ದೇಶ

ಭಾರತಕ್ಕೆ ಧಾರಾಳ ತೈಲ ಪೂರೈಕೆ : ರಷ್ಯಾ ಭರವಸೆ

ಸಾಕಷ್ಟು ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ರಷ್ಯಾ ಸಿದ್ಧ ನವದೆಹಲಿ: ಹಾರ್ಮುಜ್‌ ಜಲಸಂಧಿಯ ಬಿಕ್ಕಟ್ಟು ಪೂರ್ಣ ಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದೆ. ಈಗಾಗಲೇ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಭಾರತ ಸುಮಾರು 6 ಕೋಟಿ ಬ್ಯಾರಲ್‌ ಕಚ್ಚಾ ತೈಲವನ್ನು ರಷ್ಯಾದಿಂದ ಖರೀದಿಸಿದೆ. ಇದರ ಮಧ್ಯೆ ಆಪತ್ಭಾಂದವ ರಷ್ಯಾ ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ ಎಂದು ಭರವಸೆ ನೀಡಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಇಂಧನ ಬಿಕ್ಕಟ್ಟು […]

ಭಾರತಕ್ಕೆ ಧಾರಾಳ ತೈಲ ಪೂರೈಕೆ : ರಷ್ಯಾ ಭರವಸೆ Read More »

ಯುಸಿಸಿ ಜಾರಿಗೆ ತಂದು ನುಸುಳುಕೋರರ ನಾಲ್ಕು ಮದುವೆಗೆ ಕಡಿವಾಣ : ಅಮಿತ್‌ ಶಾ

ದಿಸ್‌ಪುರ: ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ. ಇದರಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ದುಧ್‌ನೋಯ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದ ಬಳಿಕ ನುಸುಳುಕೋರರು ನಾಲ್ಕು ಬಾರಿ ಮದುವೆಯಾಗಲು ಸಾಧ್ಯವಾಗುವುದಿಲ್ಲ ಎಂಬುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಡಕಟ್ಟು ಅಭಿವೃದ್ಧಿಗಾಗಿ ಸಮಗ್ರ

ಯುಸಿಸಿ ಜಾರಿಗೆ ತಂದು ನುಸುಳುಕೋರರ ನಾಲ್ಕು ಮದುವೆಗೆ ಕಡಿವಾಣ : ಅಮಿತ್‌ ಶಾ Read More »

ಎಲ್‌ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ

ಪ್ರತಿನಿತ್ಯ ಜನರಿಗೆ ಮಾಹಿತಿ ನೀಡಲು ರಾಜ್ಯ ಸರ್ಕಾರಗಳಿಗೆ ಸಲಹೆ ನವದೆಹಲಿ: ಎಲ್‌ಪಿಜಿ ಸಿಲಿಂಡರ್ ಲಭ್ಯತೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಗಳಿಗೆ ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಸಂವಹನ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದೆ. ಪ್ರಸ್ತುತ ಕೇವಲ 17 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿ ನಡೆಸುತ್ತಿವೆ. ಇದು ಪರಿಸ್ಥಿತಿಯನ್ನು ನಿಭಾಯಿಸಲು ಸಾಕಾಗುತ್ತಿಲ್ಲ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. ಉಳಿದ ರಾಜ್ಯಗಳು

ಎಲ್‌ಪಿಜಿ ಕುರಿತು ಹರಡುವ ತಪ್ಪು ಮಾಹಿತಿಗಳಿಗೆ ಕಡಿವಾಣ : ರಾಜ್ಯಗಳಿಗೆ ಕೇಂದ್ರ ಸೂಚನೆ Read More »

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌?

ಉಪನಾಯಕ ಸ್ಥಾನದಿಂದ ತೆಗೆದು ಹಾಕಿದ ದಿಢೀರ್‌ ಕ್ರಮದಿಂದ ಹಲವು ಅನುಮಾನ ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕ ರಾಘವ್ ಚಡ್ಡಾ ಅವರನ್ನು ತೆಗೆದುಹಾಕಿದೆ. ಆ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ಬದಲಿಯಾಗಿ ನೇಮಿಸಿದೆ. ಆಪ್‌ನ ಈ ದಿಢೀರ್‌ ಕ್ರಮ ಭಾರಿ ಚರ್ಚೆಗೆ ಕಾರಣವಾಗಿದೆ. ಇಷ್ಟಕ್ಕೂ ರಾಘವ್‌ ಚಡ್ಡಾ ಅವರನ್ನು ಯಾವ ಕಾರಣಕ್ಕೆ ತೆಗೆದು ಹಾಕಲಾಗಿದೆ ಎಂದು ಆಪ್‌ ತಿಳಿಸಿಲ್ಲ. ರಾಘವ್‌ ಚಡ್ಡಾ ಸಂಸತ್‌ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು,

ರಾಘವ್‌ ಚಡ್ಡಾ ಜನಪ್ರಿಯತೆ ಕಂಡು ಬೆಚ್ಚಿಬಿದ್ದರೆ ಅರವಿಂದ ಕೇಜ್ರಿವಾಲ್‌? Read More »

ಹಾರ್ಮುಜ್‌ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ತಡೆಯಿಲ್ಲ : ಇರಾನ್‌ ಭರವಸೆ

ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದ ಇರಾನ್‌ ಟೆಹ್ರಾನ್ : ಹಾರ್ಮುಜ್‌ ಜಲಸಂಧಿಯ ಬಗ್ಗೆ ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್‌ ಭರವಸೆ ನೀಡಿದೆ. ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಸ್ತವ್ಯಸ್ತಗೊಂಡಿರುವ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್‌ ಜಲಸಂಧಿ ಬಗ್ಗೆ ಪ್ರತಿಕ್ರಿಯಿಸಿ, ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್‌ ಸ್ಪಷ್ಟಪಡಿಸಿದೆ. ‘ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಚಿಂತಿಸಬೇಡಿ’

ಹಾರ್ಮುಜ್‌ ಜಲಸಂಧಿಯಲ್ಲಿ ಭಾರತದ ಹಡಗುಗಳಿಗೆ ತಡೆಯಿಲ್ಲ : ಇರಾನ್‌ ಭರವಸೆ Read More »

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿದ್ದ ನ್ಯಾಯಾಧೀಶರಿಗೆ 10 ತಾಸು ದಿಗ್ಭಂಧನ ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಏ.1ರಂದು ನಡೆದಿದ್ದ ಏಳು ನ್ಯಾಯಾಧೀಶರ ಘೇರಾವ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಚುನಾವಣಾ ಆಯೋಗ ಎನ್‌ಐಎಗೆ ವಹಿಸಿದೆ. ಪಶ್ಚಿಮ ಬಂಗಾಳ ಅತ್ಯಂತ ಧ್ರುವೀಕರಣಗೊಂಡಿರುವ ರಾಜ್ಯವಾಗಿದೆ. ನ್ಯಾಯಾಂಗದ ಅಧಿಕಾರಿಗಳನ್ನು ಒತ್ತೆ ಇರಿಸಿಕೊಂಡಿದ್ದು ನ್ಯಾಯಾಂಗದ ಮೇಲೆ ನಡೆದ ವ್ಯವಸ್ಥಿತ ದಾಳಿ. ರಾಜ್ಯದಲ್ಲಿ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅಸಮಾಧಾನ ಹೊರಹಾಕಿ

ಏಳು ನ್ಯಾಯಾಧೀಶರ ಒತ್ತೆಸೆರೆ : ಎನ್‌ಐಎ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ Read More »

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ, ಆಟೋಮೊಬೈಲ್ ಕ್ಷೇತ್ರಗಳಿಗೆ ಅನುಕೂಲ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2ರಿಂದ ಜೂನ್‌ 30ರವರೆಗೆ ಜಾರಿಯಲ್ಲಿರುತ್ತದೆ. ಮೆಥನಾಲ್, ಟೊಲ್ಯೂನ್, ಸ್ಟೈರೀನ್, ವಿನೈಲ್ ಕ್ಲೋರೈಡ್ ಮೊನೊಮರ್,

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ Read More »

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ

ಜನಸಾಮಾನ್ಯರಿಗೆ ಹೊರೆ, ತೊಂದರೆ ಆಗದಂತೆ ನೋಡಿಕೊಳ್ಳಲು ಸಲಹೆ ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಭೆಯಲ್ಲಿ

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ Read More »

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ

ಹೊಸ ನಿಯಮದಿಂದ ಅಡಕತ್ತರಿಯಲ್ಲಿ ಸಿಲುಕಿದ ಅಡಿಕೆ ಬೆಳೆಗಾಗರರು ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳಗಾರರರಿಗೆ ಈ ರೀತಿಯ ತೇವಾಂಶ ಮಿತಿ ಹೇರಿಕೆಯು ಸಾಕಷ್ಟು ತೊಂದರೆಯುಂಟು ಮಾಡುತ್ತಿರುವುದನ್ನು ಮನವರಿಕೆ ಮಾಡಿದ್ದಾರೆ. ನಮ್ಮ ಪ್ರದೇಶದ ಹೆಚ್ಚಿನ ಸಂಖ್ಯೆಯ ಸಣ್ಣ

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಿರ್ದೇಶಕ ಹಾಗೂ ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ರಂಜಿತ್‌ ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ Read More »

error: Content is protected !!
Scroll to Top