ದೇಶ

ಬಿಜೆಪಿಯ ಭೀಷ್ಮನಿಗೆ ಒಲಿದ ಭಾರತರತ್ನ

ಬಿಜೆಪಿಯ ಭೀಷ್ಮ ಎಂದೇ ಖ್ಯಾತನಾಮರಾದ ಎಲ್‍.ಕೆ.ಅಡ್ವಾಣಿ ಅವರು ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಘೊಷಣೆ ಮಾಡಿದ್ದು, ಲಾಲ್‍ ಕೃಷ್ಣ ಅಡ್ವಾಣಿ ಅವರು ಬಿಜೆಪಿ ಪಕ್ಷದ ಸಹಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ ಹಿಂದೂ ರಾಷ್ಟ್ರೀಯತಾವಾದಿ ಸ್ವಯಂಸೇವಕ ಸಂಘಟನೆಯಾದ ಆರ್‍.ಎಸ್‍.ಎಸ್‍.ನ ಸದಸ್ಯರೂ ಆಗಿದ್ದಾರೆ. 2002 ರಿಂದ 2004 ರ ತನಕ ಉಪಪ್ರಧಾನಿಯಾಗಿದ್ದ ಎಲ್‍.ಕೆ.ಅಡ್ವಾಣಿ ಅವರು, 90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಧೀಮಂತ ನಾಯಕರಾಗಿದ್ದರು. ಲೋಕಸಭೆಯಲ್ಲಿ ದೀರ್ಘಾವಧಿವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. […]

ಬಿಜೆಪಿಯ ಭೀಷ್ಮನಿಗೆ ಒಲಿದ ಭಾರತರತ್ನ Read More »

ಜ್ಞಾನವಾಪಿ ಮಸೀದಿ ಕೆಳಮಹಡಿಯಲ್ಲಿ ಹಿಂದೂಗಳ ಪೂಜೆಗೆ ಯಾವುದೇ ತಡೆ ನೀಡಲು ಸಾಧ್ಯವಿಲ್ಲ| ಅಲಹಾಬಾದ್ ಹೈಕೋರ್ಟ್‍ ಹೇಳಿಕೆ

ಹೊಸದಿಲ್ಲಿ: ಜ್ಞಾನವಾಪಿ ಮಸೀದಿಯ ಕೆಳಮಹಡಿಯಲ್ಲಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿರುವ ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶದ ಬೆನ್ನಲ್ಲೇ ಹಿಂದೂಗಳ ಪೂಜೆ ಯಾವುದೇ ರೀತಿಯ ತಡೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್‍ ತಿಳಿಸುವ ಮೂಲಕ ಮತ್ತೊಂದು ಜಯ ಲಭಿಸಿದಂತಾಗಿದೆ. ಇದೀಗ ಈ ಕುರಿತು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಏರಿದ್ದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ಜ್ಞಾನವಾಪಿ ಪ್ರಕರಣದ ಶುಕ್ರವಾರದ ವಿಚಾರಣೆ ಪೂರ್ಣಗೊಂಡಿದ್ದು, ಈ ಸಮಯದಲ್ಲಿ ಮಸೀದಿ ಸಮಿತಿಗೆ ಹೈಕೋರ್ಟ್‌ನಿಂದ ಯಾವುದೇ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ

ಜ್ಞಾನವಾಪಿ ಮಸೀದಿ ಕೆಳಮಹಡಿಯಲ್ಲಿ ಹಿಂದೂಗಳ ಪೂಜೆಗೆ ಯಾವುದೇ ತಡೆ ನೀಡಲು ಸಾಧ್ಯವಿಲ್ಲ| ಅಲಹಾಬಾದ್ ಹೈಕೋರ್ಟ್‍ ಹೇಳಿಕೆ Read More »

ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ಇನ್ನಿಲ್ಲ!!

ವಿವಾದದಿಂದಲೇ ಗುರುತಿಸಿಕೊಂಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನರಾಗಿದ್ದಾರೆ. ಸರ್ವಿಕಲ್ (ಗರ್ಭ ಕಂಠ) ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಿವಾಸಿಯಾಗಿರುವ 32 ವರ್ಷದ ಪೂನಂ ಪಾಂಡೆ ಮಾಡೆಲ್ ಆಗಿಯೂ ಗುರುತಿಸಿಕೊಂಡಿದ್ದರು.

ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ಇನ್ನಿಲ್ಲ!! Read More »

ಬಜೆಟ್ ಮಂಡನೆ ಮಾಡಿದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಮಾಡಿದರು. ಈ ಮೂಲಕ 2019 ರಿಂದ ಈ ವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. 40 ಸಾವಿರ ರೈಲು ಬೋಗಿಗಳನ್ನ ವಂದೇ ಭಾರತ್​ಗೆ ಉನ್ನತೀಕರಣ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು. ನಗರಗಳಲ್ಲಿ ಸುಗಮ ಸಂಚಾರಕ್ಕೆ ಮೆಟ್ರೋ ರೈಲುಗಳ ಹೆಚ್ಚಳಕ್ಕೆ ಮುಂದಾಗಲಾಗುವುದು ಎಂದು ತಿಳಿಸಿದರು. ಸರಕುಗಳನ್ನು ಸಾಗಿಸಲು ನಿರ್ಮಿಸಲಾಗುತ್ತಿರುವ ರೈಲ್ವೇ ಕಾರಿಡಾರ್ ಹೊರತುಪಡಿಸಿ,

ಬಜೆಟ್ ಮಂಡನೆ ಮಾಡಿದ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ Read More »

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ

ವಾರಣಾಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಳಿಗೆಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಈ ಅನುಮತಿ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶದವಾದ  ವ್ಯಾಸ್ ಜೀ ಕಾ ತಹಖಾನಾದಲ್ಲಿ ಹಿಂದೂ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಬಹುದು. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಕುರಿತು ಮಾಧ್ಯಮದವರಿಗೆ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದು, ಎಲ್ಲರಿಗೂ ಪೂಜೆ

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ Read More »

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ

ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು, ಕರ್ನಾಟಕ 9 ಮಂದಿ ಸೇರಿ ಒಟ್ಟು 132 ಮಂದಿ ಈ ಬಾರಿ ಪದ್ಮ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಶಸ್ತಿಗಳ ಪೈಕಿ 5 ಮಂದಿ ಪದ್ಮ ವಿಭೂಷಣ, 17 ಮಂದಿ ಪದ್ಮಭೂಷಣ ಹಾಗೂ 110 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದವರ ಪಟ್ಟಿ : ಪದ್ಮಭೂಷಣಕ್ಕೆ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ), ಪದ್ಮಶ್ರೀಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ),

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ Read More »

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!!

ಕೇರಳ ನ್ಯಾಯಾಲಯ 15 ಮಂದಿ ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದೆ. 15 ಮಂದಿ ಅಪರಾಧಿಗಳಿಗೆ ಒಟ್ಟಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಕೇರಳದ ಇತಿಹಾಸದಲ್ಲೇ ಇದೇ ಮೊದಲು ಎಂದು ಹೇಳಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ಕೇರಳ ನ್ಯಾಯಾಲಯ ಈ ತೀರ್ಪು ನೀಡಿದೆ. ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯ ನ್ಯಾಯಧೀಶೆ ವಿಜಿ ಶ್ರೀದೇವಿ ತೀರ್ಪು ಪ್ರಕಟಿಸಿದ್ದಾರೆ. 2021ರ ಡಿಸೆಂಬರ್ 19ರಂದು ರಂಜಿತ್

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!! Read More »

ರೈಲು  ಡಿಕ್ಕಿ : ಇಬ್ಬರು ಮೃತ್ಯು

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಇಂದು ಮುಂಜಾನೆ ನಡೆದಿದೆ. 20 ರಿಂದ 25 ವರ್ಷದೊಳಗಿನ ಇಬ್ಬರು ಯುವಕರು ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ಮುಂಜಾನೆ ಸುಮಾರು 5.30 ರ ಹೊತ್ತಿಗೆ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ನೀಡಿದ ದೂರಿನದಂತೆ ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರೈಲು  ಡಿಕ್ಕಿ : ಇಬ್ಬರು ಮೃತ್ಯು Read More »

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿವಿಷನ್​ ಸೆಂಟರ್​ನಲ್ಲಿ ಜ.27 ಹಾಗೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್​ ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. 12th ಫೇಲ್ ಸಿನಿಮಾʼ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ʻಅನಿಮಲ್ʼ ಚಿತ್ರಕ್ಕಾಗಿ ರಣಬೀರ್‌ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ,ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಗಾಗಿ

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ! Read More »

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »

error: Content is protected !!
Scroll to Top