ದೇಶ

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏ. 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ […]

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ

ದೆಹಲಿ : ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ.ಏ. 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ. ಇನ್ನು ಇಂದಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 92 ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಅಡುಗೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ Read More »

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಜಟ್ಕಾ ಓಆರ್‌ಗ್ ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಗೆ ಬಿಬಿಎಂಪಿ ಬ್ರೇಕ್ ಹಾಕಿತ್ತು. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ನೀಡಿದ ನಂತರವೇ ಈ

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್ Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್ : ಔಷಧ, ಆ್ಯಂಬುಲೆನ್ಸ್’ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ್ ಮಾತನಾಡಿ, “ಎಲ್ಲಾ ಸೇವೆಗಳು ಬಹುತೇಕ ಉಚಿತ ಮತ್ತು ಆರೋಗ್ಯ ತುರ್ತು ಸೇವೆಯಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಆರೋಗ್ಯ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕುರಿತು ಕಾರ್ಯಗಳು

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್ : ಔಷಧ, ಆ್ಯಂಬುಲೆನ್ಸ್’ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ Read More »

2022-23ನೇ ಸಾಲಿನಲ್ಲಿ 15,920 ಕೋ. ರೂ ರಕ್ಷಣಾ ಪರಿಕರ ರಫ್ತು

ದೆಹಲಿ : ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. 2022–23ನೇ ಹಣಕಾಸು ವರ್ಷದಲ್ಲಿ ಭಾರತವು 15,920 ರೂ ಕೋಟಿ ಮೌಲ್ಯದ ರಕ್ಷಣಾ ಪರಿಕರಗಳನ್ನು ರಫ್ತು ಮಾಡಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.2022–2023ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು

2022-23ನೇ ಸಾಲಿನಲ್ಲಿ 15,920 ಕೋ. ರೂ ರಕ್ಷಣಾ ಪರಿಕರ ರಫ್ತು Read More »

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ

ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌. ಒನ್‌ ಶಾಪಿಂಗ್‌ ಮಾಲ್‌ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್‌. ಒನ್‌ ಮಾಲ್‌?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್‌. ತನ್ನದೇ ಆದ ಬ್ರ್ಯಾಂಡ್‌ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ Read More »

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು

ಬೆಂಗಳೂರು : ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಮಾ.26ರಂದು ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದ 8 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ. ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸಮಯ್ ಶುಕ್ರವಾರದವರೆಗೆ ಒಬ್ಬರ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗೊಂಡಿದ್ದ 8 ಕಾರ್ಮಿಕರಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು Read More »

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ

ಸಂಘವನ್ನು ಕೌರವರಿಗೆ ಹೋಲಿಸಿ ಟೀಕಿಸಿದ್ದ ರಾಹುಲ್‌ ದೆಹಲಿ : ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೆ ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ Read More »

error: Content is protected !!
Scroll to Top