ದೇಶ

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ

ಫೋನ್‌ ಕರೆ ಮಾಡಿ ಬೆದರಿಕೆಯೊಡ್ಡಿದ ದುಷ್ಕರ್ಮಿ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆಯೊಡ್ಡಿದ ಬಳಿಕ ಕಚೇರಿಗೆ ಬಿಗು ಭದ್ರತೆ ಒದಗಿಸಲಾಗಿದೆ.ಶನಿವಾರ ಅಜ್ಞಾತ ವ್ಯಕ್ತಿಯೊಬ್ಬ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಫೋನ್‌ ಮಾಡಿ ಆರ್‌ಎಸ್‌ಎಸ್‌ ಕಚೇರಿಯನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದಾನೆ. ಕೂಡಲೇ ಪೊಲೀಸರು ಬಾಂಬ್‌ ಶೋಧ ತಂಡ ಮತ್ತು ಶ್ವಾನ ಪಡೆಯೊಂದಿಗೆ ತೆರಳಿ ಆರ್‌ಎಸ್‌ಎಸ್‌ ಕಚೇರಿಯನ್ನು ಶೋಧಿಸಿ ಬಳಿಕ ಬಿಗು ಭದ್ರತೆ ಒದಗಿಸಿದ್ದಾರೆ. ಕಚೇರಿ ಸುತ್ತ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.

ಆರ್‌ಎಸ್‌ಎಸ್‌ ಕಚೇರಿ ಸ್ಫೋಟಿಸುವ ಬೆದರಿಕೆ Read More »

ಹೊಸ ವರ್ಷ ಮತ್ತು ಭಾರತ

2022 ಅಂತ್ಯವಾಗುತ್ತಿದೆ. 2023 ಕಾಲಿಡಲು ಕ್ಷಣಗಣನೆ ಶುರುವಾಗಿದೆ. ಕೊರೋನಾದ ಭಯವನ್ನು ಒಳಗೊಳಗೇ ಅದುಮಿಕೊಂಡು, ಕ್ಯಾಲೆಂಡರ್ ಬದಲಿಸಲು ಸಿದ್ಧರಾಗಿದ್ದೇವೆ. ಇದು ಸಂಭ್ರಮಿಸುವ ಸಮಯ ಅಲ್ಲದೇ ಇದ್ದರೂ, ವಿಶ್ವಾದ್ಯಂತ ಹೊಸ ವರ್ಷವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲು ಸಜ್ಜಾಗಿದ್ದೇವೆ. ವಿಶ್ವಾದ್ಯಂತ ಏನೇ ನಡೆಯಲಿ, ಭಾರತದ ಸ್ಥಿತಿಗತಿ ಮಾತ್ರ ಭಿನ್ನ. ಇಲ್ಲಿನ ಮಣ್ಣಿನ ಗುಣವೋ ಏನೋ, ಭಾರತದಲ್ಲಿ ಹೊಸ ವರ್ಷಾಚರಣೆಗೆ ತನ್ನದೇ ಆದ ಅರ್ಥವಿದೆ. ಹೊಸ ವರ್ಷ ಎಂದರೆ ಹೊಸತನ. ಮನುಷ್ಯರಿಗೆ ಪ್ರತಿದಿನವೂ ಹೊಸತನವೇ. ಆದರೆ ಪ್ರಕೃತಿಗೆ… ಮನುಷ್ಯನ ದಿನವೊಂದರಲ್ಲಿ ಆಗುವ ಬದಲಾವಣೆಗಳು, ಪ್ರಕೃತಿಯಲ್ಲಿ

ಹೊಸ ವರ್ಷ ಮತ್ತು ಭಾರತ Read More »

ಬಿಜೆಪಿಗೆ 351.50 ಕೋ.ರೂ. ದೇಣಿಗೆ

ಒಂದು ವರ್ಷದಲ್ಲಿ ಒಟ್ಟು ದೇಣಿಗೆಯ ಶೇ.72.17 ಬಿಜೆಪಿಗೆ ಹೊಸದಿಲ್ಲಿ : ಬಿಜೆಪಿ ಈ ವರ್ಷ ಬಿಜೆಪಿಯು ಚುನಾವಣಾ ಟ್ರಸ್ಟ್‌ಗಳಿಂದ 351.50 ಕೋಟಿ ರೂಪಾಯಿಗಳನ್ನು ಸ್ವೀಕರಿಸಿದೆ. ಇದು ರಾಜಕೀಯ ಪಕ್ಷಗಳಿಗೆ ಸಂದಾಯವಾದ ಒಟ್ಟು ದೇಣಿಗೆಯ ಶೇ.72.17 ಆಗುತ್ತದೆ. ಬಿಜೆಪಿ 2021-22ನೇ ಸಾಲಿನಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಸ್ವೀಕರಿಸಿದೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ತಿಳಿಸಿದೆ. ಕೆಲ ಹೊಸ ಪಕ್ಷಗಳಿಗೆ ಹೋಲಿಕೆ ಮಾಡಿದರೆ, ದೇಶದ ಹಳೆ ಪಕ್ಷವಾದ ಕಾಂಗ್ರೆಸ್‌ ಅತಿ ಕಡಿಮೆ

ಬಿಜೆಪಿಗೆ 351.50 ಕೋ.ರೂ. ದೇಣಿಗೆ Read More »

2024ರಲ್ಲೂ ರಾಹುಲ್‌ ಗಾಂಧಿಯೇ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ

ಹಿರಿಯ ನಾಯಕ ಕಮಲನಾಥ್‌ ಘೋಷಣೆ ಹೊಸದಿಲ್ಲಿ : 2024ರ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಹೇಳಿದ್ದಾರೆ. ದೇಶಾದ್ಯಂತ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆಯನ್ನು ಮುನ್ನಡೆಸಿದ್ದಕ್ಕಾಗಿ ಕಮಲನಾಥ್ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ, ಅವರು ದೇಶದ ಸಾಮಾನ್ಯ ಜನರಿಗಾಗಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ಕೇವಲ ಪ್ರತಿಪಕ್ಷಗಳ ಮುಖವಾಗಿರುವುದಿಲ್ಲ.

2024ರಲ್ಲೂ ರಾಹುಲ್‌ ಗಾಂಧಿಯೇ ಪ್ರತಿಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ Read More »

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು

ತಲೆಗೆ ಗಾಯ, ಕಾಲು, ಬೆನ್ನುಮೂಳೆ ಮುರಿತ ಮುಂಬಯಿ : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಸ್ಥಿತಿಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಂತೆಯೇ ಪಂತ್ ಆರೋಗ್ಯ ಕುರಿತು ಬಿಸಿಸಿಐ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ರಿಷಬ್ ಪಂತ್ ಉತ್ತರಖಂಡದ ರೂರ್ಕಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಸದ್ಯ ಪಂತ್ ಆರೋಗ್ಯ ಸ್ಥಿರವಾಗಿದೆ. ಗಾಯದ ಪ್ರಮಾಣ ಹೆಚ್ಚಿದೆ. ಇದೀಗ ರಿಷಬ್ ಪಂತ್ ಅವರನ್ನು ಡೆಹ್ರಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಂತ್ ಕುಟುಂಬದ

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು Read More »

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ತನ್ನ ತಾಯಿ ಯಶೋದಾಬೆನ್ ಅವರ ಅಂತ್ಯಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ನೆರವೇರಿಸಿದರು. ಡಿಸೆಂಬರ್ ೩೦ರ ಬೆಳಗ್ಗಿನ ಜಾವ ೩.೩೯ಕ್ಕೆ ಯಶೋದಾಬೆನ್ (೧೦೦ ವ.) ಅಹಮದಾಬಾದ್ ಯು.ಎನ್. ಮೆಹ್ಯಾ ಇನ್ ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆ್ಯಂಡ್ ರೀಸರ್ಚ್ ಸೆಂಟರಿನಲ್ಲಿ ಕೊನೆಯುಸಿರೆಳೆದರು. ಅಹಮದಾಬಾದಿನ ಗಾಂಧಿನಗರದಲ್ಲಿ ಚಿತಾಗಾರದಲ್ಲಿ ಬೆಳಿಗ್ಗೆ ಯಶೋದಾಬೆನ್ ಅವರ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಗೆ ಮುನ್ನ ಯಶೋದಾಬೆನ್ ಅವರ ಶರೀರದ ಅಂತಿಮಯಾತ್ರೆಗೆ ಪ್ರಧಾನಿ ಮೋದಿ ಅವರು ಹೆಗಲುಕೊಟ್ಟು, “ಊರಿಗೆ ಅರಸನಾದರೂ ತಾಯಿಗೆ ಮಗ” ಎನ್ನುವ

ಊರಿಗೆ ಅರಸನಾದರೂ ತಾಯಿಗೆ ಮಗ | ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ Read More »

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು

ಸುಟ್ಟು ಕರಕಲಾದ ಬಿಎಂಡಬ್ಲ್ಯೂ ಕಾರು ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಿಲ್ಲಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪಂತ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಿಷಬ್ ಪಂತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಿತಿ ಗಂಭೀರವಾಗಿದೆ. ತಲೆ, ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ದೆಹಲಿ-ಡೆಹ್ರಾಡೂನ್

ಭೀಕರ ಅಪಘಾತದಲ್ಲಿ ಕ್ರಿಕೆಟಿಗ ರಿಷಬ್‌ ಪಂತ್‌ಗೆ ಗಾಯ;ಏಮ್ಸ್‌ಗೆ ದಾಖಲು Read More »

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ

ಜಗತ್ತಿನೆಲ್ಲೆಡೆಯಿಂದ ಹರಿದುಬರುತ್ತಿದೆ ಸಂತಾಪ ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಸುಕಿನ ಹೊತ್ತು ನಿಧನರಾದರು.ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ

ಪ್ರಧಾನಿ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ‘ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆ್ಯಂಡ್‌ ರೀಸರ್ಚ್‌ ಸೆಂಟರ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ‘ಶ್ರೀಮತಿ ಹೀರಾಬೆನ್‌ ಮೋದಿ

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್‌ ನಿಧನ Read More »

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ

ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ಹೊಸದಿಲ್ಲಿ: ಮುಂದಿನ ತಿಂಗಳು ಭಾರತದಲ್ಲೂ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ಚೀನಾ, ಜಪಾನ್‌ ಸೇರಿದಂತೆ 10ಕ್ಕೂ ಹೆಚ್ಚು ದೇಶಗಳಲ್ಲಿ ಕೊರೊನಾ ಉಲ್ಬಣಿಸಿದೆ. ಭಾರತದಲ್ಲೂ ಹೊಸ ಅಲೆ ಭೀತಿ ಸೃಷ್ಟಿಸಿದ್ದು, ಮುಂದಿನ 40 ದಿನಗಳು ಅತ್ಯಂತ ನಿರ್ಣಾಯಕವಾಗಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್‌ ಸಲಹಾ ಸಮಿತಿ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿ ಮಧ್ಯದಲ್ಲಿ ಸೋಂಕಿನ ಸಂಖ್ಯೆ ತೀವ್ರ

ಮುಂದಿನ ತಿಂಗಳು ಕೊರೊನಾ ನಾಲ್ಕನೇ ಅಲೆ ಸಾಧ್ಯತೆ Read More »

error: Content is protected !!
Scroll to Top