ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್ : 12 ಮಂದಿ ಸ್ಥಳದಲ್ಲೇ ಸಾವು
ಭೋಪಾಲ : ಮಧ್ಯಪ್ರದೇಶದ ಮಂಡಸೋರ್ ಜಿಲ್ಲೆಯಲ್ಲಿ ಭಾನುವಾರ ವ್ಯಾನ್ ಬಾವಿಗೆ ಬಿದ್ದು ಅದರಲ್ಲಿದ್ದ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ರಕ್ಷಿಸಲು ಬಾವಿಗೆ ಹಾರಿದ ಯುವಕನೂ ಸಾವಿಗೀಡಾಗಿದ್ದಾನೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ವ್ಯಾನಿನಲ್ಲಿ ಪ್ರಯಾಣಿಸುತ್ತಿದ್ದರು. ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ […]
ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್ : 12 ಮಂದಿ ಸ್ಥಳದಲ್ಲೇ ಸಾವು Read More »