ದಕ್ಷಿಣ ಕನ್ನಡ

ಪ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ !!

ಬಂಟ್ವಾಳ: ಆಕಸ್ಮಿಕ ಬೆಂಕಿ ತಗುಲಿ ಫೈವುಡ್ ಫ್ಯಾಕ್ಟರಿ ಭಸ್ಮವಾಗಿ 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸಜೀಪ ಸಮೀಪದ ಕೋಟೆಕಣಿಯಲ್ಲಿ ನಡೆದಿದೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ರಾಶಿ ಹಾಕಿದ್ದ ಮರದ ಅವಶೇಷದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಸಿದ ತಕ್ಷಣ ಕಾರ್ಯಾಚರಣೆ ನಡೆಸಿದ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾ‌ರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ಭಾಗವಹಿಸಿದ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

ಪ್ಲೈವುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ !! Read More »

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ, ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ತಾಯಿ ಅಮಣಿ ಶೆಟ್ಟಿ ನಿಧನರಾಗಿದ್ದಾರೆ. 85 ವರ್ಷ ಪ್ರಾಯದ ಅಮಣಿ ಶೆಟ್ಟಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪುತ್ರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿಗೆ ಮಾತೃವಿಯೋಗ Read More »

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಕಡ್ತ್ಯಾರು ಪಟಾಕಿ ತಯಾರಿಕಾ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇರೆಗೆ ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಬಶೀರ್‌ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ

ಸುಡುಮದ್ದು ಸ್ಫೋಟ ಪ್ರಕರಣ; ಮಾಲೀಕ ಸೈಯದ್ ಬಶೀರ್ ವಶಕ್ಕೆ Read More »

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸುಡುಮದ್ದು ತಯಾರಿಸುವ ಘಟಕವೊಂದರಲ್ಲಿ ಸ್ಫೋಟ ಉಂಟಾಗಿ ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಘಟಕದ ಮಾಲಕ ಬಶೀರ್ ಸ್ಥಳದಿಂದ ಪರಾರಿಯಾಗಿದ್ದು, ಇನ್ನು ಹೆಚ್ಚಿನ ಸಾವು ಸಂಭವಿಸಿರುವ ಸಾಧ್ಯತೆ ಇದ್ದು ಹುಡುಕಾಟ ನಡೆಯುತ್ತಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದ್ದು, ಹೆಚ್ಚಿನ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ! | ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ Read More »

ಬಂಟ್ವಾಳ: ಗುಡ್ಡದಲ್ಲಿ ಪತಿ-ಪತ್ನಿ ಸಜೀಹ ದಹನ!!

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಕೊಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಜ.28ರ ಭಾನುವಾರ ಮಧಾಹ್ನ ವೇಳೆ ಸಂಭವಿಸಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆ ಸಮೀಪದಲ್ಲಿರುವ ಗುಡ್ಡದಲ್ಲಿರುವ ಮುಳಿಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ. ಬಂಟ್ವಾಳ ನಗರ

ಬಂಟ್ವಾಳ: ಗುಡ್ಡದಲ್ಲಿ ಪತಿ-ಪತ್ನಿ ಸಜೀಹ ದಹನ!! Read More »

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಅಚಲ್ ಬಿಳಿನೆಲೆ ಅವರು, ಜ. 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಒತ್ತಡ ನಿರ್ವಹಣೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಇದೇ

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7 Read More »

ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ

ಕಾಣಿಯೂರು: ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಜ. 27ರಂದು ದೈವಸ್ಥಾನದ ಆವರಣದಲ್ಲಿ ನಡೆಯಿತು. ಮಾ. 9ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಕಟ್ಟತ್ತಾರು ಕಟ್ಟೆಯಲ್ಲಿ ಗಣಹೋಮ ನಡೆದು, ಸಂಜೆ ಅನ್ಯಾಡಿ ಗ್ರಾಮ ಚಾವಡಿಯಿಂದ ಭಂಡಾರ ಹೊರಟು ಕಟ್ಟತ್ತಾರು ಕಟ್ಟೆಯಲ್ಲಿ ನೇಮೋತ್ಸವ ನಡೆಯಲಿದೆ. ಇದೇ ಸಂದರ್ಭ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಪೂರ್ವತಯಾರಿ ನಡೆಯುತ್ತಿದ್ದು, ಯಶಸ್ಸಿಗಾಗಿ

ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ Read More »

ದೈವ ನರ್ತನದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದ ನರ್ತಕ!! | ನರ್ತಕನ ಮಗನಿಗೆ ದೈವ ನೀಡಿತು ಅಭಯ!!

ಕಾಣಿಯೂರು: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದ ದೈವ ನರ್ತಕನ ಪುತ್ರ ಮೋನಪ್ಪ ಅವರಿಗೆ ದೈವ ಅಭಯ ನೀಡಿದೆ. ಚಾರ್ವಾಕದ ಇಡ್ಯಡ್ಕ ತರವಾಡು ಮನೆಯಲ್ಲಿ ಕೆಲ ಸಮಯಗಳ ಹಿಂದೆ ಶಿರಾಡಿ ದೈವದ ನರ್ತನ ಸೇವೆ ಮಾಡುತ್ತಿದ್ದ ಕಾಂತು ಅಜಿಲ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು. ದೈವ ನರ್ತನದ ವೇಳೆಯೇ ನರ್ತಕ ಸಾವಿಗೀಡಾದ್ದದ್ದು ಹಲವು ಪ್ರಶ್ನೆಗಳಿಗೆ ಕಾರಣವಾಗಿತ್ತು. ಇದೀಗ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆ ಸಮೀಪಿಸುತ್ತಿದೆ. ಈ ಸಂದರ್ಭ ನಡೆಯುವ ದೈವಗಳ ನೇಮೋತ್ಸವದ ವಿಚಾರ ಪ್ರಸ್ತಾಪವಾದಾಗ,

ದೈವ ನರ್ತನದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದ ನರ್ತಕ!! | ನರ್ತಕನ ಮಗನಿಗೆ ದೈವ ನೀಡಿತು ಅಭಯ!! Read More »

ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯೋಣ: ದಿನೇಶ್ ಗುಂಡೂರಾವ್

ಮಂಗಳೂರು: ಪಿತೃವಾಕ್ಯ ಪರಿಪಾಲನೆಯ ಮೂಲಕ ಹಾಗೂ ಜನರ ಸಂಕಷ್ಟಗಳನ್ನು ಬಗೆಹರಿಸುವ ಮೂಲಕ ರಾಮ ಹೇಗೆ ಆದರ್ಶ ಪುರುಷನಾದನೋ ಅದೇ ರೀತಿ ರಾಮನ ಆದರ್ಶದಂತೆ ನಾಡಿನ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ನಾವು ನಿಜವಾದ ರಾಮರಾಜ್ಯದ ಆಡಳಿತ ನೀಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶುಕ್ರವಾರ ನಗರದ ನೆಹರು ಮೈದಾನದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಸಂದೇಶ

ಸಂವಿಧಾನದ ಮೂಲ ಆಶಯವನ್ನು ಎತ್ತಿ ಹಿಡಿಯೋಣ: ದಿನೇಶ್ ಗುಂಡೂರಾವ್ Read More »

ದ.ಕ.ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ | ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.  ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್ ಹಾಸನ, ರಾಜ್ಯ ಸಂಘದ ಉಪಾಧ್ಯಕ್ಷ ಶಿವರಾಮೇ ಗೌಡ, ರಾಜ್ಯ ಸಂಘದ ಕಾರ್ಯದರ್ಶಿ  ಶ್ರೀರಾಮ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಾವಿತ್ರಿ ರಾಮ್ ಕಣೆಮರಡ್ಕ ಹಾಗೂ ಜಿಲ್ಲಾ ಸಂಘದ ನಿಕಟಪೂರ್ವ ಅಧ್ಯಕ್ಷ ವಿನ್ಸೆಂಟ್ ಅವರ ಉಪಸ್ಥಿತಿಯಲ್ಲಿ ಕೆಲವೊಂದು ವಿಚಾರ ವಿನಿಮಯ ನಡೆಸಲಾಯಿತು. ಜಿಲ್ಲಾ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಜಿಲ್ಲಾ ಸಂಘದ ಗೌರವಾಧ್ಯಕ್ಷರಾಗಿ

ದ.ಕ.ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಸಭೆ | ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top