ದೇಶ

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ!

ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಕೇಂದ್ರ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರು ಹೊಂದಿದ್ದ ಖಾತೆಗಳನ್ನು ಸಂಪುಟದ ಇತರ ಸದಸ್ಯರಿಗೆ ಮರುಹಂಚಿಕೆ ಮಾಡಲಾಗಿದೆ. ಈ ಪೈಕಿ ಶೋಭಾ ಕರಂದ್ಲಾಜೆ ಹಾಗೂ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿ ಜವಾಬ್ದಾರಿಯ ಹೊಣೆ ಸಿಕ್ಕಿದೆ. ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಖಾತೆ, ರಾಜೀವ್ ಚಂದ್ರಶೇಖರ್ ಅವರಿಗೆ ಜಲಶಕ್ತಿ ಖಾತೆಯನ್ನು ನೀಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾಗಿದ್ದ ನರೇಂದ್ರ ಸಿಂಗ್ ತೋಮರ್ ಅವರ ಖಾತೆಯನ್ನು ಅರ್ಜುನ್ ಮುಂಡಾ […]

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ! Read More »

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು !

ವರದಕ್ಷಿಣೆ ಕಿರುಕುಳ ಶಂಕೆಯಲ್ಲಿ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ ಇದೀಗ ಯುವ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಹಾನಾಗೆ ಮದುವೆ ನಿಗದಿಯಾಗಿದ್ದು ಅದರಂತೆ ಯುವ ವೈದ್ಯ ರುವೈಸ್ ಎಂಬುವವರ ಜೊತೆ ಮದುವೆ ಮಾತುಕತೆ ನಡೆದಿತ್ತು. ಈ ನಡುವೆ ಹುಡುಗನ ಕಡೆಯವರು ವರದಕ್ಷಿಣೆ ರೂಪದಲ್ಲಿ 150

ಮದುವೆ ನಿಗದಿಯಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ! Read More »

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »

ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!!

ವೈದ್ಯರೊಬ್ಬರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯ ರೈಲ್ವೇಸ್ ಕಾಲೋನಿಯಲ್ಲಿ ನಡೆದಿದೆ. ರೈಲ್ವೇಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಣ್ಣಿನ ತಜ್ಞ ಡಾ.ಅರುಣ್ ಕುಮಾರ್ ಅವರನ್ನು ರಾಯ್ ಬರೇಲಿಯಲ್ಲಿರುವ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು ಎನ್ನಲಾಗಿದೆ. ಮಿರ್ಜಾಪುರದ ನಿವಾಸಿಯಾಗಿರುವ ಡಾ. ಕುಮಾರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ರಾಯ್ ಬರೇಲಿಯ ರೈಲ್ವೇ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಕಳೆದ

ಹೆಂಡತಿ, ಇಬ್ಬರು ಮಕ್ಕಳ ಅಮಾನುಷವಾಗಿ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡ ವೈದ್ಯ!! Read More »

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು!

ಭಾರತ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ನಾಲಿಗೆ ಹರಿಬಿಟ್ಟು ಮಂದಿಯ ಮುಂದೆ ಚಪ್ಪಾಳೆ ಗಿಟ್ಟಿಸಿಕೊಂಡ ಪಾಕಿಸ್ತಾನದ ಸೇನಾಧಿಕಾರಿಯೊಬ್ಬ ಆನ್‌ಲೈನ್‌ನಲ್ಲಿ ಭರ್ಜರಿ ಟ್ರೋಲ್‌ ಆಗುತ್ತಿದ್ದಾನೆ. ಪಾಕಿಸ್ತಾನದ ರಾಜಕಾರಣಿಗಳು ಹಾಗೂ ಕ್ರಿಕೆಟಿಗರು ಭಾರತದ ವಿರುದ್ಧ ಅಬ್ಬರದ ಹೇಳಿಕೆಗಳನ್ನು ನೀಡುವುದು ಸಾಮಾನ್ಯ. ಕಡೆಗೆ ತಮ್ಮ ನಾಲಿಗೆ ತಾವೇ ಕಚ್ಚಿಕೊಳ್ಳುವುದೂ ಸಾಮಾನ್ಯ. ಇದೂ ಕೂಡ ಅಂಥದೇ ಘಟನೆ. ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬ ಒಂದಷ್ಟು ಜನರ ಗುಂಪಿನ ನಡುವೆ “ಭಾರತವನ್ನು ವಶಪಡಿಸಿಕೊಳ್ಳುತ್ತೇವೆ, ಪ್ರಧಾನಿ ನರೇಂದ್ರ ಮೋದಿಯನ್ನು ಬಂಧಿಸುತ್ತೇವೆ ಎಂದೆಲ್ಲಾ ಹೇಳಿದ್ದಾನೆ.

ಮೋದಿಗೆ ಬೇಡಿ ಹಾಕುವೆ ಎಂದ ಪಾಕ್ ಸೈನ್ಯಾಧಿಕಾರಿಯ ಬಾಯಿಗೆ ಬೀಗ ಜಡಿದ ನೆಟ್ಟಿಗರು! Read More »

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!!

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಹೇಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ವಿಡಿಯೋದಲ್ಲಿ ತನ್ನನ್ನು ಕೊಲ್ಲಲು ಭಾರತ ನಡೆಸಿದ ಸಂಚು

ಸಂಸತ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಪನ್ನುನ್!! Read More »

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ!

ಚಂಡೀಗಢ: ಭಾರತ-ಪಾಕಿಸ್ಥಾನಗಳ ನಡುವಿನ ಪ್ರೇಮಪ್ರಸಂಗಗಳು ಹೆಚ್ಚುತ್ತಿವೆ. ಕೆಲವು ತಿಂಗಳ ಹಿಂದೆ ಪಾಕಿಸ್ಥಾನಿ ಸೀಮಾ ಹೈದರ್‌ ಭಾರತಕ್ಕೆ ಆಗಮಿಸಿ, ಸಚಿನ್‌ ಮೀನಾರನ್ನು ವಿವಾಹವಾಗಿದ್ದಾರೆ. ಅದರ ಬೆನ್ನಲ್ಲೇ ರಾಜಸ್ಥಾನದ ಅಂಜು ಎಂಬಾಕೆ ಪಾಕಿಸ್ಥಾನಕ್ಕೆ ತೆರಳಿದ್ದರು. ಇದೀಗ ಕರಾಚಿಯ ಜವೇರಿಯಾ ಖಾನುಮ್‌ ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರ ಉದ್ದೇಶ ಕೋಲ್ಕತಾದಲ್ಲಿರುವ ತಮ್ಮ ಪ್ರಿಯಕರ ಸಮೀರ್‌ ಖಾನ್‌ರನ್ನು ವಿವಾಹವಾಗುವುದು. ಜವೇರಿಯಾರನ್ನು ಅಮೃತಸರ ಜಿಲ್ಲೆಯ ಅಟ್ಟಾರಿಯಲ್ಲಿ ವರನ ಕಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಮುಂದಿನ ವರ್ಷ ಜನವರಿಯಲ್ಲಿ ಸಮೀರ್‌ ಖಾನ್‌ರೊಂದಿಗೆ

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ! Read More »

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್!

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು. ಆದರೆ ಮಿಚಾಂಗ್‌ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್! Read More »

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ.

ಮಿಝೋರಾಂ: ಮಿಝೋರಾಂನಲ್ಲಿ ZPM ಪಕ್ಷ ನೂತನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ZPM ಪಕ್ಷವು 40 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ. ಇನ್ನೂ ಐದು ಸ್ಥಾನಗಳಲ್ಲಿ ZPM ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಪೂರ್ವ ಐಜ್ವಾಲ್ ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದು, ZPM ಗೆ ಭಾರೀ ಮೈಲಿಗಲ್ಲನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ZPMನ ಮುಖ್ಯಮಂತ್ರಿ

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ. Read More »

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ!

ಭೋಪಾಲ್: ಮಧ್ಯಪ್ರದೇಶದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಪ್ರಹ್ಲಾದ್ ಪಟೇಲ್ ಮತ್ತು ಮಧ್ಯಪ್ರದೇಶದಿಂದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ ಸೇರಿದಂತೆ ಏಳು ಲೋಕಸಭಾ ಸದಸ್ಯರನ್ನು ಕಣಕ್ಕಿಳಿಸಿತ್ತು. ಇದರಿಂದಾಗಿ ಸಿಎಂ ಹುದ್ದೆಗೆ ಆಯ್ಕೆಗಳನ್ನು ತೆರೆದಿಟ್ಟಿದ್ದು, ಅಧಿಕಾರವನ್ನು ಮತ್ತೆ ಉಳಿಸಿಕೊಂಡರೆ ಚೌಹಾಣ್ ಸ್ವಯಂಚಾಲಿತ ಆಯ್ಕೆಯಾಗದಿರಬಹುದು ಎಂಬ ಸಂದೇಶವನ್ನು ಬಿಜೆಪಿ ಕಳುಹಿಸಿದೆ. ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ! Read More »

error: Content is protected !!
Scroll to Top