ವಿದೇಶ

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ

ಅಮೆರಿಕ, ಫ್ರಾನ್ಸ್‌ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದ ಟೆಲ್‌ ಅವಿವ್‌: ಸುಮಾರು ಒಂದು ವರ್ಷದಿಂದ ನಡೆಯುತ್ತಿರುವ ಇಸ್ರೇಲ್‌-ಲೆಬನಾನ್‌ ನಡುವಿನ ಘನಘೋರ ಸಮರ ಕೊನೆಗೂ ಮುಕ್ತಾಯವಾಗಿದೆ. ಇಸ್ರೇಲ್‌ನ ಭದ್ರತಾ ಕ್ಯಾಬಿನೆಟ್ ಅಮೆರಿಕ ಮತ್ತು ಫ್ರಾನ್ಸ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 7.30ರಿಂದಲೇ ಕದನ ವಿರಾಮ ಜಾರಿಗೆ ಬಂದಿದೆ. ಕದನ ವಿರಾಮ ಒಪ್ಪಂದದ ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ […]

ಕೊನೆಗೂ ಇಸ್ರೇಲ್‌-ಲೆಬನಾನ್‌ ಸಮರಕ್ಕೆ ವಿರಾಮ Read More »

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ

ಇಮ್ರಾನ್‌ ಖಾನ್‌ ಬೆಂಬಲಿಗರಿಂದ ಇಸ್ಲಾಮಾಬಾದ್‌ ಚಲೋ- ಐವರು ಪೊಲೀಸರು ಬಲಿ ಇಸ್ಲಾಮಾಬಾದ್‌: ಬಾಂಗ್ಲಾದೇಶದ ಬಳಿಕ ಈಗ ಇನ್ನೊಂದು ನೆರೆರಾಷ್ಟ್ರ ಪಾಕಿಸ್ಥಾನದಲ್ಲೂ ಆಂತರಿಕ ದಂಗೆ ಶುರುವಾಗಿದೆ. ಮಾಜಿ ಪ್ರಧಾನಿ ಪ್ರಸ್ತುತ ಜೈಲಿನಲ್ಲಿರುವ ಇಮ್ರಾನ್‌ ಖಾನ್‌ ಪಕ್ಷದ ಸಾವಿರಾರು ಬೆಂಬಲಿಗರು ರಾಜಧಾನಿ ಇಸ್ಲಾಮಾಬಾದ್‌ನತ್ತ ಮೋರ್ಚಾ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಉಂಟಾದ ಘರ್ಷಣೆಯಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು ನೂರಾರು ಮಂದಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ. ಇಮ್ರಾನ್‌ ಖಾನ್‌ ಅವರ ಹೆಂಡತಿ ಬುಶ್ರಾ ಬೀಬಿ ಖಾನ್‌ ನೇತೃತ್ವದಲ್ಲಿ ನಡೆಯುತ್ತಿರುವ ಮೋರ್ಚಾ ಭಾನುವಾರ

ಬಾಂಗ್ಲಾದೇಶದ ಬಳಿಕ ಪಾಕಿಸ್ಥಾನದಲ್ಲೂ ಶುರುವಾಯಿತು ದಂಗೆ Read More »

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ

ಹಿಂದುಗಳ ಪರವಾಗಿ ಹೋರಾಡುತ್ತಿದ್ದ ಧಾರ್ಮಿಕ ನಾಯಕನನ್ನು ಕ್ಷುಲ್ಲಕ ಕೇಸ್‌ ಹಾಕಿ ಬಂಧಿಸಿದ ಪೊಲೀಸರು ಢಾಕಾ: ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲ, ಇಸ್ಕಾನ್ ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರ ಬಂಧನವನ್ನು ವಿರೋಧಿಸಿ ಹಿಂದುಗಳು ನಿನ್ನೆ ರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾದ ಹಲವೆಡೆ ಹಿಂದುಗಳು ಬೀದಿಗಿಳಿದು ಮೆರವಣಿಗೆ, ಧರಣಿ ನಡೆಸಿದ್ದು, ಈ ಸಂದರ್ಭದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ನಿನ್ನೆ ಸಂಜೆ ಢಾಕಾ ವಿಮಾನ

ಢಾಕಾ : ಚಿನ್ಮಯ್‌ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನ ವಿರೋಧಿಸಿ ಭಾರಿ ಪ್ರತಿಭಟನೆ Read More »

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು

ಇಸ್ಲಾಮಾನಾದ್: ಪಾಕಿಸ್ಥಾನದಲ್ಲಿ ನಾಗರಿಕರನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, 50 ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದ ಕರ‍್ರಂ ಜಿಲ್ಲೆಯಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಪರಾಚಿನಾರ್‌ನಿಂದ ಖೈಬರ್ ಪಖ್ತೂನ್‌ಖ್ವಾದ ರಾಜಧಾನಿ ಪೇಷಾವರ್ ಕಡೆಗೆ ಹೊರಟಿದ್ದ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ

ವಾಹನಗಳ ಮೇಲೆ ಉಗ್ರರ ದಾಳಿ : 50ಕ್ಕೂ ಹೆಚ್ಚು ಮಂದಿ ಸಾವು Read More »

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು

ನ್ಯೂಯಾರ್ಕ್ : ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಕೇಸ್‌ ದಾಖಲಾಗಿದ್ದು, ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅದಾನಿ ವಿರುದ್ಧ ಕೇಳಿಬಂದಿದೆ. ಕೆನಡಾದ ಪೆನ್ಶನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಸೈರಿಲ್ ಕೆಬನೆಸ್ ಅವರೂ ಆರೋಪಿಗಳ ಪೈಕಿ ಒಬ್ಬರು. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು Read More »

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ

ಹೊಸದಿಲ್ಲಿ : ನೈಜೀರಿಯಾ ಸರ್ಕಾರ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಆ ಮೂಲಕ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಬಳಿಕ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ Read More »

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ಥಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಎರಡು ಪ್ರಬಲ ಬಾಂಬ್‌ಗಳು ಸ್ಫೋಟಿಸಿ ಹಲಸು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಸಾವುನೋವಿನ ನಿಖರ ಅಂಕಿಆಂಶ ಇನ್ನೂ ಬಹಿರಂಗಗೊಂಡಿಲ್ಲ.ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಬಳಿ ಎರಡು ಬಾಂಬ್ ಸ್ಫೋಟಗೊಂಡಿವೆ. ಪೇಶಾವರಕ್ಕೆ ಹೋಗುವ ಎಕ್ಸ್‌ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು. ಇದರಿಂದಾಗಿ ನಿಲ್ದಾಣ ಭಾರಿ ಜನಸಂದಣಿಯಿತ್ತು. ಈ ವೇಳೆ ಸ್ಫೋಟ

ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ : 30 ಮಂದಿ ಸಾವು Read More »

ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ

ತವರು ರಾಜ್ಯ ನ್ಯೂಯಾರ್ಕ್‌ನಲ್ಲಿ ಟ್ರಂಪ್‌ಗೆ ಮುಖಭಂಗ ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸುವ ಸನಿಹದಲ್ಲಿದ್ದಾರೆ. ಮಧ್ಯಾಹ್ನದ ತನಕದ ಫಲಿತಾಂಶದಲ್ಲಿ ಟ್ರಂಪ್‌ ಗೆಲುವಿನತ್ತ ನಾಗಾಲೋಟದಲ್ಲಿದ್ದಾರೆ. ಎದುರಾಳಿ ಕಮಲಾ ಹ್ಯಾರಿಸ್‌ ಕೆಲವು ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿ ಗೆಲುವಿನಿಂದ ದೂರ ಸರಿಯುತ್ತಿದ್ದಾರೆ. ಚುನಾವಣೆಯಲ್ಲಿ ಹಿನ್ನಡೆಯಾಗುತ್ತಿದ್ದಂತೆ ಡೆಮಾಕ್ರಟಿಕ್‌ ಅಭ್ಯರ್ಥಿ ಕಮಲಾ ಹ್ಯಾರಿಸ್‌ ತಮ್ಮ ಚುನಾವಣಾ ಭಾಷಣವನ್ನು ರದ್ದುಗೊಳಿಸಿದ್ದಾರೆ.ಅನಿಶ್ಚಿತ ಎಂದು ಭಾವಿಸಲಾಗಿದ್ದ ಎಲ್ಲ ಏಳು ರಾಜ್ಯಗಳಲ್ಲಿ ಟ್ರಂಪ್ ಎದುರಾಳಿ ಕಮಲಾ ಹ್ಯಾರಿಸ್

ಅಮೆರಿಕ ಚುನಾವಣೆ : ಗೆಲುವಿನತ್ತ ಡೊನಾಲ್ಡ್‌ ಟ್ರಂಪ್‌ ನಾಗಾಲೋಟ; ಕಮಲಾ ಹ್ಯಾರಿಸ್‌ಗೆ ಹಿನ್ನಡೆ Read More »

ದೇವಸ್ಥಾನಕ್ಕೆ ನುಗ್ಗಿ ಹಿಂದುಗಳ ಮೇಲೆ ಹಲ್ಲೆ ನಡೆಸಿದ ಉಗ್ರರು

ಖಲಿಸ್ಥಾನಿ ಉಗ್ರರ ಕೃತ್ಯಕ್ಕೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ವಿಷಾದ ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ಥಾನಿ ಉಗ್ರರ ಗುಂಪೊಂದು ದಾಳಿ ನಡೆಸಿದೆ.ಖಲಿಸ್ಥಾನಿ ಧ್ವಜ ಹಿಡಿದಿದ್ದ ಉಗ್ರರ ಗುಂಪು ದೇವಸ್ಥಾನಕ್ಕೆ ನುಗ್ಗಿ ಭಕ್ತರ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದೆ. ಈ ಹಲಕ್ಲೆಯ ವೀಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ವೀಡಿಯೊಲ್ಲಿ ಖಲಿಸ್ಥಾನಿ ಧ್ವಜ ಹಿಡಿದ ಗುಂಪು

ದೇವಸ್ಥಾನಕ್ಕೆ ನುಗ್ಗಿ ಹಿಂದುಗಳ ಮೇಲೆ ಹಲ್ಲೆ ನಡೆಸಿದ ಉಗ್ರರು Read More »

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ

ಸೇನಾನೆಲೆಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ; ಭೀಕರ ಸ್ಫೋಟ ಟೆಹ್ರಾನ್‌: ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ. ದಾಳಿಯಿಂದಾದ ಸಾವುನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್‌ನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ. ಇರಾನಿನ ರಾಜಧಾನಿ ಟೆಹ್ರಾನ್‌ನಲ್ಲಿ ಭೀಕರ ಸ್ಫೋಟದ ಸದ್ದು ಕೇಳಿಸಿದೆ. ಕನಿಷ್ಠ ಏಳು ಸ್ಫೋಟಗಳು ಮುಂಜಾನೆ ವೇಳೆ ಸಂಭವಿಸಿವೆ.

ಇರಾನ್‌ ರಾಜಧಾನಿ ಟೆಹ್ರಾನ್‌ ಮೇಲೆ ಇಸ್ರೇಲ್‌ ದಾಳಿ Read More »

error: Content is protected !!
Scroll to Top