ಪಾರಾ ಒಲಿಂಪಿಕ್ಸ್‌ಗೆ ಅದ್ದೂರಿ ತೆರೆ : ಭಾರತ ಐತಿಹಾಸಿಕ 29 ಪದಕ ಸಾಧನೆ | 220 ಪದಕಗಳೊಂದಿಗೆ ಚೀನ ಅಗ್ರಸ್ಥಾನಿ
ಪ್ಯಾರಿಸ್ : ಆಗಸ್ಟ್ 28 ರಿಂದ ಶುರುವಾದ ಪ್ಯಾರಿಸ್ ಪಾರಾ ಒಲಿಂಪಿಕ್ಸ್ ಭಾನುವಾರ ರಾತ್ರಿ ಅದ್ದೂರಿಯಾಗಿ ಮುಕ್ತಾಯಗೊಂಡಿದೆ. ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ 17ನೇ ಆವೃತ್ತಿಯ ಪಾರಾ ಒಲಿಂಪಿಕ್ಸ್‌ಗೆ ತೆರೆ ಎಳೆಯಲಾಯಿತು. ಮುಂದಿನ ಪಾರಾ ಒಲಿಂಪಿಕ್ಸ್ ಆತಿಥ್ಯದ ಧ್ವಜವನ್ನು ಅಮೆರಿಕಕ್ಕೆ ಹಸ್ತಾಂತರಿಸಲಾಗಿದೆ. ಭಾರತವನ್ನು ಹರ್ವಿಂದರ್ ಸಿಂಗ್ ಮತ್ತು ಅಥ್ಲೀಟ್ ಪ್ರೀತಿ ಪಾಲ್ ಧ್ವಜಧಾರಿಗಳಾಗಿ ಮುನ್ನಡೆಸಿದರು. ಇಬ್ಬರೂ ಭಾರತೀಯ ತ್ರಿವರ್ಣ ಧ್ವಜದೊಂದಿಗೆ ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಂಡರು. ಈ ವರ್ಣರಂಜಿತ ಸಮಾರಂಭವು ಸಂಗೀತ, ಬೆಳಕಿನ […]










