ದೇಶ

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ […]

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ Read More »

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ Read More »

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ Read More »

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ

ಬೆಂಗಳೂರು: ಎಲ್ಲ ಶಾಸಕರಿಗೆ ಟಿಕೆಟ್‌ ನೀಡಲು ಸಾಧ್ಯವಿಲ್ಲ ಎಂದು ಹಿರಿಯ ನಾಯಕ ಯಡಿಯೂರಪ್ಪ ಖಡಕ್‌ ಅಗಿ ಹೇಳಿದ ಬಳಿಕ ಬಿಜೆಪಿಯ ಹಲವು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ ಎದುರಾಗಿದೆ. ಕರಾವಳಿಯಲ್ಲೂ ಕೆಲವು ಶಾಸಕರಿಗೆ ಟಿಕೆಟ್‌ ಸಿಗುವ ಸಾಧ್ಯತೆಯಿಲ್ಲ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತಿದೆ.ಬಿಜೆಪಿ ಕರ್ನಾಟಕದಲ್ಲೂ ಉತ್ತರ ಪ್ರದೇಶ ಮತ್ತು ಗುಜರಾತ್‌ ಮಾದರಿಯ ಪ್ರಯೋಗಕ್ಕೆ ಮುಂದಾದರೆ ಹಾಲಿ ಇರುವ ಹಲವು ಶಾಸಕರು ಟಿಕೆಟ್‌ ಕಳೆದುಕೊಳ್ಳುವುದು ಖಚಿತ. ಉತ್ತರ ಪ್ರದೇಶ ಮತ್ತು ಗುಜರಾತಿನಲ್ಲಿ ನಿಷ್ಕ್ರಿಯ, ಹಿರಿಯ ಮತ್ತು

ಬಿಜೆಪಿಯಲ್ಲಿ ಟಿಕೆಟ್‌ ತಳಮಳ: ಕರಾವಳಿಯ ಕೆಲವು ಶಾಸಕರಿಗೂ ಟಿಕೆಟ್‌ ಕೈ ತಪ್ಪುವ ಭೀತಿ Read More »

ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ

ಮೆರವಣಿಗೆ ವೇಳೆ ಕಲ್ಲುತೂರಾಟ; ಹಿಂಸಾಚಾರದಲ್ಲಿ ಹಲವರಿಗೆ ಗಾಯ ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಕೋಮು ಹಿಂಸಾಚಾರದ ಕಿಡಿ ಹತ್ತಿಕೊಂಡಿದೆ. ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದ್ದು, 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾ.9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆಯ ಮುಂದುವರಿಕೆ ಇದು ಎನ್ನಲಾಗಿದೆ. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್‌ನಲ್ಲಿ ನಡೆಯುತ್ತಿದ್ದ

ಹಾವೇರಿಯಲ್ಲಿ ಕೋಮು ಗಲಭೆ : 20 ಮಂದಿ ವಶ Read More »

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ

ದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ನೀಡಿದ್ದ ಹೇಳಿಕೆ ಸಂಸತ್ ನಲ್ಲೂ ಗದ್ದಲ ಉಂಟುಮಾಡಿತ್ತು.

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ Read More »

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ, ಈ ಕುರಿತು ಆತಂಕಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಚುನಾವಣೆ ವೇಳೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಇಧರಿಂದ ಪರೀಕ್ಷೆಗಳಿಗೆ ಸಮಸ್ಯೆಗಳಾಗುತ್ತವೆ ಎಂಬ ಆತಂಕಗಳು ಶುರುವಾಗಿದೆ.ಡಿಸೆಂಬರ್ 2022 ರಲ್ಲಿ ಕೊನೆಯ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಂತೆ 60,000 ಶಿಕ್ಷಕರನ್ನು ಚುನಾವಣಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ Read More »

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: 1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ. ಸಂತ್ರಸ್ತರಿಗಾಗಿ ಆರ್‌ಬಿಐ ಬಳಿ ಇರುವ 50 ಕೋಟಿ ರೂಪಾಯಿಯನ್ನು ಸಂತ್ರಸ್ತರ ಬಾಕಿ ಇರುವ ಕ್ಲೈಮ್‌ಗಳನ್ನು ಪೂರೈಸಲು ಯೂನಿಯನ್

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್‌ ಕಿಲ್ಲರ್‌ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್‌ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

error: Content is protected !!
Scroll to Top