ದೇಶ

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು

ತಿರುವನಂತಪುರಂ: ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಕೇರಳದ ಚೋರನೂರ್ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆದಿದೆ. ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ಕೇರಳ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೌರ ಕಾರ್ಮಿಕರು ಮೃತಪಟ್ಟಿದ್ದಾರೆ. ರೈಲು ನಿಲ್ದಾಣದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ತೋರನೂರ್ ಸೇತುವೆ ಬಳಿ ಹಳಿಯಿಂದ ಕಸವನ್ನು ತೆರವುಗೊಳಿಸುತ್ತಿದ್ದಾಗ ನವದೆಹಲಿ- ತಿರುವನಂತಪುರಂ ಮಾರ್ಗದ ಎಕ್ಸ್ ಪ್ರೆಸ್ ರೈಲು ಮಧ್ಯಾಹ್ನ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು […]

ಎಕ್ಸ್ ಪ್ರೆಸ್ ರೈಲು ಡಿಕ್ಕಿ : ನಾಲ್ವರು ಕಾರ್ಮಿಕರು ಮೃತ್ಯು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ ಸದ್ದಿಲ್ಲದೆ 62 ರೂ. ಏರಿಕೆ

ಹೊಸದಿಲ್ಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲೇ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ಸದ್ದಿಲ್ಲದೆ ಏರಿಸಿವೆ. ನಿನ್ನೆ ವಾಣಿಜ್ಯ ಸಿಲಿಂಡರ್‌ ಬೆಲೆ 62 ರೂ. ಏರಿಕೆಯಾಗಿದೆ. ಇದರೊಂದಿಗೆ ಸತತ 3ನೇ ತಿಂಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾದಂತಾಗಿದೆ. ಆದರೆ 14 ಕೆಜಿಯ ಗೃಹ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿತ್ತು. ಸೆಪ್ಟೆಂಬರ್ ತಿಂಗಳಲ್ಲಿ 19

ಗ್ಯಾಸ್‌ ಸಿಲಿಂಡರ್‌ ಬೆಲೆ ಸದ್ದಿಲ್ಲದೆ 62 ರೂ. ಏರಿಕೆ Read More »

ಹತ್ತು ತಿಂಗಳಲ್ಲಿ 2,140 ಕೋ.ರೂ. ಸೈಬರ್‌ ಚೋರರ ಪಾಲು

ಡಿಜಿಟಲ್‌ ಅರೆಸ್ಟ್‌ ಮೂಲಕ ನಡೆಯುತ್ತಿದೆ ಆನ್‌ಲೈನ್‌ ದರೋಡೆ ಹೊಸದಿಲ್ಲಿ : ಸೈಬರ್‌ ಚೋರರು ಕಳೆದ ಹತ್ತು ತಿಂಗಳಲ್ಲಿ ದೋಚಿದ ಮೊತ್ತ ಬರೋಬ್ಬರಿ 2,140 ಕೋ. ರೂ. ಕೇಂದ್ರ ಗೃಹ ಸಚಿವಾಲಯದ ಸೈಬರ್‌ ವಿಭಾಗ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಆನ್‌ಲೈನ್‌ ವಂಚನೆ ಮತ್ತು ಸೈಬರ್‌ ಅರೆಸ್ಟ್‌ನಂತಹ ತಂತ್ರಗಳಿಂದ ಸೈಬರ್‌ ಚೋರರು ಈ ವರ್ಷದ ಹತ್ತು ತಿಂಗಳಲ್ಲೇ 2,140 ಕೋ. ರೂ. ಲಪಟಾಯಿಸಿದ್ದಾರೆ ಎಂದು ಸೈಬರ್‌ ವಿಭಾಗ ಮಾಹಿತಿ ನೀಡಿದೆ.ಪ್ರತಿ ತಿಂಗಳು ಸರಾಸರಿ 214 ಕೋ.ರೂ.ಯಂತೆ ದೇಶದ ಜನರು ಸೈಬರ್‌

ಹತ್ತು ತಿಂಗಳಲ್ಲಿ 2,140 ಕೋ.ರೂ. ಸೈಬರ್‌ ಚೋರರ ಪಾಲು Read More »

ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ಹೊಸದಿಲ್ಲಿ: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಪ್ರಧಾನಿ ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ. ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯಕ್ಕೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ

ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಶುಭಾಶಯ Read More »

ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ನಡೆದಿದೆ. ಮೃತಪಟ್ಟವರು ಜೋದ್‌ಪುರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅನಿತಾ ಚೌಧರಿ (50) ಮೃತದೇಹ ಪತ್ತೆಯಾಗಿದೆ. ಅ.27 ರಂದು ಬ್ಯೂಟಿ ಪಾರ್ಲರ್ ಗೆ ಹೋಗಿದ್ದ ಅನಿತಾ ಮಧ್ಯಾಹ್ನ 2:30 ರ ಸುಮಾರಿಗೆ ಸಲೂನ್ ಬಾಗಿಲು ಹಾಕಿ ನಾಪತ್ತೆಯಾಗಿದ್ದರು. ರಾತ್ರಿಯಾದರೂ ಅನಿತಾ ಮನೆಗೆ ಬಾರದೇ ಇದ್ದುದರಿಂದ ಗಾಬರಿಗೊಂಡ ಪತಿ ಮನಮೋಹನ್‌ ಚೌಧರಿ ಪೊಲೀಸರಿಗೆ ನಾಪತ್ತೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಮಹಿಳೆ ನಾಪತ್ತೆ : ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆ Read More »

ಮಗನ ಕೊಳೆತ ಮೃತದೇಹದ ಜೊತೆ ಐದು ದಿನ ಕಳೆದ ಅಂಧ ತಂದೆ-ತಾಯಿ

ಹೈದರಾಬಾದ್: ಮಗ ಮೃತಪಟ್ಟಿರುವುದು ತಿಳಿಯದೆ ಅಂಧ ವೃದ್ಧ ದಂಪತಿ ಮೃತದೇಹದ ಜೊತೆಗೆ 5 ದಿನ ಕಳೆದ ದಾರುಣ ಘಟನೆಯೊಂದು ಹೈದರಾಬಾದ್‌ ಬ್ಲೈಂಡ್ಸ್‌ ಕಾಲೋನಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಪ್ರಮೋದ್ ಎಂದು ಗುರುತಿಸಲಾಗಿದೆ.ಪತಿ ನಿವೃತ್ತ ಸರ್ಕಾರಿ ನೌಕರ ಕಾಲುವ ರಮಣ ಮತ್ತು ಅವರ ಪತ್ನಿ ಶಾಂತಿಕುಮಾರಿ ಇಬ್ಬರೂ 60 ವರ್ಷ ಮೇಲ್ಪಟ್ಟವರು ಮತ್ತು ಇಬ್ಬರೂ ಅಂಧರು. ದಂಪತಿ ತಮ್ಮ ಮಗ ಪ್ರಮೋದ್‌ನೊಂದಿಗೆ ಹೈದರಾಬಾದ್‌ನ ಬ್ಲೈಂಡ್ಸ್‌ ಕಾಲೋನಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಅಕ್ಕಪಕ್ಕದವರು ಅವರ ಮನೆಯಿಂದ ವಿಪರೀತ ದುರ್ವಾಸನೆ

ಮಗನ ಕೊಳೆತ ಮೃತದೇಹದ ಜೊತೆ ಐದು ದಿನ ಕಳೆದ ಅಂಧ ತಂದೆ-ತಾಯಿ Read More »

ಧಗಧಗಿಸುತ್ತಿದ್ದ ಬೆಂಕಿಯ ನಡುವಿನಿಂದ ಮಗುವನ್ನು ರಕ್ಷಿಸಿದ ʼದೈವʼ!

ಕಾಸರಗೋಡು: ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವು ದೈವಸ್ಥಾನದಲ್ಲಿ ನಿನ್ನೆ ತಡರಾತ್ರಿ ವಾರ್ಷಿಕ ಕಳಿಯಾಟ್ಟಂ ಸಂದರ್ಭದಲ್ಲಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ ಜನರನ್ನು ರಕ್ಷಿಸಲು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸಿದವರ ಕಥೆಗಳು ಬೆಳಕಿಗೆ ಬರುತ್ತಿವೆ. ಎಲ್ಲಕ್ಕೂ ಮಿಗಿಲಾಗಿ ದೈವ ನರ್ತಕನೇ ತನ್ನ ಪ್ರಾಣಕ್ಕೆ ಅಪಾಯವಿದ್ದರೂ ಲೆಕ್ಕಿಸದೆ ಬೆಂಕಿಯ ನಡುವೆ ಸಿಕ್ಕಿಬಿದ್ದಿದ್ದ ಮಗುವೊಂದನ್ನು ರಕ್ಷಿಸಿದ್ದು ಸುದ್ದಿಯಾಗುತ್ತಿದೆ.ರಾತ್ರಿ 12.30 ವೇಳೆಗೆ ದೈವಸ್ಥಾನದಲ್ಲಿ ಭೀಕರ ದುರಂತ ಸಂಭವಿಸಿದೆ. ಈ ವೇಳೆ ತೆಯ್ಯಂ (ದೈವ) ಆವೇಶವಾಗಿ ನರ್ತನ ನಡೆಯುತ್ತಿತ್ತು. ಕಿವಿಗಡಚಿಕ್ಕುವ ಶಬ್ದದೊಂದಿಗೆ ದೈವಸ್ಥಾನದ ಪಕ್ಕವೇ

ಧಗಧಗಿಸುತ್ತಿದ್ದ ಬೆಂಕಿಯ ನಡುವಿನಿಂದ ಮಗುವನ್ನು ರಕ್ಷಿಸಿದ ʼದೈವʼ! Read More »

ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್‌ ಗುಂಡು ತಗಲಿ ಸಾವು

ಜಮ್ಮು: ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನಲ್ಲಿ ಇಂದು ಬೆಳಗ್ಗೆ ಮತ್ತೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿನ ಹಳ್ಳಿಯೊಂದರಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕನನ್ನು ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೋಗ್ವಾನ್ ಗ್ರಾಮದ ಅಸ್ಸಾನ್ ದೇವಸ್ಥಾನದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮೂರನೇ ಉಗ್ರನನ್ನು ಮುಗಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ

ಮುಂದುವರಿದ ಉಗ್ರ ಬೇಟೆ : ಇನ್ನೋರ್ವ ಭಯೋತ್ಪಾದಕ ಹತ್ಯೆ | ಸೇನೆಯ ಶ್ವಾನ ಫ್ಯಾಂಟಮ್‌ ಗುಂಡು ತಗಲಿ ಸಾವು Read More »

ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ : ಓರ್ವ ಉಗ್ರ ಬಲಿ

ಶ್ರೀನಗರ : ಜಮ್ಮು-ಕಾಶ್ಮೀರದ ಅಕ್ನೂರ್‌ ವಲಯದಲ್ಲಿ ಸೇನೆಯ ವಾಹನದ ಮೇಲೆ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಸಾಯಿಸಲಾಗಿದೆ.ಅಕ್ನೂರ್‌ ಸಮೀಪ ಬಟಲ್‌ ಎಂಬಲ್ಲಿ ಮೂವರು ಉಗ್ರರು ಸೇನೆಯ ವಾಹನದ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಸೇನೆ ಕೂಡಲೇ ಈ ಪ್ರದೇಶವನ್ನು ಸುತ್ತುವರಿದು ಉಗ್ರರ ತಲಾಷೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಬಲಿಯಾಗಿದ್ದಾನೆ.ದೀಪಾವಳಿ ಹಬ್ಬಕ್ಕಾಗಿ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಾರಿ ಬಂದೋಬಸ್ತು ಮಾಡಿದ್ದು, ಇದರ ನಡುವೆ

ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ : ಓರ್ವ ಉಗ್ರ ಬಲಿ Read More »

ಮುಂದಿನ ವರ್ಷ ಜನಗಣತಿ?

2021ರಲ್ಲಿ ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಪ್ರಕ್ರಿಯೆ ಹೊಸದಿಲ್ಲಿ: ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು 2025ರಲ್ಲಿ ಆರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಜನಗಣತಿ ಪ್ರಕ್ರಿಯೆ 2025ರಲ್ಲಿ ಆರಂಭಗೊಂಡು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿಯ ನಂತರ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಕೆಲಸ ಆರಂಭಗೊಂಡು 2028ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆಗಲಿದ್ದು ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ

ಮುಂದಿನ ವರ್ಷ ಜನಗಣತಿ? Read More »

error: Content is protected !!
Scroll to Top