ದೇಶ

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ

ಸಿಎನ್‌ಜಿ ವಾಹನ ಬಳಸುವವರಿಗೆ ಅನುಕೂಲ ದೆಹಲಿ : ನೈಸರ್ಗಿಕ ಅನಿಲದ ದರ ನಿಗದಿಗಪಡಿಸುವ ಹೊಸ ಮಾನದಂಡ ಜಾರಿ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ. ಈ ಮಾನದಂಡ ಜಾರಿಗೆ ಬಂದ ಬಳಿಕ ಗೃಹ ಬಳಕೆಯ ಪಿಎನ್‌ಜಿ ಮತ್ತು ವಾಹನಗಳಿಗೆ ಬಳಸುವ ಸಿಎನ್‌ಜಿ ತೈಲದ ದರ ಶೇ. 10ರ ವರೆಗೆ ಕಡಿಮೆಯಾಗಲಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬೆಲೆ ಏರಿಳಿತಗಳಿಂದ ಭಾರತದ ಗ್ರಾಹಕರನ್ನು ರಕ್ಷಿಸಲು ಇದು ನೆರವಾಗಲಿದೆ. ಹೊಸ ಮಾರ್ಗದರ್ಶಿ […]

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ Read More »

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ

ಮಂಗಳೂರು : ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೈ ಮೂಲದ ಸುಧೀರ್ ರಾವ್ ವಿ ಆರ್. ಬಲ್ಗೇರಿಯಾದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಲವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡಿದ್ದನು. ಹಣ ಪಡೆದಿದ್ದ ಆತ ನಂತರ ವೀಸಾ ಕೊಡಿಸಿಲ್ಲ ಅಥವಾ ಹಣವನ್ನು ಹಿಂದಿರುಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ Read More »

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ.ರಸ್ತೆಯ ಎರಡೂ ಭಾಗದಲ್ಲಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿರಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿತ್ತು. ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.ಬಂಟ್ವಾಳ

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ Read More »

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ

ಮುಂಬೈ : ಹಣದುಬ್ಬರ ಮುಂದುವರಿದಿದ್ದರೂ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.ಆರ್ ಬಿಐ ಇಂದು ಪ್ರಕಟಿಸಿರುವ ಪ್ರಸಕ್ತ ಆರ್ಥಿಕ ಸಾಲಿನ ವಿತ್ತೀಯ ತ್ರೈಮಾಸಿಕದಲ್ಲಿ ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಕಳೆದ ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಅನುಕ್ರಮ ದರ ಹೆಚ್ಚಳವಾಗಿತ್ತು, ಆ ಬಳಿಕ ದರ ಹೆಚ್ಚಳವನ್ನು ನಿಲ್ಲಿಸಲಾಗಿತ್ತು. ಇಂದು ಆರ್ ಬಿಐ ಗವರ್ನರ್

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ Read More »

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್‌ ತೀರ್ಮಾನಿಸಿದೆ.ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ Read More »

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು

ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ತಡರಾತ್ರಿ ಧಾರವಾಡದಲ್ಲಿ ಅಪಘಾತ ಮಂಗಳೂರು : ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಬಸ್‌ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಐದು ಮಂದಿ ಕಾರಿನಲ್ಲಿದ್ದರು ಎನ್ನಲಾಗಿದೆ. ತಡರಾತ್ರಿ ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಅನಧಿಕೃತ ಮೂಲಗಳು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದಿದೆ. ಡಿಕ್ಕಿಯ ಬಿರುಸಿಗೆ

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು Read More »

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು

ಪೂಜಾ ವಿಧಿ ನೆರವೇರಿಸುವಾಗ ದುರಂತ- ಮಡಿದವರೆಲ್ಲ ಯುವ ಅರ್ಚಕರು ಚೆನ್ನೈ : ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು Read More »

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ

10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ಮೋದಿ ಭಾಷಣ ನೇರ ಪ್ರಸಾರ ದೆಹಲಿ : ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿ ಇಂದು ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿದ್ದು, ಬೆಳಗ್ಗೆ 10ಕ್ಕೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಪ್ರಧಾನಿಯವರ ಭಾಷಣವನ್ನು ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ನೇರ ಪ್ರಸಾರ ಮಾಡಲಾಗುವುದು. ಮೋದಿ ಭಾಷಣದ ವೇಳೆ ಪಕ್ಷದ ಎಲ್ಲಾ ಸಂಸದರು ಸಂಸತ್ತಿನಲ್ಲಿ ಹಾಜರಿರಲು ಸೂಚಿಸಲಾಗಿದೆ. ಮುಂದಿನ

ಏ.6 : ಬಿಜೆಪಿಯ 43ನೇ ಸಂಸ್ಥಾಪನಾ ದಿನ Read More »

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು

ವಾರಾಂತ್ಯಕ್ಕೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಬೆಂಗಳೂರು : ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಭಾರಿ ಪೈಪೋಟಿ ನಡೆಯುತ್ತಿರುವುದರಿಂದ ಬಿಜೆಪಿ ಪಾಲಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಗ್ಗಂಟಾಗಿ ಪರಿಣಮಿಸಿದೆ. ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಾಗಿ ಪರಿಣಮಿಸಿರುವುದರಿಂದ ಬಿಜೆಪಿಗೆ ಸಮಸ್ಯೆ ಎದುರಾಗಿದೆ. ಈ 40 ಸ್ಥಾನಗಳಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಾಮಪತ್ರ ಸಲ್ಲಿಸುವ ಕೊನೇ ದಿನಾಂಕ ಏ.20ರ ವರೆಗೆ ಎಳೆಯುವ ಸಾಧ್ಯತೆಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೊಳಗೊಂಡ

40 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಜೆಪಿಗೆ ಕಗ್ಗಂಟು Read More »

error: Content is protected !!
Scroll to Top