ದೇಶ

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ

ವೇದಿಕೆಯಲ್ಲೇ ಶೂ ಕಳಚಿ ಪ್ರತಿಜ್ಞೆ ಜಾರಿ ಚೆನ್ನೈ : ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕಿತ್ತೆಸೆಯುವ ತನಕ ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈಯವರು ಮಾಡಿರುವ ಘೋರ ಪ್ರತಿಜ್ಞೆ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆಗೆ ನ್ಯಾಯ ಕೊಡಿಸಲು ಬಿಜೆಪಿ ರಾಜ್ಯವ್ಯಾಪಿಯಾಗಿ ಹೋರಾಟ ನಡೆಸುತ್ತಿದೆ. ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಮಿಳುನಾಡಿನ ಕೇಸರಿ ಪಡೆ ಆಂದೋಲನದ ಹಾದಿ […]

ದೇಶಾದ್ಯಂತ ಸಂಚಲನ ಮೂಡಿಸಿದ ಅಣ್ಣಾಮಲೈ ಘೋರ ಪ್ರತಿಜ್ಞೆ Read More »

ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಇಂದು ಅಂತಿಮ ದರ್ಶನಕ್ಕೆ ಅವಕಾಶ ಹೊಸದಿಲ್ಲಿ: ನಿನ್ನೆ ರಾತ್ರಿ ನಿಧನರಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದಿಲ್ಲಿ ರಾಜ್‌ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು

ನಾಳೆ ದಿಲ್ಲಿ ರಾಜ್‌ಘಾಟ್‌ನಲ್ಲಿ ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ

ದೆಹಲಿ : ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾದರು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ, ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್‍ ಅವರು 2004 ರಿಂದ 2014 ರ ವರೆಗೆ ಭಾರತದ ಪ್ರಧಾನಿಯಾಗಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್ ಹೆಸರು ಪಡೆದಿದ್ದರು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ Read More »

ವಿಷ ಕುಡಿದು ಯುವತಿ ಆತ್ಮಹತ್ಯೆ

ಶಿವಮೊಗ್ಗ : ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಮೃತಳು  ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತಿದ್ದು, ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ದಿ ಹೇಳಿದ್ದಾರೆ. ಈ ಹಿನ್ನಲೆ ಯುವತಿ ಕಳೆದ  ದಿನದ ಹಿಂದೆ ವಿಷ ಸೇವಿಸಿದ್ದು, ಆಕೆಯನ್ನು ಮೆಗ್ಗಾನ್‍ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷ ಕುಡಿದು ಯುವತಿ ಆತ್ಮಹತ್ಯೆ Read More »

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳಿಗೆ ತೀವ್ರ ಗಾಯಗಳಾಗಿದ್ದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು Read More »

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ

ಕಾಂಗ್ರೆಸ್‌ಗೆ ಸಿಕ್ಕಿದ್ದು 289 ಕೋ. ರೂ. ಮಾತ್ರ ಹೊಸದಿಲ್ಲಿ : 2023-24ನೇ ಹಣಕಾಸು ವರ್ಷದಲ್ಲಿ ಬಿಜೆಪಿಗೆ ಬರೋಬ್ಬರಿ 2,244 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಇದೇ ವೇಳೆ ಕಂಗ್ರೆಸ್‌ಗೆ ಸಿಕ್ಕಿರುವುದು 289 ಕೋ. ರೂ. ದೇಣಿಗೆ. ಬಿಜೆಪಿ ತನ್ನ ಘಟಕಗಳು, ವ್ಯಕ್ತಿಗಳು, ಟ್ರಸ್ಟ್ ಮತ್ತು ಕಾರ್ಪೊರೇಟ್ ಕಂಪನಿಗಳಿಂದ 20 ಸಾವಿರ ರೂ.ಗಿಂತ ಅಧಿಕ ಮೊತ್ತದ ಒಟ್ಟು 2,244 ಕೋಟಿ ರೂ. ದೇಣಿಗೆ ಪಡೆದುಕೊಂಡಿದೆ.ಭಾರತೀಯ ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪಕ್ಷಗಳು ನೀಡಿದ ಮಾಹಿತಿಯನ್ನು ಅಪ್ಲೋಡ್‌ ಮಾಡಿದೆ. 2022-23ರ

ಬಿಜೆಪಿಗೆ ಅತ್ಯಧಿಕ 2,244 ಕೋ. ರೂ. ದೇಣಿಗೆ Read More »

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ

ತೆಕ್ಕಟ್ಟೆಯಿಂದ ಬೀಜಾಡಿಯವರೆಗೆ ಪಾರ್ಥಿವ ಶರೀರದ ಮೆರವಣಿಗೆ ಉಡುಪಿ: ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪ ಬೀಜಾಡಿಯ ಅನೂಪ್‌ ಪೂಜಾರಿ ಸಹಿತ ಕರ್ನಾಟಕದ ಮೂವರು ಯೋಧರ ಪಾರ್ಥಿವ ಶರೀರ ಇಂದು ಅವರವರ ಹುಟ್ಟೂರಿಗೆ ತಲುಪಲಿವೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆಯಾಗಲಿದೆ. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಸುಮಾರು 5,000 ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು

ಇಂದು ಬೀಜಾಡಿಯಲ್ಲಿ ಹುತಾತ್ಮ ಯೋಧ ಅನೂಪ್‌ ಪೂಜಾರಿ ಅಂತ್ಯಕ್ರಿಯೆ Read More »

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು

ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೋರ್ವ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ  ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಡುಗೆ ಸಹಾಯಕನಾಗಿದ್ದ ವ್ಯಕ್ತಿಯೋರ್ವ ಮಕ್ಕಳಿಗೆ  ಕಿರುಕುಳ ನೀಡುವುದಲ್ಲದೆ  ‘ಬ್ಯಾಡ್ ಟಚ್’ ಮಾಡುತ್ತಾನೆ ಎಂದು ವಿದ್ಯಾರ್ಥಿಗಳು ಮಕ್ಕಳ ಸಲಹಾ ಪೆಟ್ಟಿಗೆಯಲ್ಲಿ ದೂರಿದ್ದಾರೆ.  ಸಲಹಾ ಪೆಟ್ಟಿಗೆಯನ್ನು ಪರಿಶೀಲಿಸುವ ವೇಳೆ ಶಾಲಾ ಮುಖ್ಯೋಪಾಧ್ಯಾಯರಿಗೆ ವಿಷಯ ಬೆಳಕಿಗೆ ಬಂದಿದೆ. ಈ ಆರೋಪದ ಬಗ್ಗೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಅಡುಗೆ ಸಹಾಯಕನ ವಿರುದ್ಧ ಡಿ.23ರಂದು ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ | ಸಿಬ್ಬಂದಿಯ ವಿರುದ್ಧ ದೂರು Read More »

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..!

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಶಾಪ್, ಎಲೆಕ್ನಿಕಲ್ ಹಾಗೂ ಹೋಟೆಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಬಲೆಗೆ ಸಿಲುಕಿ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.  ಎಲೆಕ್ನಿಕ್ ಬ್ಯಾಟರಿಗಳು, ಎಲೆಕ್ನಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಒಟ್ಟು ಅಂದಾಜು 30 ಲಕ್ಷದ ವಸ್ತುಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ತಗುಲಿ ಸುತ್ತಲೆಲ್ಲಾ

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..! Read More »

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ  ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದು, ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ  ಮೃತಪಟ್ಟ ಯೋಧ ಕರ್ನಾಟಕ ಮೂಲದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್

ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು Read More »

error: Content is protected !!
Scroll to Top