ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ
ಪೇಷಾವರ : ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್‍ಖೆಲಾ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಮದುವೆಯ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ. ರಾತ್ರಿ ವೇಳೆ ಮನೆಗೆ ನುಗ್ಗಿದ ಗುಂಪು, ನಿದ್ದೆಯಲ್ಲಿದ್ದ 9 ಮಂದಿಯನ್ನು ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿರುವುದಾಗಿ ವರದಿಯಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಾಂತೀಯ ಅರೆಸೇನಾ ಪಡೆ […]
ವಾಯುವ್ಯ ಪಾಕಿಸ್ತಾನದಲ್ಲಿ ಒಂದೇ ಕುಟುಂಬದ 9 ಸದಸ್ಯರ ಗುಂಡಿಕ್ಕಿ ಹತ್ಯೆ Read More »