ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.ನೌಶೇರಾದ ಲಾಮ್ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.ಕತ್ತಲೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಉಗ್ರರ ಚಲನವಲನ ಅರಿತು ಗುಂಡಿನ ದಾಳಿ ನಡೆಸಿದ್ದಾರೆ. ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ Read More »