ದೇಶ

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ

60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಮಹಿಳಾ ಶಾಸಕರ ಆಯ್ಕೆ ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಶಾಸಕರು, ಕ್ರೂಸ್ ಮತ್ತು […]

ಇತಿಹಾಸ ಸೃಷ್ಟಿಸಿದ ಕ್ಷಣ: ನಾಗಲ್ಯಾಂಡ್‌ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ Read More »

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್

ನಾಗಾಲ್ಯಾಂಡ್​ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನೆಫಿಯು ರಿಯೊ ಗುವಾಹಟಿ : ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಕೆ ಸಂಗ್ಮಾ ಮಾ. 7 ರಂದು ಸತತ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಶಿಲ್ಲಾಂಗ್‌ನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪ್ರೆಸ್ಟೋನ್ ಟೈನ್‌ಸಾಂಗ್ ಅವರು ಉಪಮುಖ್ಯಮಂತ್ರಿಯಾಗಿ ಮತ್ತು ಕೆಲವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ,

ಮೇಘಾಲಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಸಂಗ್ಮಾ ಕಾನ್ರಾಡ್ Read More »

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಹೇಳುವುದರ ಮೂಲಕ ಫಾಕ್ಸ್‌ಕಾನ್ ತೆರೆ ಎಳೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿ, ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ,

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ: ಫಾಕ್ಸ್‌ಕಾನ್ Read More »

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಚೇರ್ಮನ್ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪಗೆ ಹೈಕೋಟರ್ಸ್‌ ಏಕಸದಸ್ಯ ಪೀಠದಿಂದ ಮಧ್ಯಂತರ ಜಾಮೀನು ಮಂಜೂರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ

ಶಾಸಕ ಮಾಡಾಳ್‌ಗೆ ಮಧ್ಯಂತರ ಜಾಮೀನು Read More »

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಸರಕಾರಕ್ಕೆ ಇನ್ನೊಂದು ತಲೆನೋವು ಬೆಂಗಳೂರು: ಸರ್ಕಾರಿ ನೌಕರರ ನಂತರ ಇದೀಗ ಸಾರಿಗೆ ನೌಕರರು ಮುಷ್ಕರ ಹೂಡಲು ಮುಂದಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.24ರಿಂದ ಅನಿರ್ದಿಷ್ಟಾವಧಿ ಧರಣಿ ಮಾಡಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಸಾರಿಗೆ ನಿಗಮ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ನಡೆಯಲಿದ್ದು, ಧರಣಿ ಸಂಬಂಧ ಇಂದು ಕಾರ್ಮಿಕ ಇಲಾಖೆಗೆ ಸಾರಿಗೆ ನೌಕರರು ನೋಟಿಸ್ ನೀಡಲಿದ್ದಾರೆ. ರಾಜ್ಯದ ನಾಲ್ಕು ನಿಗಮಗಳ ಬಸ್​​ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಾರಿಗೆ ನೌಕರರ ಕೂಟ ಈಗಾಗಲೇ

ಮಾ.24ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ

ಅಂಬೇಡ್ಕರ್‌ ಜಯಂತಿಯಿಂದ ಬುದ್ಧ ಜಯಂತಿ ತನಕ ಯಾತ್ರೆ ಹೊಸದಿಲ್ಲಿ : ಬಿಜೆಪಿಯ ಎಸ್‌.ಸಿ ಮೋರ್ಚಾ ಅಂಬೇಡ್ಕರ್ ಜಯಂತಿ ದಿನವಾದ ಏ.14ರಿಂದ ಘರ್ ಘರ್ ಜೋಡೊ ಕಾರ್ಯಕ್ರಮ ಆರಂಭಿಸಲಿದೆ. ಇದು ಎಸ್‌ಸಿ ಸಮುದಾಯವನ್ನು ತಲುಪುವ ಬಿಜೆಪಿ ನಡೆಸುವ ಯಾತ್ರೆ. 21 ದಿನಗಳ ಈ ಯಾತ್ರೆ ಅಂಬೇಡ್ಕರ್‌ ಜಯಂತಿಯಂದು ಆರಂಭವಾಗಿ ಬುದ್ಧ ಜಯಂತಿ ದಿನವಾದ ಮೇ 5ರಂದು ಕೊನೆಗೊಳ್ಳಲಿದೆ.ಈ ಕಾರ್ಯಕ್ರಮಕ್ಕಾಗಿ ಬಿಜೆಪಿ ಎಸ್‌ಸಿ ಮೋರ್ಚಾ 11 ಸದಸ್ಯರ ರಾಷ್ಟ್ರೀಯ ಸಮಿತಿಯನ್ನು ರಚಿಸಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾವಾರು ಸಮಿತಿಗಳನ್ನು

ಏ.14ರಿಂದ ಬಿಜೆಪಿ ಘರ್ ಘರ್ ಜೋಡೊ ಕಾರ್ಯಕ್ರಮ Read More »

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ

200 ಕೋ. ರೂ. ಹಗರಣಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ಬೆಂಗಳೂರು : ಕಾಂಗ್ರೆಸ್ ಆಡಳಿತದ ಐದು ವರ್ಷಗಳಲ್ಲಿ ಕಾಫಿ, ತಿಂಡಿ, ಬಿಸ್ಕತ್‌ಗೆ 200 ಕೋ.ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2013-14 ರಿಂದ 2017-18 ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 3.26 ಕೋ. ರೂ. ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ ಖರ್ಚಾಗಿದ್ದರೆ,

ಊಟ, ತಿಂಡಿ ಖರ್ಚು 3.26 ಕೋ. ರೂ. ಮಾತ್ರ ಉಳಿದದ್ದು ಬಿಜೆಪಿ ಸುಳ್ಳಿನ ಕಾರ್ಖಾನೆಯ ಲೆಕ್ಕ Read More »

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ

ಅರಬ್ಬೀ ಸಮುದ್ರದ ಆಂಟಿಸೈಕ್ಲೋನ್‌ನಿಂದ ನಾಲ್ಕು ದಿನ ಬೀಸಿದ ಬಿಸಿಗಾಳಿ ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾದ ಆಂಟಿಸೈಕ್ಲೋನ್‌ (Anticyclone) ಪರಿಣಾಮ ಕರಾವಳಿ ಪ್ರದೇಶದಲ್ಲಿ ನಾಲ್ಕು ದಿನ ಬಿಸಿಗಾಳಿ ಬೀಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಸೋಮವಾರದವರೆ ಬಿಸಿ ಗಾಳಿ ಬೀಸಿದೆ. ಈ ಬೇಸಿಗೆಯಲ್ಲಿ ಬಿಸಿಗಾಳಿ ಬೀಸಿರುವುದು ಇದೇ ಮೊದಲು. ಬಿಸಿಗಾಳಿಯಿಂದಾಗಿ ಶನಿವಾರ ಕೆಲವೆಡೆ 40 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿತ್ತು. ಇದು ಸಾಮನ್ಯ ತಾಪಮಾನಕ್ಕಿಂತ 6

ಕರಾವಳಿಯ ತಾಪಮಾನ ಏರಿಕೆಗೆ ಬಿಸಿಗಾಳಿ ಕಾರಣ Read More »

ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ

ಇಡೀ ಮಸೀದಿಗೆ ಕಪ್ಪು ಪ್ಲಾಸ್ಟಿಕ್‌ ಕವರ್‌ ಲಖನೌ : ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್​ನಿಂದ ಮುಚ್ಚಲಾಗಿದೆ.ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್‌ನಿಂದ

ಹೋಳಿಯ ಬಣ್ಣ ಸೋಕಬಾರದೆಂದು ಮಸೀದಿಗೆ ಟಾರ್ಪಾಲು ಹೊದಿಕೆ Read More »

1.5 ಕೋ. ರೂ. ಆಸ್ತಿಯನ್ನು ಸರಕಾರಕ್ಕೆ ಕೊಟ್ಟ ವೃದ್ಧ

ಮಕ್ಕಳು ನೋಡಿಕೊಂಡಿಲ್ಲ ಎಂಬ ಸಿಟ್ಟಿನಲ್ಲಿ ದಾನ ಲಖನೌ : ಹಿರಿಯ ವ್ಯಕ್ತಿಯೊಬ್ಬರು ವೃದ್ಧಾಪ್ಯದಲ್ಲಿ ತನ್ನನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲಿನ ಸಿಟ್ಟಿನಲ್ಲಿ ಎಲ್ಲ 1.5 ಕೋ. ರೂ. ಆಸ್ತಿಯನ್ನು ಉತ್ತರ ಪ್ರದೇಶ ಸರಕಾರಕ್ಕೆ ಉಯಿಲು ಬರೆದುಕೊಟ್ಟಿದ್ದಾರೆ. ನಾಥು ಸಿಂಗ್ ಎಂಬ 85ರ ಹರೆಯದ ವೃದ್ಧ ತಮ್ಮ ಐವರು ಮಕ್ಕಳಲ್ಲಿ ಯಾರೂ ಕೊನೆಯ ಕಾಲದಲ್ಲಿ ನೋಡಿಕೊಳ್ಳಲು ಮುಂದೆ ಬಾರದಿದ್ದಾಗ 1.5 ಕೋಟಿ ಮೌಲ್ಯದ ಆಸ್ತಿಯನ್ನು ಉತ್ತರಪ್ರದೇಶದ ಸರ್ಕಾರಕ್ಕೆ ಬರೆದುಕೊಟ್ಟಿದ್ದಾರೆ. ಅಲ್ಲದೆ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ.

1.5 ಕೋ. ರೂ. ಆಸ್ತಿಯನ್ನು ಸರಕಾರಕ್ಕೆ ಕೊಟ್ಟ ವೃದ್ಧ Read More »

error: Content is protected !!
Scroll to Top