ದೇಶ

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌

ಈ ಸಲ ಮನೆಯಿಂದಲೇ ಮತಚಲಾಯಿಸುವ ಸೌಲಭ್ಯ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಹಿರಿಯ ಮತ್ತು ವಿಶೇಷ ಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ. ನಿನ್ನೆ ಚುನಾವಣೆ ದಿನಾಂಕ ಘೋಷಣೆ ಮಾಡುವಾಗ ಮುಖ್ಯ ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಇದೇ ಮೊದಲ ಬಾರಿಗೆ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ (ವೋಟ್‌ ಫ್ರಮ್‌ ಹೋಮ್) ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.‌ ದೇಶದಲ್ಲಿ ಇದೇ ಮೊದಲ ಬಾರಿಗೆ […]

ದಿವ್ಯಾಂಗರು ಹಾಗೂ ಹಿರಿಯ ಮತದಾರರ ಅನುಕೂಲಕ್ಕಾಗಿ ವೋಟ್‌ ಫ್ರಂ ಹೋಮ್‌ Read More »

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್

ದೆಹಲಿ : ಈಶಾನ್ಯ ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಫೇಸ್‌ಬುಕ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಮಾಹಿತಿ ಪಡೆದು ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡು ಪ್ರಾಣ ಉಳಿಸಿದ್ದಾರೆ. ಸೋಮವಾರ ರಾತ್ರಿ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಸಂತ್ರಸ್ತನ ಫೇಸ್‌ಬುಕ್

ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್ Read More »

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಲು ಮಾ.28 ರಂದು ಆದೇಶ ಹೊರಡಿಸಿದೆ. ಜಾಮೀನು ರದ್ದಾದ ನಂತರ ನಿನ್ನೆ ಸಂಜೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಿದ್ದ ಲೋಕಾಯುಕ್ತ ಪೊಲೀಸರು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.ಆರೋಪಿ ಶಾಸಕರ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 1ರ ವರೆಗೆ

ಲೋಕಾಯುಕ್ತ ದಾಳಿ ಪ್ರಕರಣ : ಮಾಡಾಳ್ ವಿರೂಪಾಕ್ಷಪ್ಪ ಪೊಲೀಸ್ ಕಸ್ಟಡಿಗೆ Read More »

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 26 ರ ರಾತ್ರಿ ಕೆಯ್ಯೂರು ಗ್ರಾಮದಲ್ಲಿ ಸಂಭವಿಸಿದೆ. ಶೇಷಪ್ಪ ಪೂಜಾರಿ (75) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಶೇಷಪ್ಪ ಪೂಜಾರಿಯವರ ಅಳಿಯ ಗೋಪಾಲ ಪೂಜಾರಿ ತನ್ನ ಅತ್ತೆ, ಹೆಂಡತಿ, ಮಕ್ಕಳೊಂದಿಗೆ ಕೆಯ್ಯೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಗೆ ಹೋಗಿದ್ದು, ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದ ಶೇಷಪ್ಪ ಪೂಜಾರಿಯವರು ಮನೆಯ ಗೋಡೆಗೆ ಅಡ್ಡವಾಗಿ ಹಾಕಿದ ತೆಂಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದು

ಕೆಯ್ಯೂರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ

ಮಂಗಳೂರು : ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ

ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ Read More »

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ

ದೆಹಲಿ: ಉದ್ಯಮಿ ಗೌತಮ್ ಅದಾನಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಗ್ದಾಳಿ ನಡೆಸಿದ್ದು, ಗೌತಮ್ ಅದಾನಿ ಜೊತೆಗಿನ ರಾಬರ್ಟ್ ವಾದ್ರಾ ಅವರ ಹಳೆಯ ಫೋಟೋವನ್ನು ಬಹಿರಂಗಪಡಿಸಿರುವ ಸ್ಮೃತಿ ಇರಾನಿ ಇದು ಏನೆಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆ ಮುಂದುವರಿದಿರುವಂತೆಯೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು

ಅದಾನಿ ಮತ್ತು ವಾದ್ರಾ ಜೊತೆಯಿರುವ ಫೋಟೋ ಉಲ್ಲೇಖಿಸಿ ಸ್ಮೃತಿ ಇರಾನಿ ವಾಗ್ದಾಳಿ Read More »

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ

ತಿರುಪತಿ: ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ ಕಾಯ್ದೆಯ (ಎಫ್‌ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ ಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ. ಕಳೆದ ಮೂರು ವರ್ಷಗಳಿಂದ ಟಿಟಿಡಿ ತನ್ನ ಎಫ್‌ಸಿಆರ್‌ಎ ನೋಂದಣಿಯನ್ನು ನವೀಕರಿಸಲು ಪ್ರಯತ್ನಿಸುತ್ತಿದೆ. ತಿರುಮಲದ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುವ ಟಿಟಿಡಿ ಮತ್ತು ರಾಜ್ಯ ಸರ್ಕಾರವು ಎಫ್‌ಸಿಆರ್‌ಎ

ತಿರುಪತಿ ತಿರುಮಲ ದೇವಸ್ಥಾನಂ ಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ ಆರ್‌ಬಿಐ Read More »

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ :ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ

ಮುಂಬೈ: ಮಹಾರಾಷ್ಟ್ರದ “ಎನ್‌ಕೌಂಟರ್ ಸ್ಪೆಷಲಿಸ್ಟ್” ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ. ಮಹಾರಾಷ್ಟ್ರ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕರು ದಯಾ ನಾಯಕ್ ಮತ್ತು ಇತರ ಏಳು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಹೊರಡಿಸಿದ್ದಾರೆ. ದಯಾ ನಾಯಕ್ ಅವರಲ್ಲದೆ, ಇನ್ಸ್‌ಪೆಕ್ಟರ್‌ಗಳಾದ ಜ್ಞಾನೇಶ್ವರ್ ವಾಘ್ ಮತ್ತು ದೌಲತ್ ಸಾಳ್ವೆ ಅವರನ್ನೂ ಎಟಿಎಸ್‌ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಟಿಎಸ್‌ನಲ್ಲಿದ್ದಾಗ, ದಯಾ ನಾಯಕ್

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ :ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆ Read More »

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ

ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್‌ ಕ್ರೀಂ ಉತ್ಪನ್ನಗಳನ್ನು ಇಡಲಾಗಿದೆ. ಇದರ ಜೊತೆ ಐಸ್‌ ಕ್ರೀಂ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ. ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.

ಅಡ್ಯಾರ್ : ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ Read More »

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ

ಕೋಲಾರದಿಂದಲೇ ಅನರ್ಹತೆಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್‌ ಪ್ಲಾನಿಂಗ್‌ ಕೋಲಾರ : ಕೋಲಾರದಲ್ಲಿ 2019ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮೋದಿ ಸಮುದಾಯದ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆ ಮತ್ತು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಕೋಲಾರದಿಂದಲೇ ಪ್ರತ್ಯುತ್ತರ ನೀಡಲು ನಿರ್ಧರಿಸಿದ್ದಾರೆ. ಏಪ್ರಿಲ್​ 5 ರಂದು ರಾಹುಲ್​ ಗಾಂಧಿ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಕೋಲಾರಕ್ಕೆ ಆಗಮಿಸಲಿದ್ದಾರೆ. ರಾಹುಲ್​ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹವಾಗಿದ್ದು ಕೋಲಾರದಲ್ಲಿ ಮಾಡಿದ ಬಾಷಣದಿಂದ. ಹೀಗಾಗಿ ಕೋಲಾರದಿಂದಲೇ ಪ್ರಚಾರ

ಏ.5ಕ್ಕೆ ರಾಹುಲ್‌ ಗಾಂಧಿ ಕೋಲಾರಕ್ಕೆ ಭೇಟಿ Read More »

error: Content is protected !!
Scroll to Top