ದೇಶ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು

ಹುಮ್ಮಸ್ಸಿನಿಂದ ಮತಗಟ್ಟೆಗಳತ್ತ ಧಾವಿಸುತ್ತಿರುವ ಜನ ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗಿನಿಂದಲೇ ಮತದಾರರು ಸಾಲುಗಟ್ಟಿ ಮತಗಟ್ಟೆಗಳತ್ತ ಧಾವಿಸುತ್ತಿದ್ದು, ಮೊದಲ ಹಂತದ ದಾಖಲೆ ಮತದಾನದ ಹುಮ್ಮಸ್ಸು ಎರಡನೇ ಹಂತದಲ್ಲೂ ಕಾಣಿಸುತ್ತಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಎರಡನೇ ಹಂತದಲ್ಲಿ 142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7 […]

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು Read More »

ಶೇ.100 ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಮಹಿಳೆಗೆ ಗೆಲುವು

ಗುಜರಾತ್‌ ಸ್ಥಳೀಯ ಚುನಾವಣೆಯಲ್ಲಿ ಸಾಮರಸ್ಯದ ಸಂದೇಶ ಸಾರಿದ ಅಪರೂಪದ ಫಲಿತಾಂಶ ಗುಜರಾತ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ.100 ಮುಸ್ಲಿಂ ಮತದಾರರಿರುವ ಗೋಧ್ರಾದ ವಾರ್ಡ್‌ನಲ್ಲಿ ಹಿಂದೂ ಸಮುದಾಯದ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸ್ವತಂತ್ರ ಹಿಂದೂ ಮಹಿಳಾ ಅಭ್ಯರ್ಥಿ ಅಪೇಕ್ಷಾಬೆನ್ ನೈನೇಶ್‌ಭಾಯ್ ಸೋನಿ ಅವರು ವಾರ್ಡ್ ಸಂಖ್ಯೆ 7ರಿಂದ ಅದ್ಭುತ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವು ಶೇ.100 ಮುಸ್ಲಿಂ ಸಮುದಾಯಕ್ಕೆ ಸೇರಿದೆ. ಆ ಮೂಲಕ ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶ ಸಾರಲಾಗಿದೆ. ಅಪೇಕ್ಷಾಬೆನ್ ಸೋನಿ ಅವರ ಗೆಲುವು ಈ

ಶೇ.100 ಮುಸ್ಲಿಂ ಮತದಾರರಿರುವ ವಾರ್ಡ್‌ನಲ್ಲಿ ಹಿಂದೂ ಮಹಿಳೆಗೆ ಗೆಲುವು Read More »

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ

ಈ ಒಂದು ಪ್ರತಿಭಟನೆ ಮುಳುವಾಯಿತು ಮುಂಬೈ: ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ಕೋರ್ಟ್‌ 1 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ಮೇಲೆ ಕೆಸರು ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧುದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಿತೇಶ್ ರಾಣೆ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದೋಷಿ ಎಂದು ಘೋಷಿಸಿದೆ. ನ್ಯಾಯಾಲಯ ಒಂದು

ಮಹಾರಾಷ್ಟ್ರದ ಸಚಿವ ನಿತೇಶ್‌ ರಾಣೆಗೆ ಜೈಲು ಶಿಕ್ಷೆ Read More »

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ

ವಿಧ್ವಂಸಕ ಕೃತ್ಯ ಎಸಗಿರುವ ಶಂಕೆ ಚಂಡಿಗಢ : ಪಂಜಾಬ್‌ನ ಪಟಿಯಾಲದಲ್ಲಿ ಸೋಮವಾರ ತಡರಾತ್ರಿ ರೈಲು ಹಳಿಯಲ್ಲಿ ಸ್ಫೋಟ ಸಂಭವಿಸಿ ಹಳಿ ಹಾನಿಗೊಳಗಾಗಿದೆ. ಶಂಭು-ಅಂಬಾಲ ರೈಲು ಹಳಿಯಲ್ಲಿ ಸ್ಫೋಟದ ಸ್ಥಳದ ಬಳಿ ಒಂದು ಛಿದ್ರಗೊಂಡ ಮೃತದೇಹ ಪತ್ತೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ಈ ಸ್ಫೊಟದಿಂದಲೇ ವ್ಯಕ್ತರಿ ಛಿದ್ರವಾಗಿರಬೇಕೆಂದು ಸಂಶಯಿಸಲಾಗಿದೆ. ಆದರೆ ಸ್ಫೋಟಕ್ಕೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಪೊಲೀಸರ ಪ್ರಕಾರ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸರಕು ರೈಲುಗಳಿಗೆ ಮೀಸಲಾಗಿರುವ ರೈಲ್ವೆ ಹಳಿಯ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಪೊಲೀಸ್

ರೈಲು ಹಳಿಯಲ್ಲಿ ಸ್ಫೋಟ : ಛಿದ್ರಗೊಂಡ ಮೃತದೇಹ ಪತ್ತೆ Read More »

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ!

ಉರಿಬಿಸಿಲಿನಲ್ಲಿ ಅಸ್ಥಿಪಂಜರವನ್ನು ಹೊತ್ತುಕೊಂಡು 3 ಕಿ.ಮೀ. ನಡೆದ ಆದಿವಾಸಿ ಜನಾಂಗದ ವ್ಯಕ್ತಿ ಭುವನೇಶ್ವರ: ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಆಕೆಯ ಅಸ್ಥಿಪಂಜರವನ್ನೇ ವ್ಯಕ್ತಿಯೊಬ್ಬರು ಉರಿ ಬಿಸಿಲಿನಲ್ಲಿ 3 ಕಿಲೋಮೀಟರ್‌ ದೂರ ಹೊತ್ತುಕೊಂಡು ಬ್ಯಾಂಕಿಗೆ ತಂದ ವಿಲಕ್ಷಣ ಘಟನೆಯೊಂದು ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಯೋಂಜಾರ್ ಜಿಲ್ಲೆಯ ಡಯಾನಾಲಿ ಗ್ರಾಮದ ಜಿತು ಮುಂಡಾ ಎಂಬವರ ಸಹೋದರಿ ಕಾಕ್ರಾ ಮುಂಡಾ ಎರಡು ತಿಂಗಳ ಹಿಂದೆ ನಿಧನರಾಗಿದ್ದರು. ಕಾಕ್ರಾ ಅವರ ಪತಿ ಮತ್ತು ಮಗು ಮೊದಲೇ ಮೃತಪಟ್ಟಿದ್ದರಿಂದ ಜಿತು ಅವರೇ ಬದುಕುಳಿದರುವ ಏಕೈಕ

ಸಹೋದರಿ ಮೃತಪಟ್ಟಿರುವುದನ್ನು ಸಾಬೀತುಪಡಿಸಲು ಅಸ್ಥಿಪಂಜರವನ್ನೇ ಬ್ಯಾಂಕಿಗೆ ತಂದ ವ್ಯಕ್ತಿ! Read More »

ಬಿಜೆಪಿಗೆ ಆಸ್ತಿಯಾಗುತ್ತಾರಾ ರಾಘವ್‌ ಚಡ್ಡಾ?

ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅವರ ಪಾತ್ರದ ಬಗ್ಗೆ ಚರ್ಚೆ ಹೊಸದಿಲ್ಲಿ : ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸೇರಿ ಆಪ್‌ನ ಏಳು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರ್ಪಡೆಯಾಗಿರುವುದು ಆಮ್‌ ಆದ್ಮಿ ಪಾರ್ಟಿಗೆ (ಆಪ್‌) ಆಗಿರುವ ಭಾರಿ ಹಿನ್ನಡೆ ಎಂದು ಭಾವಿಸಲಾಗಿದೆ. ರಾಜ್ಯಸಭೆಯಲ್ಲಿ ಆಮ್‌ ಆದ್ಮಿ ಪಾರ್ಟಿಯ ನಾಯಕರಾಗಿದ್ದ ರಾಘವ್‌ ಚಡ್ಡಾ ಬಿಜೆಪಿ ಸೇರುವ ಸುಳಿವು ಮೊದಲೇ ಇತ್ತು. ಆದರೆ ಅವರು ತನ್ನೊಂದಿಗೆ ಇನ್ನೂ ಆರು ಮಂದಿಯನ್ನು ಕರೆದುಕೊಂಡು ಹೋಗುತ್ತಾರೆ ಎಂದು ಆಪ್‌ ಪರಮೋಚ್ಚ ನಾಯಕ ಅರವಿಂದ

ಬಿಜೆಪಿಗೆ ಆಸ್ತಿಯಾಗುತ್ತಾರಾ ರಾಘವ್‌ ಚಡ್ಡಾ? Read More »

ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಮತದಾನ ದಾಖಲೆಗಳೆಲ್ಲ ಧೂಳೀಪಟ

ಸ್ವಾತಂತ್ರ್ಯ ನಂತರ ಇಷ್ಟು ಮತದಾನ ಇದೇ ಮೊದಲು ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಮತದಾರರಿಗೆ ಧನ್ಯವಾದ ಹೇಳಿದೆ. ವಿಧಾನಸಭಾ ಚುನಾವಣೆಯ ಮತದಾನ ಗುರುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಎರಡೂ ರಾಜ್ಯಗಳಲ್ಲಿ ದಾಖಲೆಯ ಮತದಾನ ನಡೆದಿದೆ. ಸಂಜೆ 6 ಗಂಟೆಯವರೆಗೆ ತಮಿಳುನಾಡಿನಲ್ಲಿ ಸುಮಾರು ಶೇ. 84.51 ರಷ್ಟು ಮತದಾನವಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ ಶೇ.91.78ರಷ್ಟು ಮತದಾನವಾಗಿದೆ. ಸ್ವಾತಂತ್ರ್ಯದ ನಂತರ ಪಶ್ಚಿಮ ಬಂಗಾಳ ಮತ್ತು

ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಮತದಾನ ದಾಖಲೆಗಳೆಲ್ಲ ಧೂಳೀಪಟ Read More »

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ

ಅಪರಿಚಿತ ದುಷ್ಕರ್ಮಿಗಳಿಂದ ಕಚ್ಚಾ ಬಾಂಬ್‌ ದಾಳಿ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ಚುನಾವಣಾ ಆಯೋಗ ಅಭೂತಪೂರ್ವ ಬಂದೋಬಸ್ತಿನ ವ್ಯವಸ್ಥೆ ಮಾಡಿದ್ದರೂ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ. ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ತಿಂಗಳು ಜಿಲ್ಲೆಯ

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ Read More »

ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ

ಪಶ್ಚಿಮ ಬಂಗಾಳದಲ್ಲಿ ಶಾಂತಿಯುತ ಮತದಾನಕ್ಕಾಗಿ ಅಭೂತಪೂರ್ವ ಬಂದೋಬಸ್ತು ನವದೆಹಲಿ: ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಎಂಕೆ-ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮತ್ತು ಎಐಎಡಿಎಂಕೆ – ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್

ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ Read More »

ಪಹಲ್ಗಾಮ್‌ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ

ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ ಎಂದು ಸಂದೇಶ ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಯಾಗಿ ಇಂದಿಗೆ (ಏ.22) ಒಂದು ವರ್ಷ ಪೂರ್ಣಗೊಂಡಿದೆ. ಹಿಂದೂ ಪ್ರವಾಸಿಗರನ್ನೇ ಹುಡುಕಿ ಹತ್ಯೆ ಮಾಡಿದ ಈ ಭಯೋತ್ಪಾದಕ ಕೃತ್ಯ ದೇಶದ ಜನಮಾನಸದಲ್ಲಿ ಎಂದಿಗೂ ಆರದ ಗಾಯವನ್ನು ಉಳಿಸಿದೆ. ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಕಣ್ಣೀರು ಇನ್ನೂ ಹಸಿಯಾಗಿಯೇ ಉಳಿದಿದೆ. ನಮ್ಮ ನೆಲಕ್ಕೆ ನುಗ್ಗಿ ನಮ್ಮವರನ್ನೇ ಗುಂಡಿಕ್ಕಿ ಕೊಂದ ಉಗ್ರರ ಅಟ್ಟಹಾಸ. ಭಯೋತ್ಪಾದಕರನ್ನು ಸದೆಬಡಿಯಲು ಭಾರತ ಕೈಗೊಂಡ ದಿಟ್ಟ ಕ್ರಮ.

ಪಹಲ್ಗಾಮ್‌ ಉಗ್ರ ದಾಳಿಗೆ ಒಂದು ವರ್ಷ : ಬಲಿಯಾದ ಅಮಾಯಕರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ Read More »

error: Content is protected !!
Scroll to Top