್ದ ಅಂಗಡಿಯೊಳಗೆ ನುಗ್ಗಿ ಪಾರಾಗಿದ್ದಾರೆ. ಬಳಿಕ

ಧರ್ಮಸ್ಥಳ : ಬಸ್‌ ತಂಗುದಾಣಕ್ಕೆ ನುಗ್ಗಿ ಬಂದ ಬೃಹತ್‌ ಕಾಡಾನೆ Read More »

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ

ತಲೆ ಬುರುಡೆ ರಹಸ್ಯ ಬೇಧಿಸುವ ನಿಟ್ಟಿನಲ್ಲಿ ತನಿಖೆ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಎರಡನೇ ದಿನವೂ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಎರಡನೇ ದಿನವಾದ ಭಾನುವಾರ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೇ ಸ್ವತಃ ವಿಚಾರಣೆ ನಡೆಸಿದ್ದಾರೆ. ಶನಿವಾರ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಐಬಿಯಲ್ಲಿ ಎಸ್‌ಐಟಿ ಅಧಿಕಾರಿ ಡಿಐಜಿ ಅನುಚೇತ್ ನೇತೃತ್ವದಲ್ಲಿ ಎಂಟು ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಲಾಗಿತ್ತು. ಈವರೆಗೆ ನಡೆದ ವಿಚಾರಣೆಯ ಮಾಹಿತಿ ಪಡೆದ ಬಳಿಕ

ಧರ್ಮಸ್ಥಳ ಪ್ರಕರಣ : ಎರಡನೇ ದಿನವೂ ದೂರುದಾರನ ಸುದೀರ್ಘ ವಿಚಾರಣೆ Read More »

error: Content is protected !!
Scroll to Top