ದೇಶ

ಜಲಪಾತ ನೀರಿಗಿಳಿದ ಒಂದೇ ಕುಟುಂಬದ ಐವರು ನೀರುಪಾಲು

ಮುಂಬೈ : ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ. ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ. ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ […]

ಜಲಪಾತ ನೀರಿಗಿಳಿದ ಒಂದೇ ಕುಟುಂಬದ ಐವರು ನೀರುಪಾಲು Read More »

ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ

ನವದೆಹಲಿ: ದೇಶದಲ್ಲಿ ಇಂದಿನಿಂದ ಕಾನೂನು ಬದಲಾಗಲಿದ್ದು, ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿ.ಆರ್.ಪಿ.ಸಿ ಇಂಡಿಯನ್ ಎವಿಡೆನ್ಸ್ ಆಕ್ಟ್ ಗೆ ಗುಡ್ ಬೈ ಹೇಳಲಾಗುತ್ತದೆ. ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ ಸಿ.ಆರ್.ಪಿ.ಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ಬರುತ್ತಿದೆ. ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿ 1860ರಲ್ಲಿ ಜಾರಿ ಮಾಡಿದ್ದ ಐಪಿಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಎಂದು, 1898ರಲ್ಲಿ ಜಾರಿಗೆ ಬಂದಿದ್ದ ಸಿ.ಆರ್.ಪಿ.ಸಿ ಬದಲಿಗೆ ಭಾರತೀಯ

ದೇಶದಾದ್ಯಂತ ಮೂರು ಹೊಸ ಕಾನೂನು ಜಾರಿ Read More »

ಟಿ20 ವಿಶ್ವಕಪ್ ಕ್ರಿಕೇಟ್ | 17 ವರ್ಷಗಳ ಬಳಿಕ ಕಪ್ ಮುಡಿಗೇರಿಸಿಕೊಂಡ ಭಾರತ

ಕೊನೆಗೂ 17 ವರ್ಷಗಳ ಬಳಿಕ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಪ್ರಬಲ ಪೈಪೋಟಿಯ ನಡುವೆಯೂ ಭಾರತ ಟಿ20 ವರ್ಲ್ಡ್ ಕಪ್ ನಲ್ಲಿ ಗೆಲುವು ಸಾಧಿಸಿ t20 world cup ಅನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಭಾರತ, ರೋಹಿತ್ ಶರ್ಮಾ ನಾಯಕತ್ವದಲ್ಲಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದ ಭಾರತ, ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ 177 ರನ್ ಗಳ ಗುರಿ ನೀಡಿತು. ಇದನ್ನು ಗಳಿಸುವಲ್ಲಿ ವಿಫಲವಾದ ದಕ್ಷಿಣ

ಟಿ20 ವಿಶ್ವಕಪ್ ಕ್ರಿಕೇಟ್ | 17 ವರ್ಷಗಳ ಬಳಿಕ ಕಪ್ ಮುಡಿಗೇರಿಸಿಕೊಂಡ ಭಾರತ Read More »

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರ ಅನ್ವಯ 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು. ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜಿಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್ ) ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ವಯೋಸಹಜ ಅವರು ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ, ಅನಾರೋಗ್ಯದ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಜನವರಿಯಲ್ಲಿ ಮಾಜಿ ಉಪ ಪ್ರಧಾನಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿತ್ತು. ಮಾ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಬಿಜೆಪಿ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು Read More »

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ : ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಓಂ ಬಿರ್ಲಾ

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

ಹೊಸದಿಲ್ಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಘೋಷಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪದಾಧಿಕಾರಿಗಳನ್ನು ಬಳಿಕ ಆಯ್ಕೆ ಮಾಡಲಾಗುವುದು ಎಂದು

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ Read More »

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ

ಜಮ್ಮು ಕಾಶ್ಮೀರ: ಜೂ. 29ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಅಮರನಾಥ ಬೇಸ್ ಕ್ಯಾಂಪ್ ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 260 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮರಾಗಳು, ಬಾಡಿ ಸ್ಕ್ಯಾನರ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಂಭಾನ್ ಜಿಲ್ಲೆಯ ಉಧಂಪುರದಿಂದ ಬನಿಹಾಲ್

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ Read More »

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ

ಗೋವಾ: ಇಂದು, ನೇಪಾಳದಲ್ಲಿ ಬಹುಸಂಖ್ಯಾತ ಹಿಂದೂ ಸಮಾಜವಿದ್ದರೂ ಹಿಂದೂಗಳು ಮಾತ್ರ ಚೀನಾ, ಯುರೋಪ ಯೂನಿಯನ ಮುಂತಾದ ವಿದೇಶಿ ಶಕ್ತಿಗಳ ಆರ್ಥಿಕ ಸಹಾಯದಿಂದಾಗಿ ಅವರ ಆಲೋಚನೆಗಳಿಗೆ ಅನುಗುಣವಾಗಿ ಕಾರ್ಯ ಮಾಡುತ್ತಿದ್ದಾರೆ ಎಂದು ನೇಪಾಳದ ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ ಆರೋಪಿಸಿದ್ದಾರೆ. ಅವರು ಗೋವಾ ಪೋಂಡಾ `ಶ್ರೀ ರಾಮನಾಥ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಂಗಣದಲ್ಲಿ ಆಯೋಜಿಸಲಾದ ಜಾಗತಿಕ ಮಟ್ಟದ ಹಿಂದೂ ಸಂಘಟನೆ ವಿಷಯದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಮೂಲಭೂತವಾದಿ ಎಡಪಂಥೀಯ ಸಿದ್ಧಾಂತದ ಕೆಲವು ವಿಶ್ವವಿದ್ಯಾಲಯಗಳಿಂದ 

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ Read More »

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು,  ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್ Read More »

error: Content is protected !!
Scroll to Top