ದೇಶ

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ಶ್ರೀಮತಿ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದೊರಕಲಿ’ ಎಂದು ಪ್ರಧಾನಿ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು, ‘ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ತುಳಿತಕ್ಕೊಳಗಾದ ವ್ಯಕ್ತಿಗಳ […]

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ Read More »

ಆರ್ಟಿಕಲ್ 370 ರದ್ದು: ಡಿ. 11ರಂದು ತೀರ್ಪು!

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದೆ. ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ ಹಲವು ಅರ್ಜಿಗಳು ದಾಖಲಾಗಿತ್ತು. ಇವುಗಳ ವಿಚಾರಣೆ ನಡೆಸಿರುವ ಸುಪ್ರೀಂ, ತೀರ್ಪನ್ನು ಡಿ. 11ಕ್ಕೆ ಕಾಯ್ದಿರಿಸಿದೆ. ಕೇಂದ್ರ ಸರಕಾರ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ,

ಆರ್ಟಿಕಲ್ 370 ರದ್ದು: ಡಿ. 11ರಂದು ತೀರ್ಪು! Read More »

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!!

ಅತ್ಯಾಚಾರ ನಡೆಸಿದ ಆರೋಪಿಯೊಬ್ಬ ಜಾಮೀನಿನ ಮೇಲೆ ಜೈಲಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಮಧ್ಯದೆಹಲಿಯಲ್ಲಿ ನಡೆದಿದೆ. ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಅತ್ಯಾಚಾರ ಆರೋಪಿಯನ್ನು ಪ್ರೇಮ್ ಸಿಂಗ್‌ ಎಂದು ಗುರುತಿಸಲಾಗಿದೆ. ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಗುರುವಾರ ಸಂಜೆ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!! Read More »

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ!

ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಹಿತ್ರಾ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಸಂಸತ್ತಿನ ನೈತಿಕ ಸಮಿತಿಯು ಈ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ವರದಿ ನೀಡಿದೆ. ಅಲ್ಲದೆ ಸಂಸತ್ತಿನ ಕೆಳಮನೆಯಿಂದ ಅವರನ್ನು ಹೊರಹಾಕಲು ಶಿಫಾರಸು ಮಾಡಿತು. ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರು ಮಂಡಿಸಿದ ಮಹುವಾ ಮೊಹಿತ್ರಾ ಅವರನ್ನು

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ! Read More »

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ!

ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಕೇಂದ್ರ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರು ಹೊಂದಿದ್ದ ಖಾತೆಗಳನ್ನು ಸಂಪುಟದ ಇತರ ಸದಸ್ಯರಿಗೆ ಮರುಹಂಚಿಕೆ ಮಾಡಲಾಗಿದೆ. ಈ ಪೈಕಿ ಶೋಭಾ ಕರಂದ್ಲಾಜೆ ಹಾಗೂ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿ ಜವಾಬ್ದಾರಿಯ ಹೊಣೆ ಸಿಕ್ಕಿದೆ. ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಖಾತೆ, ರಾಜೀವ್ ಚಂದ್ರಶೇಖರ್ ಅವರಿಗೆ ಜಲಶಕ್ತಿ ಖಾತೆಯನ್ನು ನೀಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾಗಿದ್ದ ನರೇಂದ್ರ ಸಿಂಗ್ ತೋಮರ್ ಅವರ ಖಾತೆಯನ್ನು ಅರ್ಜುನ್ ಮುಂಡಾ

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ! Read More »

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು !

ವರದಕ್ಷಿಣೆ ಕಿರುಕುಳ ಶಂಕೆಯಲ್ಲಿ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಇದೀಗ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಹಾನಾಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು. ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ! Read More »

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »

ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!!

ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ. ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ. ಮಿರ್ಜಾಪುರದ ನಿವಾಸಿಯಾಗಿರುವ ಡಾ. ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಕಳೆದ

ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!! Read More »

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು!

ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ನಾಲಿಗೆ ಹರಿಬಿಟ್ಟು ಮಂದಿಯ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡ ಪಾಕಿಸ್ತಾನದ ಸೇನಾಧಿಕಾರಿಯೊಬ್ಬ ಆನ್‌ಲೈನ್‌ನಲ್ಲಿ ಭರ್ಜರಿ ಟ್ರೋಲ್‌ ಆಗುತ್ತಿದ್ದಾನೆ. ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಕ್ರಿಕೆಟಿಗರು ಭಾರತದ ವಿರುದ್ಧ ಅಬ್ಬರದ ಹೇಳಿಕೆಗಳನ್ನು ನೀಡುವುದು ಸಾಮಾನ್ಯ. ಕಡೆಗೆ ತಮ್ಮ ನಾಲಿಗೆ ತಾವೇ ಕಚ್ಚಿಕೊಳ್ಳುವುದೂ ಸಾಮಾನ್ಯ. ಇದೂ ಕೂಡ ಅಂಥದೇ ಘಟನೆ. ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಒಂದಷ್ಟು ಜನರ ಗುಂಪಿನ ನಡುವೆ “ಭಾರತವನ್ನು ವಶಪಡಿಸಿಕೊಳ್ಳುತ್ತೇವೆ, ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸುತ್ತೇವೆ ಎಂದೆಲ್ಲಾ ಹೇಳಿದ್ದಾನೆ.

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು! Read More »

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!!

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಹೇಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ವಿಡಿಯೋದಲ್ಲಿ ತನ್ನನ್ನು ಕೊಲ್ಲಲು ಭಾರತ ನಡೆಸಿದ ಸಂಚು

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!! Read More »

error: Content is protected !!
Scroll to Top