ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗ | ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ತಂಡ
ರಷ್ಯಾ: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ, ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಹಲವು ಕಡೆ ಉನ್ನತ ಮಟ್ಟದ ಸಭೆ, ವೇದಿಕೆಗಳಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ. ರಷ್ಯಾಕ್ಕೆ ಆಗಮಿಸಿದ ಐವರು ಸಂಸದರನ್ನು ಒಳಗೊಂಡ ಈ ನಿಯೋಗವನ್ನು ಅಲ್ಲಿನ ಭಾರತೀಯ ರಾಯಭಾರಿ ಅಧಿಕಾರಿಗಳು ಬರಮಾಡಿಕೊಂಡಿದ್ದರು, ನಂತರ ರಷ್ಯಾದಲ್ಲಿನ ಭಾರತದ ರಾಯಭಾರಿ ವಿನಯ್ ಕುಮಾರ್ ಅವರು ಸರ್ವಪಕ್ಷ ಸಂಸದೀಯ ನಿಯೋಗದ […]









