ದೇಶ

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ

ಕೇರಳ : ಮತ್ತೆ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಕೇರಳದಲ್ಲಿ ಹೆಚ್ಚಿನ ನಿಗಾ ವಹಿಸಲು ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿಫಾ ವೈರಸ್ ಕುರಿತು ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನಲ್ಲಿ ನಿಫಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ. ಸೋಂಕು ತಗುಲಿದ ಬಾಲಕನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. […]

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ Read More »

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ

ಮೈಸೂರು : ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು ಕುಮಾ‌ರ್ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲಿದ್ದ ಅವರು ಶನಿವಾರ (ಜು.20) ಬೆಳಗ್ಗೆ 11:30ರ ವೇಳೆಗೆ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಪುತ್ರಿ ಅಕ್ಷರಾ, ಪುತ್ರ ಅಜಿತ್ ಇದ್ದಾರೆ. ಮಕ್ಕಳಿಬ್ಬರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು ಐದು ದಶಕಗಳಿಂದ ಪತ್ರಕರ್ತರಾಗಿದ್ದ ಈಚನೂರು ಕುಮಾ‌ರ್ ಅಪಾರ ಅನುಭವ ಹೊಂದಿದ್ದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಈಚನೂರಿನವರಾದ ಕುಮಾರ್ ಮೈಸೂರಿನಲ್ಲೇ ಬಹುಕಾಲದಿಂದ ವಾಸವಾಗಿದ್ದರು. ಲೋಕವಾಣಿ, ನವಧ್ವನಿ, ಮೈಸೂರು ಮಿತ್ರ, ಸ್ಟಾರ್ ಆಫ್

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ Read More »

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ಜು.18 ರಿಂದ ಜು.22 ರ ತನಕ ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆ ತನಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಸಂಪಾಜೆ-ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ Read More »

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ

ಉತ್ತರ ಪ್ರದೇಶ: ದಿಬ್ರುಗಢ ಎಕ್ಸ್‌ಪ್ರೆಸ್‌ನ  15 ಬೋಗಿಗಳು ಹಳಿ ತಪ್ಪಿ ನಾಲ್ವರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ನಡೆದಿದೆ. ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ. ಕಳೆದ ತಿಂಗಳು ಜೂನ್ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ

ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ Read More »

ಈಜಲು ನದಿಗೆ ಇಳಿದ ಯುವಕ ನೀರುಪಾಲು

ಮಹಾರಾಷ್ಟ್ರ: ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಸ್ನೇಹಿತನ ಎದುರೇ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಜಯೇಶ್ ರಾಮಚಂದ್ರ ಅಂಬೆ (32) ಎಂದು ಗುರುತಿಸಲಾಗಿದೆ. ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮಾಡಿ ನದಿಯಲ್ಲಿ ಈಜಲು ಇಳಿದಿದ್ದ ಯುವಕ ದುರಂತಕ್ಕೀಡಾಗಿದ್ದಾನೆ. ಸ್ನೇಹಿತರೊಂದಿಗೆ ನದಿ ಬಳಿ ಬಂದಿದ್ದ ಯುವಕ ಈಜಲೆಂದು ನದಿಗೆ ಇಳಿದಿದ್ದಾನೆ. ನದಿಯಲ್ಲಿ ಏಕಾಏಕಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ನೋಡ ನೋಡುತ್ತಿದ್ದಂತೆ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲು ಯುವಕರು ಪ್ರಯತ್ನಿಸಿದ್ದರಾದರೂ ಸಾಧ್ಯವಾಗಿಲ್ಲ.

ಈಜಲು ನದಿಗೆ ಇಳಿದ ಯುವಕ ನೀರುಪಾಲು Read More »

ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’

ಭುವನೇಶ್ವರ: ಬರೋಬ್ಬರಿ 46 ವರ್ಷಗಳ ಬಳಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಆರು ವರ್ಷಗಳ ಬಳಿಕ ಈ ರತ್ನ ಭಂಡಾರದ ಬಾಗಿಲನ್ನು ನಕಲಿ ಕೀಲಿಕ್ಕೆ ಬಳಸಿ ಭಾನುವಾರ ಮಧ್ಯಾಹ್ನ 1.28ರ ಶುಭ ಮುಹೂರ್ತದಲ್ಲಿ ತೆರೆಯಲಾಯಿತು. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ

ಬರೋಬ್ಬರಿ 46 ವರ್ಷಗಳ ಬಳಿಕ ತೆರೆದ ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ Read More »

ಜೂನ್ 25 ನ್ನು  ‘ಸಂವಿಧಾನ ಹತ್ಯಾ ದಿವಸ’ ಎಂದು ಘೋಷಿಸಿದ ಸರಕಾರ

1975ರ ಜೂ. 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಕಾರಣದಿಂದಾಗಿ ಜೂ. 25 ರಂದು ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಪ್ರತೀ ವರ್ಷ ಜೂ. 25ರಂದು ದೇಶಾದ್ಯಂತ ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಆಚರಿಸಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರತಿವರ್ಷ ಜೂ. 25ರಂದು ಸಂವಿಧಾನ ಹತ್ಯಾ

ಜೂನ್ 25 ನ್ನು  ‘ಸಂವಿಧಾನ ಹತ್ಯಾ ದಿವಸ’ ಎಂದು ಘೋಷಿಸಿದ ಸರಕಾರ Read More »

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು

ಸೂರತ್: ಭಾರೀ ಮಳೆಯಿಂದಾಗಿ ಸೂರತ್‍ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಮೃತಪಟ್ಟು, ಹಲವಾರು ಮಂದಿ ಕಟ್ಟಡದ ಅಡಿಯಲ್ಲಿ ಸಿಲಿಕೊಂಡಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ. ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು Read More »

ಎಲ್‍.ಕೆ.ಅಡ್ವಾಣಿ ನಿಧನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ | ಆರೋಗ್ಯವಾಗಿದ್ದಾರೆ ಎನ್ನುವುದಕ್ಕೆ ಎಎನ್‍ ಐಯಿಂದ ವರದಿ

ದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‍.ಕೆ.ಅಡ್ವಾಣಿ ನಿಧನ. ಹೀಗೊಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಡ್ವಾಣಿಯವರ ಆರೋಗ್ಯದಲ್ಲಿ ವ್ಯತ್ಯ ಉಂಟಾದ್ದು ಸರಿ. ಆದರೆ ಆಸ್ಪತ್ರೆಗೆ ದಾಖಲಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್‍ ಆದ ಬಳಿಕ ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಕಿಡಿಗೇಡಿಗಳು ಅವರ ನಿಧನರಾಗಿದ್ದಾರೆ ಎಂದು ಶ್ರದ್ಧಾಂಜಲಿ ನೀಡಿದ ಪೋಸ್ಟರ್‍ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ. ಇದು ಶುದ್ಧ ಸುಳ್ಳು. ಅಡ್ವಾಣಿಯವರು ಆರೋಗ್ಯವಾಗಿದ್ದಾರೆ ಎಂಬುದಕ್ಕೆ ಇದೀಗ ಎಎನ್‍ ಐ ಸುದ್ದಿ ಸಂಸ್ಥೆ ಸ್ಪಷ್ಟಪಡಿಸಿದೆ.

ಎಲ್‍.ಕೆ.ಅಡ್ವಾಣಿ ನಿಧನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ | ಆರೋಗ್ಯವಾಗಿದ್ದಾರೆ ಎನ್ನುವುದಕ್ಕೆ ಎಎನ್‍ ಐಯಿಂದ ವರದಿ Read More »

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ

ದೆಹಲಿ: ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ. ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧೈಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ ಹೀಗೆಂದು ಪ್ರತಿಪಕ್ಷಗಳ ಗಲಾಟೆ ಗದ್ದಲದ ನಡುವೆ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. 2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್ ಕನೆಕ್ಷನ್ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ Read More »

error: Content is protected !!
Scroll to Top