ದೇಶ

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು […]

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ ಹೊಸದಿಲ್ಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ‌ ಆರಂಭವಾಗಲಿದೆ‌. ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಇಂದು ನಿರ್ಮಲಾ‌‌ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ‌.ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ Read More »

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ?

ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಜೈಶಂಕರ್‌ ತರಾಟೆ ಹೊಸದಿಲ್ಲಿ : ಭಾರತ ಸರ್ಕಾರವನ್ನು ಪದೇ ಪದೆ ಹಿಂದೂ ರಾಷ್ಟ್ರೀಯತಾವಾದಿ ಎಂದು ಕರೆಯುತ್ತಿರುವ ವಿದೇಶಿ ಮಾಧ್ಯಮಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.‌ ಜೈಶಂಕರ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.ಬಹುತೇಕ ವಿದೇಶಿ ಮಾಧ್ಯಮಗಳು ಭಾರತ ಸರ್ಕಾರವನ್ನು ಹಿಂದೂ ರಾಷ್ಟ್ರೀಯತಾವಾದಿ ಎಂದು ಉಲ್ಲೇಖಿಸುತ್ತವೆ. ಆದರೆ ಅಮೆರಿಕ ಹಾಗೂ ಇತರ ಯುರೋಪ್‌ ರಾಷ್ಟ್ರಗಳ ಸರ್ಕಾರಗಳನ್ನು ಅವರು ಕ್ರಿಶ್ಚಿಯನ್‌ ರಾಷ್ಟ್ರವಾದಿ ಎಂದೇಕೆ ಕರೆಯುವುದಿಲ್ಲ ಎಂದು ತಿಳಿಯದಾಗಿದೆ ಎಂದು ಡಾ.ಎಸ್.‌ ಜೈಶಂಕರ್‌ ಪ್ರಶ್ನಿಸಿದ್ದಾರೆ.ವಿದೇಶಿ ಮಾಧ್ಯಮಗಳು ಧರ್ಮ

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ? Read More »

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ

ಎಲ್‌ಐಸಿಗೆ 18,000 ಕೋ.ರೂ. ನಷ್ಟ ಅದಾನಿ ಕಂಪನಿಗಳ ಹೂಡಿಕೆದಾರರು ಕಳೆದುಕೊಂಡದ್ದು 15 ಲಕ್ಷ ಕೋ. ರೂ. ಮುಂಬಯಿ : ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಕಾಣುತ್ತಿರುವ ಕುಸಿತದಿಂದ ಹೂಡಿಕೆದಾರರು ತತ್ತರಿಸಿ ಹೋಗಿದ್ದಾರೆ. ಕೇವಲ ಎರಡು ವಹಿವಾಟು ಅವಧಿಗಳಲ್ಲಿ ಅದಾನಿ ಗ್ರೂಪ್‌ನ ಹೂಡಿಕೆದಾರರ ಷೇರು ಮೌಲ್ಯಗಳಲ್ಲಿ ಭಾರಿ ಕುಸಿತವಾಗಿದೆ. ದೇಶದ ಅತಿದೊಡ್ಡ ಸಾಂಸ್ಥಿಕ ಹೂಡಿಕೆದಾರರಾದ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಕೂಡ ಅದಾನಿ ಷೇರು ಕುಸಿತದಿಂದ ಸಾವಿರಾರು ಕೋ. ರೂ. ನಷ್ಟ ಅನುಭವಿಸಿದೆ. ಅದಾನಿ

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ Read More »

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

10 ದಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷಿದ್ಧ ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ಐದು ದಿನ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ. ವ್ಯಾಪ್ತಿಯಲ್ಲಿ ಜ.30 ರಿಂದ ಫೆ.20ರ ವರೆಗೆ ಎಲ್ಲ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.ಈ ಅವಧಿಯಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ.ಈ ಆದೇಶವನ್ನು

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ Read More »

ಇಂದು ಮಕ್ಕಳೊಂದಿಗೆ ಮೋದಿ ಪರೀಕ್ಷಾ ಪೆ ಚರ್ಚಾ

155 ದೇಶಗಳಿಂದ 38.8 ಲಕ್ಷ ಮಕ್ಕಳು ನೋಂದಣಿ ಹೊಸದಿಲ್ಲಿ :ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಇಂದು ನಡೆಯಲಿದೆ. 2023ರ ಬೋರ್ಡ್ ಪರೀಕ್ಷೆ ಬಗ್ಗೆ ಮೋದಿ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಒತ್ತಡ-ಮುಕ್ತ ಮಂತ್ರಗಳನ್ನು ನೀಡಲಿದ್ದಾರೆ. ದಿಲ್ಲಿಯ ತಲ್‌ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಕ್ಷಾ ಪೇ ಚರ್ಚಾ 2023 ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ.ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಈ ಬಾರಿ ಸುಮಾರು 38.8 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.

ಇಂದು ಮಕ್ಕಳೊಂದಿಗೆ ಮೋದಿ ಪರೀಕ್ಷಾ ಪೆ ಚರ್ಚಾ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಲು ಕೇಂದ್ರ ಚಿಂತನೆ

ಒಂಭತ್ತು ರಾಜ್ಯಗಳ ಚುನಾವಣೆ ಮೇಲೆ ದೃಷ್ಟಿ ಹೊಸದಿಲ್ಲಿ : ಈ ವರ್ಷ ಕರ್ನಾಟಕವೂ ಸೇರಿದಂತೆ ಒಂಭತ್ತು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಸಲು ಕೇಂದ್ರ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ನಿಯಂತ್ರಣದಲ್ಲಿದೆ. ತೈಲ ಕಂಪನಿಗಳು ನಷ್ಟದಿಂದ ಚೇತರಿಸಿಕೊಂಡಿವೆ. ಇಂತಹ ಪರಿಸ್ಥಿತಿಯಲ್ಲಿ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮನವಿ ಮಾಡಿರುವುದು ಈ ಸುದ್ದಿಗೆ ಇಂಬು ನೀಡಿದೆ.ಅಂತಾರಾಷ್ಟ್ರೀಯ

ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸಲು ಕೇಂದ್ರ ಚಿಂತನೆ Read More »

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ

ಪ್ರಧಾನಿ ಮೋದಿಯನ್ನು ಕೀಳಾಗಿ ಬಿಂಬಿಸಲು ತಯಾರಿಸಿದ ಡಾಕ್ಯುಮೆಂಟರಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ತಯಾರಿಸಿದ ಆಕ್ಷೇಪಾರ್ಹ ಸಾಕ್ಷ್ಯಚಿತ್ರಕ್ಕೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್‌ಗಳಿಗೆ ನಿರ್ಬಂಧ ಹೇರಿದೆ.ಗುಜರಾತ್ ಗಲಭೆ ಕುರಿತು ವಿಮರ್ಶಾತ್ಮಕ ಸಾಕ್ಷ್ಯಚಿತ್ರ ಕುರಿತಾದ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದ್ದು, 2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಆದೇಶಿಸಿದೆ.2002ರ ಗುಜರಾತ್

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಬ್ರಿಟನ್‌ನಲ್ಲೇ ವಿರೋಧ Read More »

ಮತ್ತೆ ಬಂದ ಮಾಸ್ಕ್‌, ಸ್ಯಾನಿಟೈಸರ್‌, ಸೋಷಿಯಲ್‌ ಡಿಸ್ಟನ್ಸ್‌

ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಗೊಳಿಸಿ ಆದೇಶ ತಿರುವನಂತಪುರ : ಕೊರೊನ ವೈರಸ್‌ನ ಹೊಸ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುವ ಅಪಾಯದಲ್ಲಿರುವುದರಿಂದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೇಳಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಪಾಲಿಸುವಂತೆ ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಜನರಿಗೆ ನಿರ್ದೇಶನ ನೀಡಿದೆ. ಇದಲ್ಲದೆ

ಮತ್ತೆ ಬಂದ ಮಾಸ್ಕ್‌, ಸ್ಯಾನಿಟೈಸರ್‌, ಸೋಷಿಯಲ್‌ ಡಿಸ್ಟನ್ಸ್‌ Read More »

ಗೆಲುವಿನಲ್ಲಿ ಭಾರತ ವಿಶ್ವದಾಖಲೆ

ಶ್ರೀಲಂಕಾಕ್ಕೆ ಹೀನಾಯ ಸೋಲು; ಸರಣಿ ಕ್ಲೀನ್‌ಸ್ವೀಪ್‌ ತಿರುವನಂತಪುರಂ: ಇಲ್ಲಿನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಶ್ರೀಲಂಕಾವನ್ನು 317 ರನ್‌ಗಳಿಂದ ಸೋಲಿಸಿದೆ. ಇದು ಏಕದಿನ ಇತಿಹಾಸದಲ್ಲೇ ಅತಿ ದೊಡ್ಡ ಗೆಲುವು. 2008ರಲ್ಲಿ ನ್ಯೂಜಿಲೆಂಡ್ ಟೀಮ್‌ ಐರ್ಲೆಂಡ್ ತಂಡವನ್ನು 290 ರನ್‌ಗಳಿಂದ ಸೋಲಿಸಿತ್ತು. ಇದು ಈ ವರೆಗಿನ ದಾಖಲೆಯಾಗಿತ್ತು. ಅದೇ ರೀತಿ 2007ರಲ್ಲಿ ಬರ್ಮುಡಾ ವಿರುದ್ಧ ಭಾರತ 257 ರನ್‌ಗಳ ಅಂತರದಲ್ಲಿ ಜಯ ಸಾಧಿಸಿತ್ತು. ಭಾರತ 317 ರನ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿ ಮೊದಲ

ಗೆಲುವಿನಲ್ಲಿ ಭಾರತ ವಿಶ್ವದಾಖಲೆ Read More »

error: Content is protected !!
Scroll to Top