ದೇಶ

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು

ದಾರುಣ ಅಂತ್ಯ ಕಂಡ ರೈಲಿನ ಬಾಗಿಲಲ್ಲಿ ನೇತಾಡುತ್ತಿದ್ದ ಪ್ರಯಾಣಿಕರು ಮುಂಬಯಿ: ಮಹಾನಗರದ ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗಿನ ಹೊತ್ತು ಕಿಕ್ಕಿರಿದು ತುಂಬಿದ್ದ ಬಾಗಿಲಲ್ಲಿ ನೇತಾಡುತ್ತಿದ್ದ ಸುಮಾರು 12-15 ಮಂದಿ ಹಳಿ ಮೇಲೆ ಬಿದ್ದಿದ್ದಾರೆ. ಈ ಪೈಕಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಸರಾದಿಂದ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಿಂದ ಹೋಗುತ್ತಿದ್ದ ಫಾಸ್ಟ್‌ ರೈಲಿನಲ್ಲಿ ಮುಂಬ್ರಾ ಮತ್ತು ದಿವಾ ರೈಲು ನಿಲ್ದಾಣಗಳ […]

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು Read More »

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ

ಐಪಿಎಲ್‌ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್‌ ಗೆದ್ದುಕೊಂಡ ಆರ್‌ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್‌ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ Read More »

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ

ಸಾಧನೆ, ಸವಾಲುಗಳ ನಡುವೆ ಮೋದಿ ಜನಪ್ರಿಯತೆ ಅಬಾಧಿತ ನವದೆಹಲಿ: ಅನೇಕ ಸವಾಲು ಮತ್ತು ಸಾಧನೆಗಳ ನಡುವೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯ ಒಂದನೇ ವರ್ಷವನ್ನು ಪೂರ್ಣಗೊಳಿಸಿದೆ. ಒಂದು ವರ್ಷದ ಅವಧಿಯಲ್ಲಿ ಮೋದಿ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇದರೊಂದಿಗೆ ಎನ್‌ಡಿಎ ಮತ್ತು ಮೋದಿ ಸತತ 11 ವರ್ಷ ಆಳ್ವಿಕೆ ನಡೆಸಿದಂತಾಗಿದೆ. ಈ ಹನ್ನೊಂದು ವರ್ಷಗಳಲ್ಲಿ ಮೋದಿ ಜನಪ್ರಿಯತೆ ಅಬಾಧಿತವಾಗಿ ಮುಂದುವರಿಯುತ್ತಿದೆ ಎನ್ನುವುದು ವಿಶೇಷ. ಲೋಕಸಭಾ ಚುನಾವಣೆಯಲ್ಲಿ

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ Read More »

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಥ್ರಿಲ್ಲರ್‌ ಸಿನಿಮಾ ಮಾದರಿ ಇದೆ ಈ ಪ್ರಕರಣ ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ ಬಳಿಕ ದಂಪತಿ ನಾಪತ್ತೆಯಾಗಿದ್ದ ಪ್ರಕರಣ ಥ್ರಿಲ್ಲರ್‌ ಸಿನಿಮಾ ಮಾದರಿ ಟ್ವಿಸ್ಟ್‌ ಪಡೆದುಕೊಂಡಿದ್ದು, ಪತಿಯನ್ನು ನವವಿವಾಹಿತ ಪತ್ನಿಯೇ ಕೊಲ್ಲಿಸಿರುವುದು ಬಯಲಾಗಿದೆ. ಹತ್ಯೆ ಆರೋಪದಲ್ಲಿ ಪೊಲೀಸರು ಪತ್ನಿಯನ್ನು ಬಂಧಿಸಿದ್ದಾರೆ. ಇಂದೋರ್‌ನ ದಂಪತಿ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ ಬಳಿಕ ನಿಗೂಢವಾಗಿ ನಾಪತ್ತೆಯಾದ ಪ್ರಕರಣ ದೇಶದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಟೂರಿಸ್ಟ್‌ ಗೈಡ್‌ ನೀಡಿದ್ದ ಸಣ್ಣ ಸುಳಿವೊಂದು ಇಡೀ ಪ್ರಕರಣವನ್ನು ಬಯಲೆಗೆಳೆಯಲು ಪೊಲೀಸರಿಗೆ ನೆರವಾಗಿದೆ. ಪತಿಯ ಕೊಲೆಗೆ ಸಂಚು

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ

ಮೈತೆಯಿ ಸಂಘಟನೆಯ ನಾಯಕನ ಬಂಧನ ವಿರೋಧಿಸಿ ಪ್ರತಿಭಟನೆ ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ Read More »

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ

ದೇಶದಲ್ಲಿ ಕಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖ ಎಂದು ವಿಶ್ವಬ್ಯಾಂಕ್‌ ವರದಿ ನವದೆಹಲಿ: ದೇಶದಲ್ಲಿ ಕಡಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಎಂದು ವರದಿಯೊಂದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರದ ಆಡಳಿತದಲ್ಲಿ ಕಳೆದೊಂದು ದಶಕದಲ್ಲಿ ಕಡುಬಡತನದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. 2011-12ರಲ್ಲಿ ಶೇ. 27.1 ಇದ್ದ ಕಡುಬಡತನ ಪ್ರಮಾಣ 2022-23ರಲ್ಲಿ ಶೇ.5.3ಕ್ಕೆ ಇಳಿದಿದೆ ಎಂದು ವಿಶ್ವಬ್ಯಾಂಕ್ ಅಂಕಿಅಂಶಗಳು ಬಹಿರಂಗಪಡಿಸಿವೆ. 2022-23ರ ಅವಧಿಯಲ್ಲಿ ಭಾರತದಲ್ಲಿ ಸುಮಾರು 75.24 ಮಿಲಿಯನ್ ಜನರು ತೀವ್ರ ಬಡತನದಲ್ಲಿದ್ದರು. ಇದು

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ Read More »

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ

50,000 ಅರೆಸೇನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರಿಂದ ಸರ್ಪಗಾವಲು ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಧರ್ಮ ಕೇಳಿ ಹತ್ಯೆಗೈದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರನಾಥ ಯಾತ್ರೆಗೆ ಗರಿಷ್ಠ ಭದ್ರತೆ ಒದಗಿಸಲು ಏರ್ಪಾಡು ಮಾಡಿದೆ. ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ ಯೋಜನೆಯನ್ನು ಜಾರಿಗೆ ತಂದಿದೆ. ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕೆ

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ Read More »

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡಿಂಗ್‌ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ವಿರುದ್ಧವೂ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವಿರಾಟ್‌ ಕೊಹ್ಲಿ ವಿರುದ್ಧವೂ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಕೇಸ್‌ ದಾಖಲಾಗಿದೆ. ಆದರೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ

ಆರ್‌ಸಿಬಿ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ ವಿರುದ್ಧವೂ ಆಕ್ರೋಶ Read More »

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ

ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಚೆನ್ನೈ: ಮಲಯಾಳಂ ಚಿತ್ರರಂಗದ ಖ್ಯಾತ ನಟ ಶೈನ್ ಟಾಮ್ ಚಾಕೊ ಹಾಗೂ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಳಗ್ಗೆ ತಮಿಳುನಾಡು ಬಳಿ ಅಪಘಾತಕ್ಕೀಡಾಗಿ ಚಾಕೊ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರಗಾಯಗಳಾಗಿವೆ. ಅಪಘಾತದ ಸಮಯದಲ್ಲಿ, ಶೈನ್, ಹಾಗೂ ಅವರ ತಾಯಿ, ಸಹೋದರ, ತಂದೆ ಮತ್ತು ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶೈನ್‌ ಮತ್ತು ಅವರ ತಾಯಿಯನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮಲಯಾಳಂ ನಟನ ತಂದೆ ಸಾವು, ನಟನಿಗೆ ಗಂಭೀರ ಗಾಯ Read More »

error: Content is protected !!
Scroll to Top