ವಿದೇಶ

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ!

ಲಂಡನ್: ಕಳೆದ ತಿಂಗಳು ನಾಪತ್ತೆಯಾಗಿದ್ದ ಭಾರತ ಮೂಲದ 23 ವರ್ಷದ ವಿದ್ಯಾರ್ಥಿಯ ಮೃತದೇಹ ಇಲ್ಲಿನ ಥೇಮ್ಸ್ ನದಿಯಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಮಿತ್ಕುಮಾರ್ ಪಟೇಲ್ ಎಂದು ಗುರುತಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ಬಂದಿದ್ದರು. ನವೆಂಬರ್ 17ರಿಂದ ಆತ ಕಾಣೆಯಾಗಿದ್ದ. ಪೂರ್ವ ಲಂಡನ್‌ನ ಕ್ಯಾನರಿ ವಾರ್ಫ್ ಪ್ರದೇಶದ ಬಳಿಯ ಥೇಮ್ಸ್ ನದಿಯಲ್ಲಿ ಪತ್ತೆಯಾದ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಸಾವು ಸಂಶಯಾಸ್ಪದವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮೆಲ್ಲರಿಗೂ ದುಃಖವಾಯಿತು. ಆದ್ದರಿಂದ, ನಾವು ಅವರ ಕುಟುಂಬಕ್ಕೆ ಸಹಾಯ ಮಾಡಲು ಮತ್ತು […]

ಲಂಡನ್: ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ಥೇಮ್ಸ್ ನದಿಯಲ್ಲಿ ಪತ್ತೆ! Read More »

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!!

ಗಾಜಾ: ಅಕ್ಟೋಬರ್ 7ರಿಂದ ನಡೆಯುತ್ತಿರುವ ಇಸ್ರೇಲಿ ಆಕ್ರಮಣದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 14,854 ಕ್ಕೆ ಏರಿದೆ. ಇದರಲ್ಲಿ 5,850 ಮಕ್ಕಳು ಸೇರಿದ್ದಾರೆ ಎಂದು ಗಾಜಾಪಟ್ಟಿಯಲ್ಲಿರುವ ಹಮಾಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ದಾಳಿಯಲ್ಲಿ ಮೃತಪಟ್ಟವರನ್ನು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿದೆ.  ಇಸ್ರೇಲ್‌ ನಡೆಸುತ್ತಿರುವ ವಾಯು ಮತ್ತು ಭೂ ದಾಳಿಯಿಂದಾಗಿ ಪ್ರಸ್ತುತ ಅಂಕಿಅಂಶಗಳನ್ನು ಪಡೆಯುವುದು ಸವಾಲಿನ ಕೆಲಸವಾಗಿದೆ. ರಮಲ್ಲಾದಲ್ಲಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಸೋಮವಾರ 12,700 ಮಂಗಳವಾರ 13,000ಕ್ಕೂ ಹೆಚ್ಚು ಸಾವು ನೋವುಗಳನ್ನು ವರದಿ ಮಾಡಿತ್ತು. ಗಾಜಾ ಪಟ್ಟಿಯ ಮೂಲಗಳಿಂದ ಡೇಟಾವನ್ನು

ಗಾಜಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ!! | ಮೃತಪಟ್ಟವರಲ್ಲಿ 5850 ಮಕ್ಕಳು!! Read More »

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ!

ನವದೆಹಲಿ: ತಾಲಿಬಾನ್ ಆಡಳಿತವಿರುವ ಅಫಘಾನಿಸ್ತಾನವು ಭಾರತದಲ್ಲಿರುವ ರಾಯಭಾರ ಕಚೇರಿಯ ಕಾರ್ಯಾಚರಣೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್‌ 30ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ರಾಯಭಾರ ಕಚೇರಿಯನ್ನು ಈಗ ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಈ ನಡುವೆ ತಾಲಿಬಾನ್ ನೀಡಿರುವ ಆರೋಪಗಳು, ಅದರ ದ್ವಂದ್ವ ನಿಲುವನ್ನು ಸೂಚಿಸುವಂತಿದೆ. ಮೊದಲು “ಸಾಕಷ್ಟು ಸಿಬ್ಬಂದಿ ಕೊರತೆ ಇದೆ. ಅಲ್ಲದೇ, ರಾಯಭಾರ ಕಚೇರಿ ನಿರ್ವಹಣೆಗೆ ಸಾಕಷ್ಟು ದುಡ್ಡಿಲ್ಲ” ಎಂದು ಹೇಳಿತ್ತು. ಆದರೆ ಈಗ “ಭಾರತ ಸರ್ಕಾರದಿಂದ ಎದುರಾಗುತ್ತಿರುವ ಸವಾಲುಗಳಿಂದಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಆರೋಪಿಸಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಅಫಘಾನಿಸ್ತಾನವು

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ! Read More »

ಕೋವಿಡ್ ನಿಯಮ ಕೈಬಿಟ್ಟ ಚೀನಾದಲ್ಲಿ ಹೊಸ ಮಾದರಿ ಜ್ವರ ಪತ್ತೆ!!

ಬೀಜಿಂಗ್: ಚೀನಾದಲ್ಲಿ ಹಲವಾರು ಮಂದಿಗೆ, ಹೆಚ್ಚಾಗಿ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಮಾದರಿಯ ಸಮಸ್ಯೆ ಉಂಟಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಈಗಾಗಲೇ ಚೀನಾದಿಂದ ಈ ಸಂದೇಹಾಸ್ಪದ ಆರೋಗ್ಯ ಸಮಸ್ಯೆಯ ಬಗ್ಗೆ ವರದಿಯನ್ನು ಕೇಳಿದೆ. ವರದಿಗಳ ಪ್ರಕಾರ ಚೀನಾದ ಆಸ್ಪತ್ರೆಗಳು ಶ್ವಾಸಕೋಶದ ಸೋಂಕು ಸಂಬಂಧಿ ಸಮಸ್ಯೆ ಎದುರಿಸುತಿರುವ ಮಕ್ಕಳಿಂದ ತುಂಬಿ ತುಳುಕುತ್ತಿದೆ. ನವೆಂಬರ್‌ 12ರಂದು ನ್ಯಾಷನಲ್‌ ಹೆಲ್ತ್‌ ಕಮಿಷನ್‌ ಅಧಿಕಾರಿಗಳು ಚೀನಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಆರೋಗ್ಯ ಸಮಸ್ಯೆಗೆ ದೇಶದಲ್ಲಿ ಕೋವಿಡ್‌ ನಿರ್ಬಂಧಗಳನ್ನು ಕೈಬಿಟ್ಟರುವುದೇ ಕಾರಣ

ಕೋವಿಡ್ ನಿಯಮ ಕೈಬಿಟ್ಟ ಚೀನಾದಲ್ಲಿ ಹೊಸ ಮಾದರಿ ಜ್ವರ ಪತ್ತೆ!! Read More »

50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ, 4 ದಿನ ಕದನ ವಿರಾಮ!

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್‌ ಅನುಮೋದಿಸಿದೆ. ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು ಕೆಲ ದಿನಗಳಿಂದ ಹೇಳುತ್ತಿದ್ದರು. ಈಗ ಅದು ನಿಜವಾಗಿದೆ. ನಾಲ್ಕು ದಿನಗಳಲ್ಲಿ 50 ಮಹಿಳೆಯರು ಮತ್ತು ಮಕ್ಕಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಸಮಯದಲ್ಲಿ ಯುದ್ಧ ವಿರಾಮ ನೀಡಲಾಗುವುದು ಎಂದು

50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಒಪ್ಪಿಗೆ, 4 ದಿನ ಕದನ ವಿರಾಮ! Read More »

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ

ಮುಂಬೈ ಭಯೋತ್ಪಾದಕ ದಾಳಿ(26/11)ಯ 15ನೇ ವರ್ಷಾಚರಣೆಗೂ ಮುನ್ನವೇ ಮಹತ್ವದ ಬೆಳವಣಿಗೆ ಎಂಬಂತೆ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಇಸ್ರೇಲ್ ಅಧಿಕೃತವಾಗಿ ಘೋಷಿಸಿದೆ ಎಂದು ವರದಿಯಾಗಿದೆ. ಇದೊಂದು ಮಾರಣಾಂತಿಕ ಹಾಗೂ ಖಂಡನಾರ್ಹ ಭಯೋತ್ಪಾದಕ ಸಂಘಟನೆಯಾಗಿದೆ ಎಂದು ತಿಳಿಸಿರುವ ಇಸ್ರೇಲ್‌, ಲಷ್ಕರ್‌ ಇ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಆದರೆ ಈ ಬಗ್ಗೆ ಭಾರತದಿಂದ ಯಾವುದೇ ಮನವಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತ ಸರ್ಕಾರ ಯಾವುದೇ ವಿನಂತಿ ಮಾಡದಿದ್ದರೂ

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ Read More »

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ!

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ! Read More »

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!!

ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್‌ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ, ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ ಹಡಗಿನಲ್ಲಿ ಯಾವುದೇ ಭಾರತೀಯರು ಇಲ್ಲ. ಅಲ್ಲದೆ

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!! Read More »

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ

ನೇಪಾಳ: ನೇಪಾಳದ ಕಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಮಂದಿ ಸಾವನ್ನಪ್ಪಿದ್ದು, 140 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ದೆಹಲಿ-ಎನ್‌ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪವು ನ.3ರ ರಾತ್ರಿ 11:32 ಕ್ಕೆ ಸಂಭವಿಸಿದೆ. ಪರ್ವತ ಶ್ರೇಣಿಗಳಿಂದ ಕೂಡಿದ ಈ ಪ್ರದೇಶದಲ್ಲಿ ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ನೇಪಾಳದಲ್ಲಿ ಪ್ರಬಲ ಭೂಕಂಪ | 128 ಮಂದಿ ಮೃತ್ಯು, 140 ಮಂದಿಗೆ ಗಾಯ Read More »

ಚೀನಾದಲ್ಲಿ ನಡೆದ 19ನೇ ಏಷಿಯಾ ಚಾಂಪಿಯನ್ ಶಿಪ್: ದೇಶದ ಕೀರ್ತಿ ಪತಾಕೆ ಹಾರಿಸಿದ ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ. ಗಾಯತ್ರಿ

ಪುತ್ತೂರು: ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ ಗಾಯತ್ರಿ ಚೀನಾದ ನಡೆದ 19ನೇ ಏಷಿಯಾ ಸ್ಟೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಪಡೆದು ದೇಶದ ಕೀರ್ತಿ ಪತಾಕೆನ್ನು ಹಾರಿಸಿದ್ದಾರೆ. ಭಾರತೀಯ ಜೂನಿಯರ್ ಮಹಿಳಾ ತಂಡವನ್ನು ಪ್ರತಿನಿಧಿಸಿದ್ದು, ಅ.22ರಿಂದ 28ರವರೆಗೆ ಚೀನಾ ದೇಶದ ಬಿಧಾಯಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡ 3ನೇ ಸ್ಥಾನ ಪಡೆದು ಕಂಚಿನ ಪದಕ ಪಡೆದುಕೊಂಡಿತ್ತು. ಕರ್ನಾಟಕದ ಐವರು ಆಟಗಾರರು ಸೇರಿ ಒಟ್ಟು 12 ಆಟಗಾರರೊಂದಿಗಿನ ಈ ತಂಡದಲ್ಲಿ ಪುತ್ತೂರಿನ ಮರೀಲ್ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಪ್ರಜ್ಞಾ

ಚೀನಾದಲ್ಲಿ ನಡೆದ 19ನೇ ಏಷಿಯಾ ಚಾಂಪಿಯನ್ ಶಿಪ್: ದೇಶದ ಕೀರ್ತಿ ಪತಾಕೆ ಹಾರಿಸಿದ ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ. ಗಾಯತ್ರಿ Read More »

error: Content is protected !!
Scroll to Top