ದೇಶ

ಚುನಾವಣೆ ಅಖಾಡದಲ್ಲಿ ಗೆದ್ದು ಬೀಗಿದ ವಿನೇಶ್‌ ಫೋಗಟ್‌

ಹೊಸದಿಲ್ಲಿ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಹಳ ಕುತೂಹಲ ಕೆರಳಿಸಿದ್ದ ಕ್ಷೇತ್ರ ಜೂಲಾನಾ. ಇದಕ್ಕೆ ಕಾರಣ ಈ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ನಲ್ಲಿ ಕುಸ್ತಿ ಪಟು ವಿನೇಶ್‌ ಫೋಗಟ್‌ ಸ್ಪರ್ಧೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭವಿಸುತ್ತಿದ್ದರೂ ವಿನೇಶ್‌ ಫೋಗಟ್‌ ಮಾತ್ರ ಗೆದ್ದು ಬೀಗಿದ್ದಾರೆ. ಕುಸ್ತಿ ಪಟು ವಿನೇಶ್‌ ಫೋಗಟ್‌ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ ಮತ್ತು ವಿನೇಶ್‌ ಫೋಗಟ್‌ ಮಧ್ಯೆ ನೇರಾನೇರ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ […]

ಚುನಾವಣೆ ಅಖಾಡದಲ್ಲಿ ಗೆದ್ದು ಬೀಗಿದ ವಿನೇಶ್‌ ಫೋಗಟ್‌ Read More »

ಹರ್ಯಾಣದಲ್ಲಿ ಹಾವು ಏಣಿ ಆಟ

ಬಿಜೆಪಿಗೆ ಅಲ್ಪ ಮುನ್ನಡೆ ಹೊಸದಿಲ್ಲಿ: ಹರ್ಯಾಣದಲ್ಲಿ ಹಾವು-ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ ಮುನ್ನಡೆ ಸಾಧಿಸಿದೆ.ಬೆಳಗ್ಗಿನ 9 ಗಂಟೆಯ ಟ್ರೆಂಡ್‌ ವೇಳೆ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಆದರೆ 10 ಗಂಟೆಯ ಟ್ರೆಂಡ್‌ಗಾಗುವಾಗ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್‌ 41 ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಹರ್ಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿ ಒಕ್ಕೂಟ ಅಲ್ಪ ಮುನ್ನಡೆಯಲ್ಲಿದೆ.

ಹರ್ಯಾಣದಲ್ಲಿ ಹಾವು ಏಣಿ ಆಟ Read More »

ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ

ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ ಶುರು ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಭರ್ಜರಿ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರ್ಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದ್ದಾರೆ. ಬೆಳಗ್ಗೆ 9ರ ವೇಳೆಗೆ ಹರ್ಯಾಣದಲ್ಲಿ ಕಾಂಗ್ರೆಸ್‌ 62, ಬಿಜೆಪಿ 23, ಐಎನ್‌ಎಲ್‌ಡಿ 1, ಜೆಜೆಪಿ 1 ಹಾಗೂ ಇತರ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ

ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ Read More »

ಹರ್ಯಾಣ, ಜಮ್ಮು-ಕಾಶ್ಮೀರ ಮತ ಎಣಿಕೆ ಇಂದು

ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್‌ ಮೈತ್ರಿಕೂಟ ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಈಂದು ಪ್ರಕಟವಾಗಲಿದೆ. ಮತ ಎಣಿಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಶುರುವಾಗಿದೆ. ಮಂಗಳವಾರ (ಅ.8) ಹೊರಬೀಳಲಿದೆ.ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಾಗಿರುವುದರಿಂದ ಫಲಿತಾಂಶದ ಕುರಿತು ದೇಶಾದ್ಯಂತ ಭಾರಿ ಕುತೂಹಲವಿದೆ. ಬಿಜೆಪಿನಾ, ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟನಾ, ಪಿಡಿಪಿಇಲ್ಲಿನ ಕಣದಲ್ಲಿರುವ ಪ್ರಮುಖ ಪಕ್ಷಗಳು.ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಿಗೆ ಅತ್ಯಂತ ಬಿಗು

ಹರ್ಯಾಣ, ಜಮ್ಮು-ಕಾಶ್ಮೀರ ಮತ ಎಣಿಕೆ ಇಂದು Read More »

ಕಚೇರಿಗೆ ಅಧಿಕಾರಿಗಳ ಅಕ್ರಮ ಪ್ರವೇಶ : ಮಲ್ಲಿಕಾರ್ಜುನ ಖರ್ಗೆ ಆರೋಪ

ಪೂರ್ವ ಮಾಹಿತಿ ನೀಡದೆ ಅಧಿಕಾರಿಗಳು ಕಚೇರಿಗೆ ಬಂದು ಹೋಗುತ್ತಿದ್ದಾರೆ ಎಂದು ದೂರು ಹೊಸದಿಲ್ಲಿ: ಕೇಂದ್ರ ಲೋಕೋಪಯೋಗಿ ಇಲಾಖೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಟಾಟಾ ಪ್ರಾಜೆಕ್ಟ್‌ಗಳ ಅಧಿಕಾರಿಗಳು ತನಗೆ ಮಾಹಿತಿ ನೀಡದೆ ಸಂಸತ್ತಿನ ಕೊಠಡಿಗೆ ಪ್ರವೇಶಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಅವರಿಗೆ ಪತ್ರ ಬರೆದಿದ್ದಾರೆ.ಸೆಪ್ಟೆಂಬರ್ 28 ರಂದು ಸಂಸತ್ ಭವನದಲ್ಲಿ ನನ್ನ ಚೇಂಬರ್ ಕೊಠಡಿ ಸಂಖ್ಯೆ ಜಿ-19ನ್ನು CPWD, CISF ಮತ್ತು ಟಾಟಾ ಪ್ರಾಜೆಕ್ಟ್‌ಗಳ ಅಧಿಕಾರಿಗಳು

ಕಚೇರಿಗೆ ಅಧಿಕಾರಿಗಳ ಅಕ್ರಮ ಪ್ರವೇಶ : ಮಲ್ಲಿಕಾರ್ಜುನ ಖರ್ಗೆ ಆರೋಪ Read More »

36 ನಕ್ಸಲರು ಎನ್‌ಕೌಂಟರ್‌ಗೆ ಬಲಿ

ರಾಯ್‌ಪುರ: ಛತ್ತೀಸ್‌ಗಢದ ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರು ಬಲಿಯಾಗಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭಾರಿ ಎನ್‌ಕೌಂಟರ್‌ ನಡೆದಿದ್ದು, ಕನಿಷ್ಠ 36 ನಕ್ಸಲರನ್ನು ಸಾಯಿಸಲಾಗಿದೆ. ಅಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.ನಾರಾಯಣಪುರ-ದಾಂತೇವಾಡ ಅಂತರ್‌ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು

36 ನಕ್ಸಲರು ಎನ್‌ಕೌಂಟರ್‌ಗೆ ಬಲಿ Read More »

ಹರ್ಯಾಣದಲ್ಲಿ ಇಂದು ಮತದಾನ

ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಹೋರಾಟದ ಕಣ ಚಂಡೀಗಢ: 90 ಸದಸ್ಯ ಬಲದ ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ.ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದು, ದಶಕದ ನಂತರ ಕಾಂಗ್ರೆಸ್ ಪುನರಾಗಮನದ ತವಕಲ್ಲಿದೆ. ಅ.8ರಂದು ಮತ ಎಣಿಕೆ ನಡೆಯಲಿದೆ.8,821 ಶತಾಯುಷಿಗಳು ಸೇರಿ 2,03,54,350 ಮತದಾರರಿದ್ದಾರೆ.

ಹರ್ಯಾಣದಲ್ಲಿ ಇಂದು ಮತದಾನ Read More »

ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ಸಿಬಿಐ, ಪೊಲೀಸ್‌, ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚನೆ ಹೊಸದಿಲ್ಲಿ : ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಮತ್ತು ಮೀನಿನ ಕೊಬ್ಬಿನಂಶ ಸೇರಿಸಿರುವ ವಿವಾದದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ ವಿಶ್ವನಾಥನ್ ಅವರ ಪೀಠ ಈ ಪ್ರಕರಣದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ಆದೇಶಿಸಿ ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ಸೂಚಿಸಿದೆ.ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ

ತಿರುಪತಿ ಲಡ್ಡು ವಿವಾದ : ಹೊಸ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ Read More »

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌

ಕರ್ನಾಟಕದ ಮೂರು ನಗರಗಳು ಅಪಾಯಕಾರಿ ಎಂದು ಗುರುತಿಸಿದ ಗ್ರೀನ್‌ಪೀಸ್‌ ವರದಿ ಮಂಗಳೂರು: ಅತಿಹೆಚ್ಚು ಮಾಲಿನ್ಯವಿರುವ ನಗರಗಳಲ್ಲಿ ಮಂಗಳೂರು ಕೂಡ ಸೇರಿದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ.ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್‌ಪೀಸ್ ಸಂಸ್ಥೆ ವರದಿ ಅಧರಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠ ನೋಟಿಸ್‌ ನೀಡಿದೆ. ಬೆಂಗಳೂರು, ಮೈಸೂರು ಮತ್ತು ಮಂಗಳೂರು ಕರ್ನಾಟಕದಲ್ಲಿ ಅತಿ ಹೆಚ್ಚು ಮಾಲಿನ್ಯವಿರುವ ನಗರಗಳು ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಳ : ಹಸಿರು ಪೀಠದಿಂದ ನೋಟಿಸ್‌ Read More »

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ

ದೇಶದ ಜನಸಂಖ್ಯೆಯ ಸ್ವರೂಪ ಬದಲಾಯಿಸುವ ಷಡ್ಯಂತ್ರ ಎಂದ ನ್ಯಾಯಾಧೀಶರು ಲಖನೌ: ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿದೆ ಮತ್ತು ಇದಕ್ಕೆ ವಿದೇಶಗಳಿಂದ ಹಣಕಾಸಿನ ನೆರವು ಸಿಗುತ್ತಿದೆ ಎಂದು ನ್ಯಾಯಾಲಯವೇ ಹೇಳಿದೆ. ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯ ಬಲವಂತದ ಮದುವೆ ಮತ್ತು ಮತಾಂತರದ ಪ್ರಕರಣವೊಂದರ ತೀರ್ಪು ನೀಡುವಾಗ ಭಾರತದಲ್ಲಿ ಲವ್‌ ಜಿಹಾದ್‌ ನಡೆಯುತ್ತಿರುವುದು ನಿಜ ಮತ್ತು ದೇಶದ ಜನಸಂಖ್ಯೆಯ ಸ್ವರೂಪವನ್ನು ಬದಲಾಯಿಸುವ ಉದ್ದೇಶ ಇದರ ಹಿಂದೆ ಇರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿಬೇಕೆಂದು ಹೇಳಿ ಪ್ರಕರಣದ ಆರೋಪಿಗೆ ಆಜೀವ ಕಾರಾಗೃಹ ವಾಸದ

ವಿದೇಶಿ ನೆರವಿನೊಂದಿಗೆ ನಡೆಯುತ್ತಿದೆ ಲವ್‌ ಜಿಹಾದ್‌ : ನ್ಯಾಯಾಲಯವೇ ಹೇಳಿದ ಸತ್ಯ Read More »

error: Content is protected !!
Scroll to Top