ದೇಶ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಗಲ್ಲು

ಪೋಕ್ಸೊ ಅಡಿ ಮರಣ ದಂಡನೆ ವಿಧಿಸಿದ ದೇಶದ ಮೊದಲ ಪ್ರಕರಣ ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ 2014ರಿಂದ 2022ರ ನಡುವೆ 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ ಯುಮ್ಕೆನ್‌ ಬಾಗ್ರಾ ಎಂಬಾತನಿಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 […]

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಗಲ್ಲು Read More »

ಅ.2ರಂದು ಸೂರ್ಯ ಗ್ರಹಣ : ಭಾರತದಲ್ಲಿ ಗೋಚರವಿಲ್ಲ

ಸೂರ್ಯನ ಸುತ್ತ ಕೆಂಪು ಉಂಗುರ ಆಕೃತಿ ರಚನೆ ಹೊಸದಿಲ್ಲಿ : ಮುಂಬರುವ ಅಕ್ಟೋಬರ್‌ 2ರಂದು ಆಂಶಿಕ ಸೂರ್ಯ ಗ್ರಹಣ ಸಂಭವಿಸಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ನಾಸಾದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ ಸೂರ್ಯ ಗ್ರಹಣ ಭಾರತೀಯ ಕಾಲಮಾನ ರಾತ್ರಿ 9.21ಕ್ಕೆ ಹಿಡಿದು ಅ.3ರಂದು ನಸುಕಿನ 3.17ಕ್ಕೆ ಬಿಡಲಿದೆ.ಹಿಂದೂ ಕ್ಯಾಲೆಂಡರ್ ಪ್ರಕಾರ ಇದು ಭಾದ್ರಪದ ಮಾಸದ ಅಮವಾಸ್ಯೆ ಪಿತೃಪಕ್ಷದ ಕೊನೆಯ ದಿನ. ಸೂರ್ಯ ಗ್ರಹಣ ಭಾರತದಲ್ಲಿ ಗೋಚರಿಸದಿದ್ದರೂ ಇದರ ಪರಿಣಾಮ ಇರುತ್ತದೆ ಎಂದು ಭಾರತೀಯ ಶಾಸ್ತ್ರ ಗ್ರಂಥಗಳು

ಅ.2ರಂದು ಸೂರ್ಯ ಗ್ರಹಣ : ಭಾರತದಲ್ಲಿ ಗೋಚರವಿಲ್ಲ Read More »

ಅ.5ಕ್ಕೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಂತು ಬಿಡುಗಡೆ

ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರದಿಂದ ರೈತರಿಗೆ ಗಿಫ್ಟ್‌ ಹೊಸದಿಲ್ಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತರಿಗೆ ಉಡುಗೊರೆಯೊಂದನ್ನು ನೀಡಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ.ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲ ನೋಂದಾಯಿತ

ಅ.5ಕ್ಕೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಂತು ಬಿಡುಗಡೆ Read More »

ಮುಂಬಯಿಯಲ್ಲಿ ಮಹಾಮಳೆ : 4 ಮಂದಿ ಸಾವು

ಅನಾಹುತಗಳ ಸರಮಾಲೆ ಸೃಷ್ಟಿಸಿದ ಮಳೆ ಮುಂಬಯಿ: ಮುಂಬಯಿ ಮಹಾನಗರ ಸೇರಿ ಮಹಾರಾಷ್ಟ್ರದ ವಿವಿಧೆಡೆ ನಿನ್ನೆಯಿಂದೀಚೆಗೆ ಸುರಿಯುತ್ತಿರುವ ಮಹಾಮಳೆ ಅನಾಹುತಗಳ ಸರಮಾಲೆಯನ್ನು ಸೃಷ್ಟಿಸಿದೆ. ಮಳೆಗೆ ಮುಂಬಯಿಯಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಬುಧವಾರ ಸಂಜೆ ಹೊತ್ತಿಗೆ ಮಳೆ ಶುರುವಾಗಿದ್ದು, ಸತತವಾಗಿ 5 ತಾಸು ಸುರಿದಿದೆ. ಮುಂಬಯಿ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.ಭಾರಿ ಮಳೆಯ ಹಿನ್ನೆಲೆಯಲ್ಲಿ ನಿನ್ನೆಯೇ ಮುಂಬಯಿ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು, ರಸ್ತೆ ಸಂಚಾರ ವ್ಯತ್ಯಯಗೊಂಡು ಜನರು ತಡರಾತ್ರಿಯವರೆಗೂ

ಮುಂಬಯಿಯಲ್ಲಿ ಮಹಾಮಳೆ : 4 ಮಂದಿ ಸಾವು Read More »

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ

ಪುತ್ತೂರು: ತಿರುಪತಿ ದೇವಸ್ಥಾನದ ಲಡ್ಡು ಸಿದ್ಧಪಡಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಈ ಕುರಿತು ಮಾತನಾಡಿ, ತಿರುಪತಿ ದೇವಸ್ಥಾನ ಹಿಂದೂಗಳ ಒಂದು ಶ್ರದ್ಧಾ ಕೇಂದ್ರ. ಇಲ್ಲಿ ಪ್ರಸಾದ ರೂಪದಲ್ಲಿ ಸಿಗುವಂತ ಲಡ್ಡು ಅತ್ಯಂತ ಮಹತ್ವಪೂರ್ಣವಾದದ್ದು. ಹೀಗಿರುವಾಗ ಪವಿತ್ರವಾದ ಲಡ್ಡು ಪ್ರಸಾದವನ್ನ ಅಪವಿತ್ರಗೊಳಿಸಿದ್ದಂತಹ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ Read More »

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ

ಲಾಪತಾ ಲೇಡಿಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಕಿರಣ್ ರಾವ್ ನಿರ್ದೇಶನದ ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಒಟ್ಟಿನಲ್ಲಿ ರಿಲೀಸ್ ಆದ ಬಳಿಕ ಮತ್ತೊಂದಷ್ಟು ಮಂದಿ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಲಾಪತಾ ಲೇಡಿಸ್’ ಸಿನಿಮಾ ಮಹಿಳೆಯರ ಸಬಲೀಕರಣದ ಬಗ್ಗೆ ಇದೆ. ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ Read More »

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಪಾದುಕಾ ಪ್ರದಾನ ಪ್ರಸಂಗದಂತೆ ರಾಜ್ಯಭಾರ ಮಾಡುತ್ತೇನೆ ಎಂದು ಹೇಳಿದ ನೂತನ ಸಿಎಂ ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್‌ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಆದರೆ ಅವರು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್‌ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರಿವಾಲ್‌ ತಾನು ಅವರ ಆದೇಶ ಪಾಲಕಿ ಮಾತ್ರ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ತಿರುಪತಿ ದೇವಾಲಯ ಶುದ್ಧೀಕರಣ ಧಾರ್ಮಿಕ ವಿಧಿ ಆರಂಭ

ಶಾಂತಿಹೋಮ, ಪಂಚಗವ್ಯ ಸಂಪ್ರೋಕ್ಷಣೆ ಮೂಲಕ ಶುದ್ಧೀಕರಣ ತಿರುಪತಿ: ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿಜನ್ಯ ಕೊಬ್ಬಿನಂಶ ಬಳಸಲಾಗಿದೆ ಎಂಬ ವಿಚಾರ ಬಹಿರಂಗವಾದ ಬಳಿಕ ಭಕ್ತರ ಮನಸ್ಸಿನಲ್ಲಿ ಉಂಟಾದ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ) ಹಲವಾರು ಧಾರ್ಮಿಕ ಕಾರ್ಯಗಳನ್ನು ಮಾಡಲು ನಿರ್ಧರಿಸಿದೆ. ಕ್ಷೇತ್ರದ ಪಾವಿತ್ರ್ಯಕ್ಕೆ ಆಗಿರುವ ಅಪಚಾರಕ್ಕೆ ಪ್ರಾಯಶ್ಚಿತ್ತ ಮಾಡಿಕೊಂಡು ಕ್ಷೇತ್ರವನ್ನು ಶುದ್ಧೀಕರಿಸುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ದೇವಾಲಯದಲ್ಲಿ ಶಾಂತಿಹೋಮ, ಧಾರ್ಮಿಕ ವಿಧಿಗಳು ಆರಂಭವಾಗಿವೆ. ನಾಲ್ಕು

ತಿರುಪತಿ ದೇವಾಲಯ ಶುದ್ಧೀಕರಣ ಧಾರ್ಮಿಕ ವಿಧಿ ಆರಂಭ Read More »

ತಿರುಪತಿ ಪ್ರಸಾದ ಪಾವಿತ್ರ್ಯಕ್ಕೆ ಅಪಚಾರ : ಪ್ರಾಯಶ್ಚಿತ್ತಕ್ಕೆ ಶೃಂಗೇರಿ ಶ್ರೀಗಳು ಕರೆ

ಮೂರು ದಿನ ಉಪವಾಸ, ಮೌನವ್ರತ ಕೈಗೊಳ್ಳಲಿರುವ ಶ್ರೀಗಳು ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ದನ ಮತ್ತು ಮೀನಿನ ಕೊಬ್ಬಿನಂಶ ಸೇರಿಸಿ ಅಪವಿತ್ರಗೊಳಿಸಿರುವುದಕ್ಕೆ ಪ್ರಾಯಶ್ಚಿತ್ತವಾಗಿ ಮತ್ತು ಅಪವಿತ್ರ ಶುದ್ಧಿಗಾಗಿ ಜನರು ಮೂರು ದಿನ ಉಪವಾಸ, ಮೌನವ್ರತ ಕೈಗೊಳ್ಳಬಹುದು ಎಂದು ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಸಲಹೆ ನೀಡಿದ್ದಾರೆ. ಸ್ವಾಮೀಜಿಗಳು ಸ್ವತಹ ಮೂರು ದಿನ ಉಪವಾಸ ಮತ್ತು ಮೌನವ್ರತ ಕೈಗೊಳ್ಳುವ ಸಂಕಲ್ಪ ಮಾಡಿದ್ದಾರೆ. ತಿರುಪತಿ ತಿಮ್ಮಪ್ಪನ ಲಡ್ಡುಗೆ ಪ್ರಾಣಿಗಳ ಕೊಬ್ಬಿನಂಶ ಹಾಗೂ ಮೀನಿನ ಎಣ್ಣೆ ಬೆರೆಸಿ ಕ್ಷೇತ್ರವನ್ನು

ತಿರುಪತಿ ಪ್ರಸಾದ ಪಾವಿತ್ರ್ಯಕ್ಕೆ ಅಪಚಾರ : ಪ್ರಾಯಶ್ಚಿತ್ತಕ್ಕೆ ಶೃಂಗೇರಿ ಶ್ರೀಗಳು ಕರೆ Read More »

ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ : ರೈಲು ಅವಘಡಕ್ಕೆ ಮತ್ತೊಂದು ಸಂಚು

ಲಖನೌ: ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರೈಲನ್ನು ಉರುಳಿಸುವ ಸಂಚು ನಡೆದಿದೆ. ಕಾನ್ಪುರದಿಂದ ಫತೇಪುರ್‌ಗೆ ಬರುತ್ತಿದ್ದ ದೆಹಲಿ-ಹೌರಾ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಇರಿಸಲಾಗಿತ್ತು. ಕಾನ್ಪುರದ ಪ್ರೇಂಪುರ ರೈಲು ನಿಲ್ದಾಣದ ಬಳಿ ಲೂಪ್ ಲೈನ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಇರಿಸಲಾಗಿತ್ತು. ಬೆಳಗ್ಗೆ 5.50ಕ್ಕೆ ಈ ಘಟನೆ ನಡೆದಿದೆ. ಲೋಕೊ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ತುರ್ತು ಬ್ರೇಕ್ ಮೂಲಕ ಗೂಡ್ಸ್ ರೈಲನ್ನು ನಿಲ್ಲಿಸಿದ್ದರು.ರೈಲಿನಲ್ಲಿದ್ದ ನೌಕರರು ಆರ್‌ಪಿಎಫ್ ಮತ್ತು ಇತರ

ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ : ರೈಲು ಅವಘಡಕ್ಕೆ ಮತ್ತೊಂದು ಸಂಚು Read More »

error: Content is protected !!
Scroll to Top