ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಮಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು ರಜೆ ಘೋಷಿಸಿದೆ. ಈ ಹಿನ್ನಲೆ ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕ್ರತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ Read More »