ದೇಶ

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ

ಸರಣಿ ಗೆಲುವಿಗೆ ಟೀಮ್‌ ಇಂಡಿಯಾ ಪ್ರಯತ್ನ ; ಸಮಬಲಗೊಳಿಸುವ ತವಕದಲ್ಲಿ ದಕ್ಷಿಣ ಆಫ್ರಿಕಾ ಅಹಮದಾಬಾದ್‌: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಭಾರತ ಸರಣಿ ಗೆಲ್ಲುವ ತವಕದಲ್ಲಿದೆ. ದಕ್ಷಿಣ ಆಫ್ರಿಕಾ ಸರಣಿಯನ್ನು ಸಮಗೊಳಿಸಲು ಯತ್ನಿಸಲಿದೆ. ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದೆ. ಲಖನೌ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರಿ ಮಂಜಿನಿಂದಾಗಿ […]

ಇಂದು ಅಹಮದಾಬಾದ್‌ನಲ್ಲಿ ಕೊನೆಯ ಟಿ20 ಪಂದ್ಯ Read More »

ನಾಲ್ಕನೇ ಪಂದ್ಯಕ್ಕೆ ಅಡ್ಡಿಯಾದ ದಟ್ಟ ಮಂಜು : ಕ್ರಿಕೆಟ್‌ ಅಭಿಮಾನಿಗಳಿಗೆ ಭಾರಿ ನಿರಾಶೆ

ರಾತ್ರಿ 9.45ರ ತನಕ ಕಾದರೂ ಕರಗದ ಮಂಜಿನೀಂದಾಗಿ ರದ್ದಾದ ಪಂದ್ಯ ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ನಾಲ್ಕನೇ ಪಂದ್ಯ ಒಂದೇ ಒಂದು ಎಸೆತ ಕಾಣದೆ ರದ್ದಾಗಿದೆ. ಲಖನೌ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಉಭಯ ತಂಡಗಳ ನಡುವಿನ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ. ದಟ್ಟ ಮಂಜು ಮೈದಾನದ ತುಂಬಾ ಹರಡಿದ್ದರಿಂದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ

ನಾಲ್ಕನೇ ಪಂದ್ಯಕ್ಕೆ ಅಡ್ಡಿಯಾದ ದಟ್ಟ ಮಂಜು : ಕ್ರಿಕೆಟ್‌ ಅಭಿಮಾನಿಗಳಿಗೆ ಭಾರಿ ನಿರಾಶೆ Read More »

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ

ಶೌಚಾಲಯದ ಗುಂಡಿಯಲ್ಲಿ ಶವ ಮುಚ್ಚಿ ಹಾಕಿದ ಪ್ರಕರಣ ಹತ್ತು ದಿನಗಳ ಬಳಿಕ ಬೆಳಕಿಗೆ ಲಖನೌ: ಬುರ್ಖಾ ಧರಿಸದೆ ಮನೆಯಿಂದ ಹೊರಬಂದಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಶೌಚಾಲಯದ ಗುಂಡಿಯೊಳಗೆ ಹೂತುಹಾಕಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಢಿ ದೌಲತ್‌ ಎಂಬ ಹಳ್ಳಿಯಲ್ಲಿ ನಡೆದಿದೆ. ಪತ್ನಿ ಬುರ್ಖಾ ಧರಿಸದೆ ಹೊರಗೆ ಹೋದದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಫಾರೂಕ್ ಎಂಬಾತ ಮೂವರನ್ನು ಕೊಲೆ ಮಾಡಿ ಹೂತು ಹಾಕಿದ ಆರೋಪಿ. ಫಾರೂಕ್‌ನ

ಬುರ್ಖಾ ಧರಿಸಲಿಲ್ಲ ಎಂದು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಹೂತು ಹಾಕಿದ ಪಾಪಿ ತಂದೆ Read More »

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ

ದಕ್ಷಿಣ ಆಫ್ರಿಕಾದ ಮೇಲೆ ಗೆಲ್ಲಲೇ ಬೇಕಾದ ಒತ್ತಡ ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಇಂದು ಉತ್ತರ ಪ್ರದೇಶದ ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ. ಭಾರತ ತಂಡದ ನಾಯಕ

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ

ಅರವಣ ಪಾಯಸಂ, ಅಪ್ಪಂ ಪ್ರಸಾದಕ್ಕೆ ವಿಪರೀತ ಬೇಡಿಕೆ ಶಬರಿಮಲೆ: ಈ ವರ್ಷದ ಶಬರಿಮಲೆ ತೀರ್ಥಯಾತ್ರೆ ಋತು ಪ್ರಾರಂಭವಾದ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ವರ್ಷವೂ ಭಕ್ತರ ದಟ್ಟಣೆ ಅಧಿಕವಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ವರ್ಚುವಲ್‌ ಕ್ಯೂ ಪದ್ಧತಿ ಪಾಲಿಸುತ್ತಿರುವುದರಿಂದ ಅಯ್ಯಪ್ಪನ ದರ್ಶನ ಗೊಂದಲವಿಲ್ಲದೆ ನಡೆಯುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಭಾನುವಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು. ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ.

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ Read More »

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ

ಬಿಹಾರದ ಸಚಿವ ನಿತಿನ್‌ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ.

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ

ಮೂರನೇ ಟಿ20ಯಲ್ಲಿ ಸುಲಭ ಜಯ; ಸರಣಿಯಲ್ಲಿ 2-1 ಮುನ್ನಡೆ ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಪ್ರಿಕಾ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್‌ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ Read More »

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ

ಟೀಮ್‌ ಇಂಡಿಯಾಕ್ಕೆ ಕ್ಯಾಪ್ಟನ್‌, ವೈಸ್‌ ಕ್ಯಾಪ್ಟನ್‌ಗಳ ಕಳಪೆ ಫಾರ್ಮ್‌ ಹೊರೆ ಧರ್ಮಶಾಲಾ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ. ಸರಣಿ 1-1 ಸಮಬಲ ಸಾಧಿಸಿರುವುದರಿಂದ ಈ ಪಂದ್ಯ ನಿರ್ಣಾಯಕವಾಗಿದೆ. ಮಳೆಯ ಸಾಧ್ಯತೆ ಇದ್ದರೂ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ ಇದೆ. ಧರ್ಮಶಾಲಾದ ಪಿಚ್ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸಹಕಾರಿ, ನಂತರ ಸ್ಪಿನ್ನರ್‌ಗಳಿಗೆ ತಿರುವು ನೀಡಬಹುದು. ಭಾರತದ ಬ್ಯಾಟಿಂಗ್ ಪ್ರದರ್ಶನ ಮತ್ತು ಪಿಚ್ ಪರಿಸ್ಥಿತಿಗಳು ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಿವೆ. ಭಾರತಕ್ಕೆ

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ Read More »

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ

ಕೆಲಸದ ದಿನ, ಕೂಲಿ ಹೆಚ್ಚಳ ನವದೆಹಲಿ: ಸರ್ಕಾರದ ಬಡವರ ಪರವಾದ ಮಹತ್ವದ ಯೋಜನೆಯಾಗಿರುವ ನರೇಗಾದ ಹೆಸರು ಇನ್ನು ಬದಲಾಗಲಿದೆ. ಈ ಯೋಜನೆಗೆ ಹಲಕವು ಬದಲಾವಣೆಗಳೊಂದಿಗೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼ ಎಂದು ಹೆಸರಿಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ನರೇಗಾಕ್ಕೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ ಮರು ನಾಮಕರಣ ಮಾಡಿಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು ಸರ್ಕಾರ 125 ದಿನಗಳಿಗೆ ಹೆಚ್ಚಿಸಿದೆ. ಅಲ್ಲದೆ ಕನಿಷ್ಠ ವೇತನ ದಿನಕ್ಕೆ 240 ರೂ.ಗೆ ಪರಿಷ್ಕರಿಸಲಾಗಿದೆ. ಇದಲ್ಲದೆ

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ Read More »

error: Content is protected !!
Scroll to Top