ದೇಶ

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ

ನವದೆಹಲಿ : ಗ್ಯಾನ ವ್ಯಾಪಿ ಮಸೀದಿಯೊಳಗೆ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗ ಪತ್ತೆಯಾದ ಕಾರಣ ಅಲ್ಲಿ ಉತ್ಖನನ ನಡೆಸಬೇಕೆಂದು ಸಲ್ಲಿಸಿದ್ದ ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಗ್ಯಾನವ್ಯಾಪಿ ನಿರ್ವಹಣಾ ಸಮಿತಿ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ನೋಟೀಸ್ ನೀಡಿದೆ. ಕಳೆದ ಬಾರಿ ಪುರಾತತ್ವ ಇಲಾಖೆಯ ವತಿಯಿಂದ ಮಸೀದಿಯ ವಜುಖಾನಾದಲ್ಲಿ ವಿಡಿಯೋಗ್ರಾಫಿಕ್ ಸಮೀಕ್ಷೆ ನಡೆಸಲಾಗಿತ್ತು. ಆಗ ವಜೂಖಾನದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ತಕ್ಷಣ ಸಮೀಕ್ಷೆಗೆ ತಡೆಯಾಜ್ಙೆಯನ್ನು ಮಾಡಲಾಯಿತು. ಬಳಿಕ ಮಸೀದಿಯ ಕೆಲವು ಭಾಗಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಲ್ಲದೇ, ಕೋಣೆಗಳಿಗೆ ಬೀಗ ಹಾಕಲಾಗಿದೆ. […]

ಗ್ಯಾನವ್ಯಾಪಿ ಮಸಿದಿಯಲ್ಲಿ ಪತ್ತೆಯಾದ ಶಿವಲಿಂಗ | ಮಸೀದಿಯನ್ನು ಸಮೀಕ್ಷೆ ಮಾಡುವಂತೆ ಹಿಂದೂಪರ ಸಂಘಟಕರ ಒತ್ತಾಯ Read More »

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ

ರಾಯ್ಪುರ್: ಛತ್ತೀಸ್‌ಗಢದ ಕೊಂಟಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ತು ನಕ್ಸಲೀಯರು ಹತ್ಯೆಗೀಡಾಗಿದ್ದಾರೆ. ಇಂದು ನಸುಕಿನ ಹೊತ್ತು ಸುಕ್ಮ ಸಮೀಪ ಭಂಡರ್‌ಪದರ್‌ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ. ನಕ್ಸಲರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ನಡೆಸಿದೆ. ಈ ವೇಳೆ 10 ನಕ್ಸಲರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ

ಹತ್ತು ನಕ್ಸಲೀಯರು ಎನ್‌ಕೌಂಟರ್‌ಗೆ ಬಲಿ Read More »

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ಮತ ಎಣಿಕೆ ನಾಳೆ ಕುತೂಹಲ ಕೆರಳಿಸಿದ ಕರ್ನಾಟಕದ ಮೂರು ಕ್ಷೇತ್ರಗಳು ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ, ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಇದರ ಜೊತೆಗೆ ನಡೆದಿರುವ ಕೆಲವು ರಾಜ್ಯಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟವಾಗಲಿದ್ದು, ದೇಶದಲ್ಲಿ ಈಗಾಗಲೇ ಈ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭೆಗಳಿಗೆ, ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳಿಗೆ ಮತ್ತು ಮಹಾರಾಷ್ಟ್ರದ ಒಂದು ಲೋಕಸಭಾ ಕ್ಷೇತ್ರಕ್ಕೆ

ಎಲ್ಲರ ಚಿತ್ತ ನಾಳಿನ ಫಲಿತಾಂಶದತ್ತ Read More »

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ

ಕ್ರಿಕೆಟ್‌ ಹಬ್ಬದ ವೇಳಾಪಟ್ಟಿ ಬಹಿರಂಗ ಮುಂಬಯಿ : 18ನೇ ಆವೃತ್ತಿಯ ಐಪಿಎಲ್‌ನ ವೇಳಾಪಟ್ಟಿ ಬಹಿರಂಗವಾಗಿದೆ. ಕ್ರೀಡಾ ವೆಬ್‌ಸೈಟ್‌ ಒಂದರಲ್ಲಿ ಮುಂದಿನ ಮೂರು ವರ್ಷಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಐಪಿಎಲ್‌ ಸಹಿತ ಪ್ರಮುಖ ಕ್ರೀಡಾಕೂಟಗಳ ನೇರ ಪ್ರಸಾರ ಮಾಡುವ ಇಎಸ್​ಪಿಎನ್ ಟಿವಿ ವಾಹಿನಿಗೆ ಸೇರಿದ ಇಎಸ್​ಪಿಎನ್ ಕ್ರಿಕ್​ಇನ್ಫೋ ಎಂಬ ವೆಬ್‌ಸೈಟ್‌ ಐಪಿಎಲ್‌ ವೇಳಾಪಟ್ಟಿಯನ್ನು ಬಹಿರಂಗಗೊಳಿಸಿದೆ. ಆದರೆ ಬಿಸಿಸಿಐ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಇಎಸ್​ಪಿಎನ್ ಕ್ರಿಕ್​ಇನ್ಫೋ ಪ್ರಕಾರ ಮುಂದಿನ ಆವೃತ್ತಿಯ ಐಪಿಎಲ್ ಮಾರ್ಚ್​ 14ರಿಂದ ಆರಂಭವಾಗಲಿದ್ದು, ಮೇ

ಮಾರ್ಚ್​ 14ರಿಂದ ಮೇ 25ರ ತನಕ ಐಪಿಎಲ್‌ ಟೂರ್ನಿ Read More »

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು

ನ್ಯೂಯಾರ್ಕ್ : ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಕೇಸ್‌ ದಾಖಲಾಗಿದ್ದು, ಅರೆಸ್ಟ್‌ ವಾರಂಟ್‌ ಹೊರಡಿಸಲಾಗಿದೆ. ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅದಾನಿ ವಿರುದ್ಧ ಕೇಳಿಬಂದಿದೆ. ಕೆನಡಾದ ಪೆನ್ಶನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಸೈರಿಲ್ ಕೆಬನೆಸ್ ಅವರೂ ಆರೋಪಿಗಳ ಪೈಕಿ ಒಬ್ಬರು. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್

ವಂಚನೆ ಪ್ರಕರಣ : ಗೌತಮ್‌ ಅದಾನಿ ವಿರುದ್ಧ ಅರೆಸ್ಟ್‌ ವಾರಂಟ್‌ | ಅಮೆರಿಕದಲ್ಲಿ ಅದಾನಿ ಸೇರಿ ಎಂಟು ಮಂದಿ ವಿರುದ್ಧ ಕೇಸ್‌ ದಾಖಲು Read More »

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಫೆ.15ರಿಂದ 10ನೇ ತರಗತಿ, ಫೆ.17ರಿಂದ 12ನೇ ತರಗತಿ ಪರೀಕ್ಷೆಗಳು ಆರಂಭ ಹೊಸದಿಲ್ಲಿ : ಸಿಬಿಎಸ್‌ಇ ಶಿಕ್ಷಣ ಮಂಡಳಿ 2025ನೇ ಸಾಲಿನ 10 ಮತ್ತು 12ನೇ ತರಗತಿ ಅಂತಿಮ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಸಿದೆ. ಆ ಪ್ರಕಾರ 10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಶುರುವಾಗಿ ಮಾರ್ಚ್‌ 18ರ ವರೆಗೆ ನಡೆಯಲಿದೆ. 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17ರಿಂದ ಶುರುವಾಗಿ ಏಪ್ರಿಲ್‌ 4ರ ತನಕ ನಡೆಯಲಿವೆ. 10ನೇ ತರಗತಿಗೆ ಫೆ.15ರಂದು ಮೊದಲ ಪರೀಕ್ಷೆ ಇಂಗ್ಲಿಷ್‌ ಆಗಿರುತ್ತದೆ. ಅಂತೆಯೇ 12ನೇ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್‌ ನಾಯಕಿ

ಮೂರು ವರ್ಷಗಳಿಂದ ಕೇರಳದ ಜೈಲಿನಲ್ಲಿದ್ದಾಳೆ ವಿಕ್ರಂ ಗೌಡ ಪ್ರೀತಿಸಿ ಮದುವೆಯಾದ ನಕ್ಸಲ್‌ ಯುವತಿ ಕಾರ್ಕಳ : ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿರುವ ನಕ್ಸಲ್‌ ನಾಯಕ ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್‌ ಆಗಿದ್ದು, ಪ್ರಸ್ತುತ ಜೈಲಿನಲ್ಲಿದ್ದಾಳೆ. ನಕ್ಸಲ್‌ ಸಂಘಟನೆಯಲ್ಲೇ ಇದ್ದ ಸಾವಿತ್ರಿ (38) ಎಂಬ ಯುವತಿಯನ್ನು ಪ್ರೀತಿಸಿ ವಿಕ್ರಂ ಗೌಡ ಮದುವೆಯಾಗಿದ್ದ. ಇಬ್ಬರೂ ಅನೇಕ ವರ್ಷ ಮಾವೋವಾದಿ ಚಟುವಟಿಕೆಗಳಲ್ಲಿ ಜೊತೆಯಾಗಿ ತೊಡಗಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಈಕೆಯೂ ವಿಕ್ರಂ ಗೌಡನ ಊರಿನವಳೇ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಖಚಿತವಾದ ಮಾಹಿತಿಗಳು ಇಲ್ಲ.ಸಾವಿತ್ರಿ

ವಿಕ್ರಂ ಗೌಡನ ಹೆಂಡತಿಯೂ ನಕ್ಸಲ್‌ ನಾಯಕಿ Read More »

ಮಹಾರಾಷ್ಟ್ರ, ಜಾರ್ಖಂಡ್‌ ಮತದಾನ ಪ್ರಾರಂಭ

ಭಾರಿ ಪೈಪೋಟಿಗೆ ವೇದಿಕೆಯಾದ ಎರಡು ರಾಜ್ಯಗಳ ಚುನಾವಣೆ ಮುಂಬಯಿ : ಮಹಾರಾಷ್ಟ್ರದ ಎಲ್ಲ 288 ಮತ್ತು ಮತ್ತು ಜಾರ್ಖಂಡ್‌ನ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಶುರುವಾಗಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಯತ್ತ ಧಾವಿಸುತ್ತಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸೇರಿದಂತೆ ನಾಲ್ಕು ರಾಜ್ಯಗಳ 15 ವಿಧಾನಸಭಾ ಸ್ಥಾನಗಳಿಗೆ ಇಂದು ಉಪಚುನಾವಣೆಯೂ ನಡೆಯುತ್ತಿದೆ. ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಮತ್ತು ಜಾರ್ಖಂಡ್‌ನ ಎರಡನೇ ಹಂತದ 38 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.

ಮಹಾರಾಷ್ಟ್ರ, ಜಾರ್ಖಂಡ್‌ ಮತದಾನ ಪ್ರಾರಂಭ Read More »

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು

ಕಾರಿನ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು ಮುಂಬಯಿ: ವಿಧಾನಸಭೆ ಚುನಾವಣೆ ಕಾವು ತೀವ್ರವಾಗಿರುವ ಮಹಾರಾಷ್ಟ್ರದ ಕಟೋಲ್‌ನಲ್ಲಿ ಶರದ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ ನಡೆದು ಅನಿಲ್ ದೇಶಮುಖ್ ಗಾಯಗೊಂಡಿದ್ದಾರೆ. ದೇಶಮುಖ್ ಅವರ ತಲೆಗೆ ಕಲ್ಲು ತಾಗಿ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.ಮಹಾರಾಷ್ಟ್ರ ಚುನಾವಣಾ ಪ್ರಚಾರದ ಕೊನೆಯ ದಿನವಾದ ಸೋಮವಾರ ಸಂಜೆ ಐದು ಗಂಟೆಗೆ

ಮಾಜಿ ಗೃಹ ಸಚಿವರಿಗೆ ಕಲ್ಲೇಟು : ಆಸ್ಪತ್ರೆಗೆ ದಾಖಲು Read More »

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ

ತಿರುಪತಿಯಲ್ಲಿ ತಾಸುಗಟ್ಟಲೆ ಕ್ಯೂ ನಿಲ್ಲುವ ಬವಣೆ ತಪ್ಪಿಸಲು ಹೊಸ ವ್ಯವಸ್ಥೆ ತಿರುಪತಿ: ವಿಶ್ವಪ್ರಸಿದ್ಧ ತಿರುಪತಿ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಸರತಿ ಸಾಲಿನಲ್ಲಿ ಕಾದುನಿಲ್ಲುವ ಬವಣೆ ತಪ್ಪಲಿದೆ. ಎಲ್ಲ ಭಕ್ತರಿಗೆ ಕ್ಷಿಪ್ರವಾಗಿ ತಿಮ್ಮಪ್ಪನ ದರ್ಶನ ಸಿಗುವಂತಾಗಲು ದೇವಳದ ಆಡಳಿತ ನೋಡಿಕೊಳ್ಳುತ್ತಿರುವ ಟಿಟಿಡಿ ಹೊಸ ವ್ಯವಸ್ಥೆ ಮಾಡಲು ಮುಂದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಬಳಿಕ ಎಷ್ಟೇ ರಶ್‌ ಇದ್ದರೂ ಕೇವಲ ಎರಡರಿಂದ ಮೂರು ಗಂಟೆಗಳಲ್ಲಿ ಸಾಮಾನ್ಯ ಭಕ್ತರಿಗೂ ದೇವರ ದರ್ಶನ ಮಾಡಲು ಸಾಧ್ಯವಾಗಲಿದೆ.ಕೇವಲ 2ರಿಂದ 3 ಗಂಟೆಯೊಳಗೆ

ಕೇವಲ ಎರಡು ತಾಸಿನಲ್ಲಿ ಸಿಗಲಿದೆ ತಿಮ್ಮಪ್ಪನ ದರ್ಶನ Read More »

error: Content is protected !!
Scroll to Top