ದೇಶ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ!

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ಲತೀಫ್’ನನ್ನು ಪಾಕಿಸ್ತಾನದ ಸಿಯಾಲ್ಕೋಟ್’ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಪ್ರಮುಖ ಸದಸ್ಯ. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು. ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ […]

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ! Read More »

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪ್ರಧಾನಿ

ಹೊಸದಿಲ್ಲಿ: ಇಸ್ರೇಲ್ ದೇಶ ಎದುರಿಸುತ್ತಿರುವ ಸಂಕಷ್ಟದ ಸನ್ನಿವೇಶದಲ್ಲಿ ಭಾರತ ದೇಶದ ಜನರು ಇಸ್ರೇಲ್ ಜನತೆಯ ಪರವಾಗಿ ಬಲವಾಗಿ ನಿಲ್ಲುತ್ತಾರೆ ಎಂದು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಭರವಸೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಅವರಿಗೆ ಇಸ್ರೇಲ್‌ನ ಸದ್ಯದ ಸ್ಥಿತಿಗತಿಗಳ ಕುರಿತಾಗಿ ಬೆಂಜಮಿನ್ ನೆತನ್ಯಾಹು ಮಾಹಿತಿ ನೀಡಿದರು. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೂರವಾಣಿ ಕರೆ ಮಾಡಿದ್ದಕ್ಕೆ

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪ್ರಧಾನಿ Read More »

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು?

ನವದೆಹಲಿ: 2024ರ ಲೋಕಸಭೆ ಚುನಾವಣೆ ಎದರಿಸಲು ಪ್ರತಿಪಕ್ಷಗಳು ಇಂಡಿಯಾ ಹೆಸರಿನಡಿ ಕೂಟವನ್ನು ರಚಿಸಿಕೊಂಡಿವೆ. ಆದರೆ, ಈ ಕೂಟದ ಪ್ರಮುಖ ಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಅಲ್ಲದೇ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಪ್‌ನ ರಾಷ್ಟ್ರೀಯ ಸಂಚಾಲಕ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಕೂಟದ ಒಗ್ಗಟ್ಟಿಲ್ಲ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ. ಭಾರತೀಯ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ,

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು? Read More »

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು

ವಿಜಯನಗರ : ಇಲ್ಲಿನ ಹೊಸಪೇಟೆ ಹಾಗೂ ಮರಿಯಮ್ಮನಹಳ್ಳಿ ಮಧ್ಯೆ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದ್ದು, 7ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಹೊಸಪೇಟೆಯಿಂದ ಮರಿಯಮ್ಮನ ಹಳ್ಳಿಯತ್ತ ಲಾರಿ ಹೊರಟಿತ್ತು. ಈ ವೇಳೆ ಮರಿಯಮ್ಮನ ಹಳ್ಳಿ ಕಡೆಯಿಂದ ಹೊಸಪೇಟೆಯತ್ತ ಮತ್ತೊಂದು ಲಾರಿ ಹಾಗೂ ಕ್ರೂಸರ್ ಬರುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿ ಬರುತ್ತಿದ್ದ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಲಾರಿ ಮಧ್ಯೆ ಸಿಕ್ಕಿಹಾಕಿಕೊಂಡ ಕ್ರೂಸರ್ ವಾಹನ ಅಪ್ಪಚ್ಚಿ ಆಗಿದೆ.

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು Read More »

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಲಕ್ಕೋ: ಎರಡು ಕಬಡ್ಡಿ ತಂಡಗಳ ಆಟಗಾರರ ನಡುವೆ ಮಾರಾಮಾರಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ರೌಂಡ್’ನಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡಿದೆ. ಆಟಗಾರರು ಪರಸ್ಪರ ಹಲ್ಲೆ ನಡೆಸಿದ್ದು, ಮೈದಾನದಲ್ಲಿದ್ದ ಕುರ್ಚಿಗಳನ್ನು ಪುಡಿಗೈದಿದ್ದಾರೆ. ತಂಡಗಳ ಆಟಗಾರರು ಒಬ್ಬರನ್ನೊಬ್ಬರು ಒದೆಯುವುದು, ಕೆಲವರು ಪರಸ್ಪರ ಕುರ್ಚಿಗಳನ್ನು ಎಸೆಯುವುದನ್ನು ವೀಡಿಯೊದಲ್ಲಿ ಕಾಣಬಹುದು. ವರದಿಯ ಪ್ರಕಾರ, ಎರಡೂ

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ

ನವದೆಹಲಿ: ಪಂಚರಾಜ್ಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಜಸ್ಥಾನ್, ಛತ್ತೀಸ್’ಗಡ, ಮದ್ಯಪ್ರದೇಶ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಮಿಜೋರಾಂನಲ್ಲಿ ನವಂಬರ್ 7, ಮಧ್ಯಪ್ರದೇಶದಲ್ಲಿ ನವಂಬರ್ 17, ರಾಜಸ್ಥಾನದಲ್ಲಿ ನವಂಬರ್ 23, ತೆಲಂಗಾಣದಲ್ಲಿ ನವಂಬರ್ 30ರಂದು ಚುನಾವಣೆ ನಡೆಯಲಿದೆ. ಡಿ. 3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ Read More »

ಶೃಂಗೇರಿಗೆ ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್ ಭೇಟಿ | ರಾಮ ಮಂದಿರ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನವೇ?

ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ್ ಮೋಹನ್ ಭಾಗವತ್ ಅವರು ಶೃಂಗೇರಿ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆದರು. ಗುರುವಾರ ಶಾರದ ದೇವಸ್ಥಾನಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್ ಅವರು ಶಾರದ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹಿರಿಯ ಶ್ರೀಗಳಾದ ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದರು. ಭಾಗವತ್ ಅವರ ಜತೆ ಐವರು

ಶೃಂಗೇರಿಗೆ ಆರ್.ಎಸ್.ಎಸ್. ಸರಸಂಘಚಾಲಕ್ ಮೋಹನ್ ಭಾಗವತ್ ಭೇಟಿ | ರಾಮ ಮಂದಿರ ಉದ್ಘಾಟನೆಗೆ ಶ್ರೀಗಳಿಗೆ ಆಹ್ವಾನವೇ? Read More »

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ!

ಕಡಪಾ: ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್  ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಡೆದಿರುವ ಘಟನೆಯು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮನೆಯಿಂದ ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದೆ. ಕಡಪಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ವರಲು, ಬುಧವಾರ ರಾತ್ರಿ 11 ಗಂಟೆಯವರೆಗೂ ಕೆಲಸ ಮಾಡಿ ಠಾಣೆಯಿಂದ

ಪತ್ನಿ, ಪುತ್ರಿಯರ ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಆತ್ಮಹತ್ಯೆ! Read More »

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ!

ಒಟ್ಟಾವ: ಖಲಿಸ್ತಾನಿಗಳ ವಿಚಾರದಲ್ಲಿ ಬಿಗಿ ಪಟ್ಟು ಹಿಡಿದಿರುವ ಭಾರತದ ಮುಂದೆ ತಲೆಬಾಗಿರುವ ಕೆನಡಾ, ಕೊನೆಗೂ ಕ್ರಮಕ್ಕೆ ಮುಂದಾಗಿದೆ. ದೇವಾಲಯಗಳನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು, ಸರ್ರೆಯ ಲಕ್ಷ್ಮೀನಾರಾಯಣ ಮಂದಿರದ ಮುಂಭಾಗದ ಗೇಟ್ ಮತ್ತು ಡೋರ್‌ಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ಖಲಿಸ್ತಾನ್ ಪರ, ಹಿಂದೂ ವಿರೋಧಿ ಹಾಗೂ ಭಾರತ ವಿರೋಧಿ ಬರಹಗಳನ್ನು ಬರೆದು ಆವರಣವನ್ನು ಅಪವಿತ್ರಗೊಳಿಸಿದ್ದರು. ಆ ಬಳಿಕ ಕೆನಡಾದ ಪೊಲೀಸರು ಮಾಡಿದ ಮೊದಲ ಬಂಧನ ಇದಾಗಿದೆ. ಆಗಸ್ಟ್ 12 ಮತ್ತು

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ! Read More »

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ!

ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ. ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು. ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು

ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ! Read More »

error: Content is protected !!
Scroll to Top