ದೇಶ

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ

ಕಣಿವೆ ರಾಜ್ಯದಲ್ಲಿ ಹತ್ತು ವರ್ಷದ ಬಳಿಕ ವಿಧಾನಸಭೆ ಚುನಾವಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹತ್ತು ವರ್ಷಗಳ ಬಳಿಕ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ 2014ರ ಬಳಿಕ ಮೊದಲ ಅಸೆಂಬ್ಲಿ ಚುನಾವಣೆ ನಡೆಯುತ್ತಿದೆ. 2019ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಮೊದಲ ಬಾರಿ ವಿಧಾನಸಭೆ ಚುನಾವಣೆ […]

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ Read More »

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ

ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಷಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅರವಿಂದ ಕೇಜ್ರಿವಾಲ್‌ ಇಂದು ನಡೆದ ಮುಖ್ಯಮಂತ್ರಿ ಆಯ್ಕೆ ಸಭೆಯಲ್ಲಿ ಆತಿಷಿ ಮರ್ಲೆನಾ ಅವರ ಹೆಸರನ್ನು ಪ್ರಾಸ್ತಾವಿಸಿದ್ದು ಅದು ವಿರೋಧವಿಲ್ಲದೆ ಅಂಗೀಕಾರಗೊಂಡಿದೆ. ಈ ಮೂಲಕ ಮತೊಮ್ಮೆ ದಿಲ್ಲಿಗೆ ಮಹಿಳಾ ಮುಖ್ಯಮಂತ್ರಿಯೊಬ್ಬರು ಲಭಿಸಿದಂತಾಗಿದೆ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್‌ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ದಿಲ್ಲಿ ಮುಖ್ಯಮಂತ್ರಿಯಾಗಿದ್ದರು.ಕೇಜ್ರಿವಾಲ್‌ ಸರಕಾರದಲ್ಲಿ ಹಣಕಾಸು, ಶಿಕ್ಷಣ ಮತ್ತಿತರ ಮಹತ್ವದ

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ Read More »

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ ಪರಿಗಣನೆ : ವಿ.ಸೋಮಣ್ಣ

ವಿಲೀನಗೊಳಿಸಿ ರೈಲ್ವೆ ಸೇವೆ ಸುಧಾರಿಸಲು ಕರಾವಳಿ ಜನರ ಬೇಡಿಕೆ ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕೆಂಬ ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಲಿದೆ. ರೈಲ್ವೆ ಖಾತೆಯ ಸಹಾಯಕ ಸಚಿವ ವಿ.ಸೋಮಣ್ಣ ಅವರು ಈ ಕುರಿತು ಸುಳಿವು ನೀಡಿದ್ದಾರೆ.ಜನರಿಗೆ ನೀಡುವ ಸೇವೆಗಳನ್ನು ಸುಧಾರಿಸುವುದಕ್ಕಾಗಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವಿ.ಸೋಮಣ್ಣ ಹೇಳಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಪುಣೆ-ಹುಬ್ಬಳ್ಳಿ ನಡುವಣ ವಂದೇ ಭಾರತ್

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ ಪರಿಗಣನೆ : ವಿ.ಸೋಮಣ್ಣ Read More »

ಪ್ರಧಾನಿ ನರೇಂದ್ರ ಮೋದಿಗಿಂದು ಹುಟ್ಟುಹಬ್ಬ ಸಂಭ್ರಮ

ದೇಶಾದ್ಯಂತ ಸೇವಾ ಕಾರ್ಯಗಳು, ಬಡವರಿಗೆ ನೆರವು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಗೆ ಇಂದು 74ನೇ ಹುಟ್ಟುಹಬ್ಬದ ಸಂಭ್ರಮ. ಬಿಜೆಪಿ ನಾಯಕರು, ಹಿತೈಷಿಗಳು ಬೆಳಗ್ಗಿನಿಂದಲೇ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಪ್ರಾರಂಭಿಸಿದ್ದಾರೆ. ಹುಟ್ಟುಹಬ್ಬದಂದು ಮೋದಿ ಯಾವುದೇ ಆಚರಣೆ ಅಥವಾ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದಿಲ್ಲ. ಆದರೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸುತ್ತಾರೆ. ಸೇವಾ ಪಾಕ್ಷಿಕ, ಸೇವಾ ಪರ್ವ, ಸ್ವಚ್ಛತೆ, ಬಡವರಿಗೆ ನೆರವು, ರಕ್ತದಾನ ಮುಂತಾದ ಸಾಮಾಜಿಕ ಸೇವೆಗಳು ಮೋದಿ

ಪ್ರಧಾನಿ ನರೇಂದ್ರ ಮೋದಿಗಿಂದು ಹುಟ್ಟುಹಬ್ಬ ಸಂಭ್ರಮ Read More »

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ನಡೆಸಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು. ಈ ಕುಟುಂಬ ವಾಮಾಚಾರ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ ಭಾವಿಸಿ ಐವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿ ಸಾಯಿಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ Read More »

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ

ಕಾಂಗ್ರೆಸ್‌ ನಾಯಕರು ಕೆಂಡಾಮಂಡಲ ಹೊಸದಿಲ್ಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಹೇಳಿರುವುದು ಕಾಂಗ್ರೆಸಿಗರನ್ನು ಕೆರಳಿಸಿದೆ. ಅವರ ಹೇಳಿಕೆಯನ್ನು ದುರದೃಷ್ಟಕರ ಎಂದು ಬಣ್ಣಿಸಿರುವ ಕಾಂಗ್ರೆಸ್‌ ನಾಯಕರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಖಂಡಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಂಬರ್‌ 1 ಭಯೋತ್ಪಾದಕ ಎಂದು ಟೀಕಿಸಿದ್ದಾರೆ. ರಾಹುಲ್‌

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ Read More »

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ?

ಹೊಸದಿಲ್ಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ‌. ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿ ನೀಡಿತ್ತು. ಯಾವಾಗಿಂದ ಆರಂಭಿಸಬೇಕು ಎಂದು ತಿಳಿಸದೆ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ? Read More »

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು

ಲಖನೌ: ಭಾರಿ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.ಇದುವರೆಗೆ ಅಧಿಕಾರಿಗಳು ಒಟ್ಟು ಐವರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಬಲಿಯಾದ 10 ಮಂದಿಯಲ್ಲಿ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು ಎಂದು ವರದಿಯಾಗಿದೆ.ಮಳೆಯಿಂದಾಗಿ ಬಿಲ್ಡಿಂಗ್‌ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರಿ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು Read More »

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರೊಂದು  ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಇಂದು ಮುಂಜಾನೆ 4:30 ರ ಸುಮಾರಿಗೆ ಯಾತ್ರಿಕರು – ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು – ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು Read More »

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ದಿನವಿಡೀ ಶೋಧಕಾರ್ಯ ಮುಂದುವರಿದಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಅಡಗಿರುವ ಉಗ್ರರನ್ನು ಪತ್ತೆಹಚ್ಚಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.ಉಗ್ರರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದವರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಕಾಳಗದಲ್ಲಿ

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ Read More »

error: Content is protected !!
Scroll to Top