ದೇಶ

ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಸಾಯಿಸಲು ಮುಸ್ಲಿಮರಿಗೆ ಕರೆ : ಖರ್ಗೆ ವಿರುದ್ಧ ದೂರು ದಾಖಲು

ಅಸ್ಸಾಂ ಚುನಾವಣೆ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಖರ್ಗೆ ದಿಸ್ಪುರ್: ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿ.ಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ […]

ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರನ್ನು ಸಾಯಿಸಲು ಮುಸ್ಲಿಮರಿಗೆ ಕರೆ : ಖರ್ಗೆ ವಿರುದ್ಧ ದೂರು ದಾಖಲು Read More »

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ

ಮಹಿಳೆಯರಿಗೆ ದೇವಳ ಪ್ರವೇಶ ನೀಡುವ ವಿಚಾರವಾಗಿ ವಾದ-ಪ್ರತಿವಾದ ಮಂಡನೆ ನವದೆಹಲಿ: ಕೇರಳಂನ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡಿದ ತೀರ್ಪಿನ ಪುನರ್ ಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ 9 ನ್ಯಾಯಾಧೀಶರ ಸಂವಿಧಾನ ಪೀಠ ವಿಚಾರಣೆಯಲ್ಲಿ ಪೀಠವು 7 ಪ್ರಶ್ನೆಗಳನ್ನು ಎತ್ತಿದೆ. ಪ್ರಕರಣದಲ್ಲಿ ವಾದ ಮಂಡಿಸುವ ವಕೀಲರು ನಿಗದಿತ ಗಡುವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನೂ ಅನೇಕ ಸೂಕ್ಷ್ಮ ಪ್ರಕರಣಗಳು ಬಾಕಿ ಉಳಿದಿವೆ. ಆದ್ದರಿಂದ ಹೆಚ್ಚುವರಿ ಸಮಯ ನೀಡಲಾಗುವುದಿಲ್ಲ.

ಶಬರಿಮಲೆ ವಿವಾದ : 9 ನ್ಯಾಯಾಧೀಶರ ಸಂವಿಧಾನದ ಪೀಠದಲ್ಲಿ ವಿಚಾರಣೆ ಆರಂಭ Read More »

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು

ಯುಪಿಐ ಪೇಮೆಂಟ್‌ಗೆ ಶೇ.25 ಹೆಚ್ಚುವರಿ ಶುಲ್ಕ ನವದೆಹಲಿ: ದೇಶದ ಎಲ್ಲಾ ಟೋಲ್ ಗೇಟ್‌ಗಳನ್ನು ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಏಪ್ರಿಲ್ 10 ರಿಂದ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಫಾಸ್ಟ್‌ಟ್ಯಾಗ್‌ ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25

ಏ.10ರಿಂದ ಟೋಲ್‌ಗೇಟ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ರದ್ದು Read More »

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು

ತಂದೆ-ಮಗನ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿ ನೀಡಿದ ತೀರ್ಪು ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆಕಾರಣರಾಗಿದ್ದ ತಮಿಳುನಾಡಿನ 9 ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪ ಎಂದು ಉಲ್ಲೇಖಿಸಿದ್ದಾರೆ. ದೇಶಾದ್ಯಂತ ಈ ತೀರು ಭಾರಿ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಜನಸಾಮಾನ್ಯರ ಮೇಲೆ ಅಧಿಕಾರದ ದರ್ಪದಲ್ಲಿ ಎಸಗುವ ಕ್ರೌರ್ಯ ಎಷ್ಟು ಭೀಕರವಾಗಿರುತ್ತದೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ. ನ್ಯಾಯಾಲಯದ ಈ ತೀರ್ಪು ಭಾರತದ

9 ಪೊಲೀಸರಿಗೆ ಮರಣ ದಂಡನೆ : ದೇಶದ ಇತಿಹಾಸದಲ್ಲೇ ಅತ್ಯಂತ ಮಹತ್ವದ ತೀರ್ಪು Read More »

ವಿಚ್ಛೇದನ ಪಡೆದ ಮಗಳನ್ನು ಬ್ಯಾಂಡ್‌ ವಾದ್ಯದಲ್ಲಿ ಮನೆಗೆ ಕರೆತಂದ ತಂದೆ

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆ ವಿಡಿಯೋ ಲಖನೌ: ನಮ್ಮ ಸಮಾಜ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡುತ್ತದೆ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಚ್ಛೇದನ ಪಡೆದ ಮಗಳನ್ನು ತಂದೆ ಬ್ಯಾಂಡ್ ವಾದ್ಯದ ಮೆರವಣಿಗೆಯಲ್ಲಿ ಕರೆದುಕೊಂಡು ಬಂದು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಣಿತ ಎಂಬ ಯುವತಿಗೆ ಕೋರ್ಟ್ ವಿಚ್ಛೇದನ ನೀಡಿತ್ತು. ನಿವೃತ್ತ ನ್ಯಾಯಾಧೀಶರಾದ ಅವರ ತಂದೆ ನ್ಯಾಯಾಲಯದ ಸಂಕೀರ್ಣದ ಹೊರಗೆ ಡ್ರಮ್ ನುಡಿಸಿ, ಸಿಹಿ ಹಂಚಿ ಈ ಕ್ಷಣವನ್ನು ಸಂಭ್ರಮಿಸಿದ್ದಾರೆ. ಸಂಬಂಧಿಕರು

ವಿಚ್ಛೇದನ ಪಡೆದ ಮಗಳನ್ನು ಬ್ಯಾಂಡ್‌ ವಾದ್ಯದಲ್ಲಿ ಮನೆಗೆ ಕರೆತಂದ ತಂದೆ Read More »

5 ಕೆಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ಗುರುತಿನ ಚೀಟಿ ತೋರಿಸಿದರೆ ಎಲ್ಲಿ ಬೇಕಾದರೂ ಖರೀದಿಸಬಹುದು ನವದೆಹಲಿ: ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಕೊರತೆ ಆತಂಕದಲ್ಲಿದ್ದ ಜನಕ್ಕೆ ಕೇಂದ್ರ ಸರ್ಕಾರ ಮತ್ತೆ ಅಭಯ ನೀಡಿದೆ. ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದಿರುವ ಕೇಂದ್ರ ಸರ್ಕಾರ ಕೊರತೆ ನೀಗಿಸಲು 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯನ್ನ ಹೆಚ್ಚಿಸಿದೆ. ಭಾರತದಲ್ಲಿ ಎಲ್‌ಪಿಜಿ ಕೊರತೆಯಿಲ್ಲ, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. 5 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳು ಎಲ್ಲ ಏಜೆನ್ಸಿಗಳಲ್ಲೂ ಲಭ್ಯವಿದೆ. ಸೂಕ್ತ ಗುರುತಿನ ಚೀಟಿ

5 ಕೆಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ Read More »

ನಾಲ್ಕು ದಿನಗಳಿಂದ ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ

ಟ್ರೆಕ್ಕಿಂಗ್‌ಗೆ ಹೋಗಿ ದಾರಿ ತಪ್ಪಿ ಕಾಡಿನ ಪಾಳು ಬಂಗಲೆಯಲ್ಲಿದ್ದ ಕೇರಳದ ಯುವತಿ ಮಡಿಕೇರಿ: ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಎಂಬಾಕೆ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಕೊ‌ನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳುಬಿದ್ದ ಬಂಗಲೆಯೊಂದರಲ್ಲಿ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಕುಡಿಯ ಯುವಕರು ಅವರನ್ನು ರಕ್ಷಿಸಿ ಕಾಡಿನಿಂದ

ನಾಲ್ಕು ದಿನಗಳಿಂದ ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಚುನಾವಣೆಗೆ ಸ್ಪರ್ಧಿಸದಿರುವುದು ನನ್ನದೇ ನಿರ್ಧಾರ : ಅಣ್ಣಾಮಲೈ ಸ್ಪಷ್ಟನೆ

ಟಿಕೆಟ್‌ ನಿರಾಕರಣೆ ಬರೀ ಗುಲ್ಲು ಎಂದ ಮಾಜಿ ಅಧ್ಯಕ್ಷ ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ನಿರಾಕರಿಸಿದೆ ಎಂದು ಗುಲ್ಲೆಬ್ಬಿಸಿರುವ ಕುರಿತು ಸ್ಪಷ್ಟೀಕರಣ ನೀಡಿರುವ ತಮಿಳುನಾಡು ಬಿಜೆಪಿ ಘಟಕದ ಮಾಜಿ ಮುಖ್ಯಸ್ಥ ಅಣ್ಣಾಮಲೈಸ್ಪರ್ಧಿಸದಿರುವುದು ನನ್ನದೇ ನಿರ್ಧಾರ ಎಂದಿದ್ದಾರೆ. ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನು ನಿರ್ಧರಿಸಿದ್ದೇನೆ. ಪಕ್ಷದ ಕೋರ್ ಕಮಿಟಿಗೆ ಈ ನಿರ್ಧಾರವನ್ನ ಮುಂಚಿತವಾಗಿ ತಿಳಿಸಿದ್ದೇನೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಲಿಖಿತವಾಗಿ ಕೊಟ್ಟಿದ್ದೇನೆ. ಇದಿಷ್ಟಕ್ಕೇ ನನಗೆ ಟಿಕೆಟ್‌

ಚುನಾವಣೆಗೆ ಸ್ಪರ್ಧಿಸದಿರುವುದು ನನ್ನದೇ ನಿರ್ಧಾರ : ಅಣ್ಣಾಮಲೈ ಸ್ಪಷ್ಟನೆ Read More »

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ

ಕಾಂಗ್ರೆಸ್‌ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದ ತರೂರ್‌ಗೆ ತಂಡದಿಂದ ತಡೆ ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆ ಮಲಪ್ಪುರಂನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಶಿ ತರೂರ್‌ ಅವರ ಗನ್‌ಮ್ಯಾನ್‌ ಮೇಲೂ ಹಲ್ಲೆ ನಡೆಸಲಾಗಿದೆ. ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆ ಮಲಪ್ಪುರಂ ಜಿಲ್ಲೆಯ ವಂಡೂರಿನ ಚೆಲ್ಲಿತೋಡೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸಂಸದ ಶಶಿ ತರೂರ್‌ ಕಾರನ್ನು ತಡೆದು ಗನ್‌ಮ್ಯಾನ್‌ ಮೇಲೆ ಹಲ್ಲೆ Read More »

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ

ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕ್‌ ಸಚಿವ ನವದೆಹಲಿ: ಪಾಕಿಸ್ತಾನ ಮತ್ತು ಭಾರತದ ನಡುವೆ ಮತ್ತೆ ಉದ್ವಿಗ್ನತೆ ಕಾಣಿಸಿಕೊಂಡಿದೆ. ಗಡಿ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ ಮಾಡುವ ಕುರಿತು ಭಾರತಕ್ಕೆ ಬಹಿರಂಗ ಬೆದರಿಕೆಯೊಡ್ಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿ.ಮೀ.ಗೆ ಸೀಮಿತವಾಗಿರುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಅವರ ಮನೆಗಳೊಳಗೆ ಹಾಗೂ

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ದಾಳಿ : ಪಾಕಿಸ್ಥಾನದ ಬೆದರಿಕೆಗೆ ಆಕ್ರೋಶ Read More »

error: Content is protected !!
Scroll to Top