ದೇಶ

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ

ಕೋಲಾಹಲ ಎಬ್ಬಿಸಲಿರುವ ವಕ್ಫ್‌ ಮಸೂದೆ, ಅದಾನಿ ಕೇಸ್‌ ಹೊಸದಿಲ್ಲಿ : ಸಂಸತ್‌ನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿ ಡಿಸೆಂಬರ್​ 20ರವರೆಗೆ ನಡೆಯಲಿದೆ. ವಕ್ಫ್‌ ಮಸೂದೆ, ಅದಾನಿ ಅರೆಸ್ಟ್‌ ವಾರಂಟ್‌ ಮತ್ತಿತರ ವಿಚಾರಗಳು ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸಲಿವೆ. ಸರ್ಕಾರವು ವಕ್ಫ್‌ ತಿದ್ದುಪಡಿ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ, ಲಂಚದ ಆರೋಪದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಯುಎಸ್ ನ್ಯಾಯಾಲಯದಿಂದ ದೋಷಾರೋಪಣೆ ವಿಷಯಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. ಇದಕ್ಕೆ […]

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ Read More »

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ

ಹೊಸ ದಾಖಲೆ ಬರೆದ ಕೆ.ಎಲ್ ರಾಹುಲ್ – ಯಶಸ್ವಿ ಜೈಸ್ವಾಲ್ ಜೋಡಿ ಪರ್ತ್‌: ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ವೈಫಲ್ಯಗಳನ್ನೆಲ್ಲ ಮೆಟ್ಟಿನಿಂತು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಲೆಜೆಂಡ್ ಸುನಿಲ್ ಗವಾಸ್ಕರ್ – ಶ್ರೀಕಾಂತ್ ದಾಖಲೆಯನ್ನು ಮುರಿದು ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ Read More »

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು

ವೋಟ್‌ಬ್ಯಾಂಕ್‌ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್‌ನಿಂದ ವಕ್ಫ್‌ ಮಂಡಳಿ ರಚನೆ ಎಂದು ಮೋದಿ ವಾಗ್ದಾಳಿ ಹೊಸದಿಲ್ಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯ ಭರ್ಜರಿ ಗೆಲುವು ಬಿಜೆಪಿಯ ವಕ್ಫ್‌ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಕೇಂದ್ರ ಸರಕಾರ ವಕ್ಫ್‌ ಕಾಯಿದೆ ತಿದ್ದಪಡಿಯತ್ತ ಮೊದಲ ಹೆಜ್ಜೆಯಿಟ್ಟಿದ್ದು, ಇದಕ್ಕಾಗಿ ಜೆಪಿಸಿಯನ್ನೂ ರಚನೆ ಮಾಡಿದೆ. ಇದೇ ವೇಳೆ ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಲ್ಲಿ ವಕ್ಫ್‌ ಮಂಡಳಿ ಇದ್ದ ಜಮೀನುಗಳನ್ನೆಲ್ಲ ತನ್ನದು ಎಂದು ಹೇಳುತ್ತಿರುವುದು ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ

ಬಿಜೆಪಿಯ ವಕ್ಫ್‌ ಹೋರಾಟಕ್ಕೆ ಬಲ ತುಂಬಿದ ಮಹಾರಾಷ್ಟ್ರದ ಗೆಲುವು Read More »

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌

ಶಿಗ್ಗಾವಿಯಲ್ಲಿ ಪಠಾಣ್‌, ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ, ಸಂಡೂರಿನಲ್ಲಿ ಅನ್ನಪೂರ್ಣ ಜಯಭೇರಿ ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಸುಮಾರು 09 ಸಾವಿರ ಮತಗಳ ಅಂತರದಿಂದ ಪಠಾಟ್‌

ಮೂರು ಕ್ಷೇತ್ರದಲ್ಲೂ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ Read More »

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ

ಜಾರ್ಖಂಡ್‌ನಲ್ಲಿ ಬಿಜೆಪಿ-ಕಾಂಗ್ರೆಸ್‌ ನಡುವೆ ಭಾರಿ ಹಣಾಹಣಿ ಮುಂಬಯಿ: ಮಹಾರಾಷ್ಟ್ರದ ಮತ ಎಣಿಕೆ ಮುಂದುವರಿದಿರುವಂತೆ ಬಿಜೆಪಿ ನೇತೃತ್ವದ ಮಹಾಯೂತಿ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದೆ. 288 ಕ್ಷೇತ್ರಗಳ ಪೈಕಿ 207 ಕ್ಷೇತ್ರಗಳಲ್ಲಿ ಮಹಾಯುತಿ ಮುಂದೆ ಇದೆ. ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ್‌ ಅಘಾಡಿ 76 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್‌ನಲ್ಲಿ ಮಾತ್ರ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಕ್ಷಣಕ್ಷಣಕ್ಕೂ ಟ್ರೆಂಡ್‌ ಬದಲಾಗುತ್ತಿದ್ದು, ಸದ್ಯ ಬಿಜೆಪಿ 41ರಲ್ಲಿ ಮತ್ತು ಕಾಂಗ್ರೆಸ್‌ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಕರ್ನಾಟಕದ

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ Read More »

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ

ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ. ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್‌ ಅಘಾಡಿ 61 ಕ್ಷೇತ್ರಗಳಲ್ಲಿ

ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ Read More »

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ

ನವದೆಹಲಿ : ಗ್ಯಾನ ವ್ಯಾಪಿ ಮಸೀದಿಯೊಳಗೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ಅಲ್ಲಿ ಉತ್ಖನನ ನಡೆಸಬೇಕೆಂದು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಗ್ಯಾನವ್ಯಾಪಿ ನಿರ್ವಹಣಾ ಸಮಿತಿ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ನೋಟೀಸ್ ನೀಡಿದೆ. ಕಳೆದ ಬಾರಿ ಪುರಾತತ್ವ ಇಲಾಖೆಯ ವತಿಯಿಂದ ಮಸೀದಿಯ ವಜುಖಾನಾದಲ್ಲಿ ವಿಡಿಯೋಗ್ರಾಫಿಕ್ ಸಮೀಕ್ಷೆ ನಡೆಸಲಾಗಿತ್ತು. ಆಗ ವಜೂಖಾನದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ತಕ್ಷಣ ಸಮೀಕ್ಷೆಗೆ ತಡೆಯಾಜ್ಙೆಯನ್ನು ಮಾಡಲಾಯಿತು. ಬಳಿಕ ಮಸೀದಿಯ ಕೆಲವು ಭಾಗಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಲ್ಲದೇ, ಕೋಣೆಗಳಿಗೆ ಬೀಗ ಹಾಕಲಾಗಿದೆ.

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ Read More »

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ

ರಾಯ್ಪುರ್: ಛತ್ತೀಸ್‌ಗಢದ ಕೊಂಟಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ನಸುಕಿನ ಹೊತ್ತು ಸುಕ್ಮ ಸಮೀಪ ಭಂಡರ್‌ಪದರ್‌ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ನಕ್ಸಲರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ನಡೆಸಿದೆ. ಈ ವೇಳೆ 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ Read More »

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮತ ಎಣಿಕೆ ನಾಳೆ ಕುತೂಹಲ ಕೆರಳಿಸಿದ ಕರ್ನಾಟಕದ ಮೂರು ಕ್ಷೇತ್ರಗಳು ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ, ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಇದರ ಜೊತೆಗೆ ನಡೆದಿರುವ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ದೇಶದಲ್ಲಿ ಈಗಾಗಲೇ ಈ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭೆಗಳಿಗೆ, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರದ ಒಂದು ಲೋಕಸಭಾ ಕ್ಷೇತ್ರಕ್ಕೆ

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ Read More »

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ

ಕ್ರಿಕೆಟ್‌ ಹಬ್ಬದ ವೇಳಾಪಟ್ಟಿ ಬಹಿರಂಗ ಮುಂಬಯಿ : 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್‌ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್‌ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್​ಪಿಎನ್ ಟಿವಿ ವಾಹಿನಿಗೆ ಸೇರಿದ ಇಎಸ್​ಪಿಎನ್ ಕ್ರಿಕ್​ಇನ್ಫೋ ಎಂಬ ವೆಬ್‌ಸೈಟ್‌ ಐಪಿಎಲ್‌ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಇಎಸ್​ಪಿಎನ್ ಕ್ರಿಕ್​ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್​ 14ರಿಂದ ಆರಂಭವಾಗಲಿದ್ದು, ಮೇ

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ Read More »

error: Content is protected !!
Scroll to Top