ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಕ್ಷಮಿಸಲಾರದ ಅಪರಾಧವಾಗಿದ್ದು, ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿ ಸಭೆ ಕರೆದು, ಸುಪ್ರೀಂಕೋರ್ಟ್ ಆದೇಶ ನೀಡುವವರೆಗೂ ಗಡಿ ವಿಚಾರ ಕುರಿತಂತೆಯೂ ಯಾರೊಬ್ಬರೂ […]










