ದೇಶ

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲ್ಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು […]

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ

ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ಎದುರು ಮುಖಾಮುಖಿ ದುಬೈ: ಚಾಂಪಿಯನ್ಸ್ ಟ್ರೋಫಿಗೆ ನಿನ್ನೆ ಚಾಲನೆ ದೊರೆತಿದ್ದು, ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ಥಾನ ತಂಡವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್ ತಂಡ ಶುಭಾರಂಭ ಮಾಡಿದೆ. ಕೂಟದ ಎರಡನೇ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ Read More »

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ

13 ಅಂತಸ್ತಿನ ಮೂರು ಕಟ್ಟಡಗಳು ಆಧುನಿಕ ತಂತ್ರಜ್ಞಾನದ ಸ್ಪರ್ಶದೊಂದಿಗೆ ಪ್ರಾಚೀನ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣ ಹೊಸದಿಲ್ಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಹೊಸ ಕಚೇರಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಉದ್ಘಾಟನೆಗೊಳ್ಳಲಿದೆ. ಈ ಹಿಂದಿದ್ದ ಕಚೇರಿ ಸ್ಥಳದಲ್ಲೇ ಹೊಸ ಕಚೇರಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಶಿವಾಜಿ ಜಯಂತಿ ದಿನವಾದ ಇಂದು 150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಟ್ಟಡವನ್ನು ʼಕೇಶವ ಕುಂಜ್ʼ ಎಂದು ಕರೆಯಲಾಗುತ್ತದೆ. ಕಟ್ಟಡದ ಸಂಕೀರ್ಣವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಮೋಹನ್‌

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ Read More »

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ

ತಮಿಳುನಾಡು: ಮೊಬೈಲ್ ಫೋನ್ ಗಾಗಿ ನಡೆದ ಜಗಳದಲ್ಲಿ ಅಣ್ಣ ಮತ್ತು ತಂಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಪುದುಕ್ಕೊಟ್ಟೆಯಲ್ಲಿ ನಡೆದಿದೆ. 18 ವರ್ಷದ ಅಣ್ಣ ಹಾಗೂ 11 ವರ್ಷದ ತಂಗಿ ಮಕ್ಕಳು ಸಾವಿಗೀಡಾದ ಸಹೋದರ-ಸಹೋದರಿಯರು ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಣ್ಣ ಮತ್ತು ತಂಗಿಯ ನಡುವೆ ಸಣ್ಣ ಜಗಳವಾಗಿದೆ. ಈ ವೇಳೆ ಕೋಪಗೊಂಡ ಅಣ್ಣ ತನ್ನ ತಂಗಿಯ ಫೋನ್ ಮುರಿದಿದ್ದಾನೆ. ಬೇಸರಗೊಂಡ ತಂಗಿ ಬಾವಿಗೆ ಹಾರಿದ್ದಾಳೆ. ನಂತರ ತಂಗಿ ಬಾವಿಗೆ ಹಾರಿದ್ದನ್ನು ನೋಡಿ ಕಾಪಾಡಲೆಂದು ಅಣ್ಣನೂ ಬಾವಿಗೆ

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ Read More »

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್‌ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ Read More »

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ

ಗಾಬರಿಯಾಗದಿರಲು ಪ್ರಧಾನಿ ಮೋದಿ ಮನವಿ ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್‌ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ಕಂಪನದ ಅನುಭವ ಅಗಿದೆ. ವಸತಿ ಪ್ರದೇಶಗಳಲ್ಲಿ ಜನರಿಗೆ ಸ್ಪಷ್ಟವಾಗಿ ಕಂಪನದ ಅನುಭವವಾಗಿದ್ದು, ಅನೇಕರು ಗಾಬರಿಯಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪದಿಂದ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. ಗಾಬರಿಯಾಗದಿರಲು ಮೋದಿ ಮನವಿ ಪ್ರಧಾನಿ ನರೇಂದ್ರ ಮೋದಿ

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ Read More »

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು

ಮಹಾಕುಂಭಮೇಳಕ್ಕೆ ಹೋಗುವ ವಿಶೇಷ ರೈಲು ಹತ್ತಲು ನೂಕುನುಗ್ಗಲು ಉಂಟಾದಾಗ ಸಂಭವಿಸಿದ ದುರಂತ ಹೊಸದಿಲ್ಲಿ: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿ 11 ಜನರಿಗೆ ಗಾಯಗಳಾಗಿದ್ದು, ಅವರನ್ನು ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್​ಪಿಎಫ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮೃತರಲ್ಲಿ ಐವರು ಮಕ್ಕಳು, 9 ಮಹಿಳೆಯರು ಸೇರಿದ್ದಾರೆ.ನವದೆಹಲಿ ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾಕುಂಭಮೇಳಕ್ಕೆ ರೈಲ್ವೆ ಇಲಾಖೆ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು Read More »

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ

ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್‌ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

error: Content is protected !!
Scroll to Top