ಆ.13: ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ದಿನ-2023” | ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಯೋಜನೆ
ಪುತ್ತೂರು: ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶನದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಮತ್ತು ಯುವ, ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ “ಆಟಿಡೊಂಜಿ ದಿನ-2023” ಆ.13 ಭಾನುವಾರ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಗತಿಪರ ಕೃಷಿಕ ಅರುಣ್ ಕುಮಾರ್ ರೈ ಆನಾಜೆ, […]









