ದೇಶ

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಪದಗ್ರಹಣ

ಹಲವು ಮುಖ್ಯಮಂತ್ರಿಗಳ ಸಹಿತ ಗಣ್ಯರು ಭಾಗಿಯಾಗುವ ನಿರೀಕ್ಷೆ ನವದೆಹಲಿ: ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು ದೇಶದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಶುಕ್ರವಾರ ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕರ್ನಾಟಕ […]

ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಇಂದು ಪದಗ್ರಹಣ Read More »

ಬಲವಂತವಾಗಿ ಇಸ್ಲಾಂ‌ಗೆ ಮತಾಂತರ: ಆರೋಪಿಗಳ ಬಂಧನ

ಚೆನ್ನೈ: ವಿವಾಹಿತ ಮಹಿಳೆಯೊಬ್ಬಳನ್ನು ಇಸ್ಲಾಂ ಮತಕ್ಕೆ ಮತಾಂತರ ಮಾಡಿ, ವಿವಾಹವಾಗುವಂತೆ ಪೀಡಿಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ‌ನೊಯ್ಡಾ ಪೊಲೀಸರು ತಿಳಿಸಿದ್ದಾರೆ. ತನ್ನ ಮಗಳನ್ನು ಈ ಸಂಕಷ್ಟದಿಂದ ಪಾರು ಮಾಡುವಂತೆ ಆಕೆಯ ತಾಯಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಆ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಕೋರ್ಟ್ ಆದೇಶದಂತೆ ಆರು ವರ್ಷದ ಮಗುವನ್ನು ಹೊಂದಿರುವ ಮಹಿಳೆಯನ್ನು ಪೊಲೀಸರು ಚೆನ್ನೈನಲ್ಲಿ ಪತ್ತೆಹಚ್ಚಿ ಮರಳಿ ಕರೆತಂದಿದ್ದಾರೆ. ಆರೋಪಿಗಳು ಮಹಿಳೆಯನ್ನು ಸಂಬಂಧಕ್ಕೆ ಆಮಿಷವೊಡ್ಡಿ, ಬಲವಂತವಾಗಿ ಮತಾಂತರಿಸಿದ ನಂತರ ಆಕೆಯ ಹೆಸರನ್ನು

ಬಲವಂತವಾಗಿ ಇಸ್ಲಾಂ‌ಗೆ ಮತಾಂತರ: ಆರೋಪಿಗಳ ಬಂಧನ Read More »

ಪ್ರಧಾನಿ ಮೋದಿ ದೇಶದ ಯುವ ಜನಾಂಗಕ್ಕೆ ಸ್ಪೂರ್ತಿ: ವಿವೇಕ್ ಒಬೆರಾಯ್

ಮುಂಬೈ: ದೇಶದ ಯುವ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೂರ್ತಿ ಎಂದು ನಟ ವಿವೇಕ್ ಒಬೆರಾಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆ. 17 ರಂದು ಪ್ರಧಾನಿ ಮೋದಿ ಅವರ ಜನ್ಮದಿನ ಮತ್ತು ಅಖಿಲ ಭಾರತೀಯ ತೇರಾಪಂತ್ ಯುವಕ್ ಪರಿಷತ್ (ABTYP) ನ ಸಂಸ್ಥಾಪನಾ ದಿನ ಎರಡೂ ಆಗಿದ್ದು, ಈ ಹಿನ್ನೆಲೆಯಲ್ಲಿ ನಾವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ ಎಂದು ವಿವೇಕ್ ಒಬೆರಾಯ್ ತಿಳಿಸಿದ್ದಾರೆ. ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ರಕ್ತದಾನ, ನೇತ್ರದಾನ,

ಪ್ರಧಾನಿ ಮೋದಿ ದೇಶದ ಯುವ ಜನಾಂಗಕ್ಕೆ ಸ್ಪೂರ್ತಿ: ವಿವೇಕ್ ಒಬೆರಾಯ್ Read More »

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ‌ರಾಧಾಕೃಷ್ಣನ್ ಅವರು ಸ್ಪಷ್ಟ ಬಹುಮತ ಪಡೆದು ಉಪರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದಾರೆ. ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಧಾಕೃಷ್ಣನ್ ಅವರಿಗೆ 452 ಮತಗಳು ಲಭಿಸಿದ್ದು, ಆವರು ತಮ್ಮ ಪ್ರತಿಸ್ಪರ್ಧಿ ಇಂಡಿ ಒಕ್ಕೂಟದ ಅಭ್ಯರ್ಥಿ, ಸುಪ್ರೀಂ ಕೋರ್ಟ್‌ನ ಮಾಜಿ ಜಡ್ಜ್

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ Read More »

ಇಂದಿನಿಂದ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಸಮರ

ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನ 8 ದೇಶಗಳು, 19 ಪಂದ್ಯ ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಭಾರತ ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಭಾರತ, ಪಾಕಿಸ್ತಾನ,

ಇಂದಿನಿಂದ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಸಮರ Read More »

ಇಂದು ಉಪರಾಷ್ಟ್ರಪತಿ ಚುನಾವಣೆ : ರಾಧಾಕೃಷ್ಣನ್‌-ಸುದರ್ಶನ್‌ ರೆಡ್ಡಿ ನಡುವೆ ಸ್ಪರ್ಧೆ

ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್‌ ಗೆಲುವು ಬಹುತೇಕ ಖಚಿತ ನವದೆಹಲಿ: ಜಗದೀಪ್ ಧನ್‌ಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್, ಇಂಡಿ ಒಕ್ಕೂಟದ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ

ಇಂದು ಉಪರಾಷ್ಟ್ರಪತಿ ಚುನಾವಣೆ : ರಾಧಾಕೃಷ್ಣನ್‌-ಸುದರ್ಶನ್‌ ರೆಡ್ಡಿ ನಡುವೆ ಸ್ಪರ್ಧೆ Read More »

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ!

ಸಿಡ್ನಿ: ದಕ್ಷಿಣ ಭಾರತದ ಜನಪ್ರಿಯ ನಟಿ ನವ್ಯಾ ನಾಯರ್‌ ಮಲ್ಲಿಗೆ ಮುಡಿದ ಕಾರಣಕ್ಕೆ 1 ಲಕ್ಷ ರೂ.ಗೂ ಅಧಿಕ ಮೊತ್ತವನ್ನು ದಂಡದ ರೂಪದಲ್ಲಿ ತೆರಬೇಕಾಗಿ ಬಂದಿದೆ. ಆದರೆ ದಂಡ ಹಾಕಿರುವುದು ಭಾರತದಲ್ಲಿ ಅಲ್ಲ, ಬದಲಾಗಿದೆ ಆಸ್ಟ್ರೇಲಿಯಲ್ಲಿ. ಇತ್ತೀಚೆಗೆ ಆಸ್ಟ್ರೇಲಿಯದ ಮಲಯಾಳಂ ಸಂಘಟನೆಯವರು ಏರ್ಪಡಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ನವ್ಯಾ ನಾಯರ್‌ ಹೋಗಿದ್ದರು. ಮೆಲ್ಬೋರ್ನ್ ಏರ್‌ಪೋರ್ಟ್‌ಗೆ ಬಂದಿಳಿದ ನಟಿ ನವ್ಯಾ ನಾಯರ್‌ಗೆ ಅಲ್ಲಿನ ಅಧಿಕಾರಿಗಳು 1.14 ಲ.ರೂ. ದಂಡ ಹಾಕಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಓಣಂ

ಮಲ್ಲಿಗೆ ಮುಡಿದದ್ದಕ್ಕೆ 1 ಲ.ರೂ. ದಂಡ ತೆತ್ತ ನಟಿ! Read More »

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ

ಪೂರ್ಣ ಖಗ್ರಾಸ ಚಂದ್ರ ಗ್ರಹಣವನ್ನು ಕಣ್ತಂಬಿಕೊಂಡ ಜನ ಬೆಂಗಳೂರು : ಭಾನುವಾರ ರಾತ್ರಿ ನಭೋಮಂಡಲದಲ್ಲಿ ನಡೆದ ರಕ್ತ ಚಂದಿರನ ಚಮತ್ಕಾರವನ್ನು ಜಗತ್ತಿನಾದ್ಯಂತ ಜನರು ಕಣ್ತುಂಬಿಕೊಂಡು ಖುಷಿಪಟ್ಟರು. ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ ಗೋಚರಿಸಿತು. ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ರಾಹುಗ್ರಸ್ಥ ಚಂದ್ರ ಗ್ರಹಣ ಗೋಚರಿಸಿತು. ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇಡೀ ವಿಶ್ವ ಸಾಕ್ಷಿಯಾಯಿತು. ಸೂರ್ಯ, ಭೂಮಿ ಮತ್ತು ಚಂದ್ರರು ಒಂದೇ ಸಾಲಿನಲ್ಲಿ ಬಂದಿದ್ದ ಈ ನೆರಳು ಬೆಳಕಿನಾಟ ಜನರನ್ನು ನಿಬ್ಬೆರಗುಗೊಳಿಸಿತು.

ರಕ್ತ ವರ್ಣದಲ್ಲಿ ಕಾಣಿಸಿದ ಚಂದಿರ Read More »

ಇಂದು ಚಂದ್ರ ಗ್ರಹಣ : ಬರೋಬ್ಬರಿ 82 ನಿಮಿಷ ಕಡುಕೆಂಪು ಬಣ್ಣದಲ್ಲಿ ಕಂಗೊಳಿಸಲಿರುವ ಚಂದ್ರಮ

ಅಪರೂಪದ ಖಗೋಲ ವಿದ್ಯಮಾನವನ್ನು ವೀಕ್ಷಿಸಲು ಜಗತ್ತಿನಾದ್ಯಂತ ಕುತೂಹಲ ಮಂಗಳೂರು : ಇಂದು ರಾತ್ರಿ ಪೂರ್ಣ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದ್ದು, ಈ ಖಗೋಲ ವಿದ್ಯಮಾನವನ್ನು ವೀಕ್ಷಿಸಲು ಜಗತ್ತಿನಾದ್ಯಂತ ಖಗೋಲ ಆಸಕ್ತರು ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಇಂದಿನ ಚಂದ್ರ ಗ್ರಹಣದ ವೇಳೆ ಚಂದ್ರ ಬರೋಬ್ಬರಿ 82 ನಿಮಿಷಗಳಷ್ಟು ಹೊತ್ತು ಕಡುಕೆಂಪು ಬಣ್ಣದಲ್ಲಿ ಗೋಚರಿಸಲಿದ್ದಾನೆ. ಹೀಗಾಗಿ ಈ ಚಂದ್ರಗ್ರಹಣವನ್ನು ರಕ್ತಚಂದನ ಗ್ರಹಣ ಎಂದೂ ಕರೆಯುತ್ತಾರೆ. ಇದು ಒಂದು ಅಪರೂಪದ ಖಗೋಲ ವಿದ್ಯಮಾನವಾಗಿದೆ. ಇಷ್ಟು ದೀರ್ಘ ಹೊತ್ತು ಚಂದ್ರ ಕೆಂಬಣ್ಣದಲ್ಲಿ ಕಾಣುವುದು ಬಹಳ

ಇಂದು ಚಂದ್ರ ಗ್ರಹಣ : ಬರೋಬ್ಬರಿ 82 ನಿಮಿಷ ಕಡುಕೆಂಪು ಬಣ್ಣದಲ್ಲಿ ಕಂಗೊಳಿಸಲಿರುವ ಚಂದ್ರಮ Read More »

ಪರೀಕ್ಷೆ ಬರೆಯಲು ಹೆಲಿಕಾಪ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು!

ಮಳೆಯಿಂದ ರಸ್ತೆ ಬಂದ್‌ ಆದ ಕಾರಣ ಬಾಡಿಗೆ ಹೆಲಿಕಾಪ್ಟರ್‌ ಪ್ರಯಾಣ ಉತ್ತರಾಖಂಡ: ಉತ್ತರ ಭಾರತಾದ್ಯಂತ ಕಳೆದ ಒಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿದ್ದು, ಅನೇಕ ಅನಾಹುತಗಳನ್ನು ಸೃಷ್ಟಿಸಿದೆ. ಉತ್ತರಾಖಂಡದಲ್ಲಿ ಭೂಕುಸಿತ, ರಸ್ತೆ ಬಂದ್ ಮತ್ತಿತರ ಅನಾಹುತಗಳಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಪಿಥೋರ್​ಗಢದ ಪರೀಕ್ಷಾ ಕೇಂದ್ರದಲ್ಲಿ ಬಿ.ಇಡಿ ಪರೀಕ್ಷೆ ನಿಗದಿಯಾಗಿತ್ತು. ಯಾವ ಕಾರಣಕ್ಕೂ ಈ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎಂದು ನಾಲ್ವರು ವಿದ್ಯಾರ್ಥಿಗಳು ಖಾಸಗಿ ಹೆಲಿಕಾಪ್ಟರ್‌ ಬಾಡಿಗೆಗೆ ಪಡೆದು ಪರೀಕ್ಷಾ ಕೇಂದ್ರಕ್ಕೆ ಬಂದಿರುವುದು ಈಗ ಸುದ್ದಿಯಾಗಿದೆ. ಮಳೆಯಿಂದಾಗಿ ಉತ್ತರಾಖಂಡದಲ್ಲಿ

ಪರೀಕ್ಷೆ ಬರೆಯಲು ಹೆಲಿಕಾಪ್ಟರ್‌ನಲ್ಲಿ ಬಂದ ವಿದ್ಯಾರ್ಥಿಗಳು! Read More »

error: Content is protected !!
Scroll to Top