ದೇಶ

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ

ಕಾಂಗ್ರೆಸ್‌ ನಾಯಕನ ವಿರುದ್ಧ ಕೇಸು ದಾಖಲು ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆಯೊಡ್ಡಿದ್ದಾರೆ.ಮೋದಿ ಹೆಸರಿನವರೆಲ್ಲ ಕಳ್ಳರು ಎಂದು ಟೀಕಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾ. 23 ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. […]

ರಾಹುಲ್‌ಗೆ ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಗೆ ಕತ್ತರಿಸುವ ಬೆದರಿಕೆ Read More »

ಬೆಳ್ತಂಗಡಿ : ಆಲಿಕಲ್ಲು ಸಹಿತ ಮಳೆ

ಬೆಳ್ತಂಗಡಿ : ಬೇಸಗೆ ತಾಪಮಾನದಿಂದ ಬಸವಳಿದಿದ್ದ ಮಂದಿಗೆ ಮಳೆ ಕೊಂಚ ತಣಿಸಿದ್ದು, ಬೆಳ್ತಂಗಡಿ ತಾಲೂಕಿನ ಹಲವೆಡೆ ಎ.7ರ ಶುಕ್ರವಾರ ಸಂಜೆ ಆಲಿಕಲ್ಲು ಸಹಿತ ಮಳೆಯಾಗಿದೆ. ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಬೆಳ್ತಂಗಡಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಗುರುವಾರ ಮಧ್ಯರಾತ್ರಿಯೇ ಮಳೆ ಮುನ್ಸೂಚನೆ ನೀಡಿದ್ದು, ಗುಡುಗು ಸಹಿತ ಹನಿ ಮಳೆಯಾಗಿತ್ತು. ಇದೀಗ ಶುಕ್ರವಾರ ತಣ್ಣನೆ ಗಾಳಿಯೊಂದಿಗೆ ಮಳೆ ಆರಂಭಗೊಂಡು ರಸ್ತೆ,‌ ಚರಂಡಿಗಳ್ಳಿ ನೀರು ಹರಿಯುವ ಮಟ್ಟಿಗೆ ಮಳೆಯಾಗಿದೆ. ಬೇಸಗೆ ಬಿಸಿಯಿಂದ

ಬೆಳ್ತಂಗಡಿ : ಆಲಿಕಲ್ಲು ಸಹಿತ ಮಳೆ Read More »

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಏ. 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅನುಮತಿ ಪಡೆಯದೆ

ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು Read More »

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಏ. 7 ರಂದುನ ನಿಧನ ಹೊಂದಿದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರದ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕಿನ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂಡಬಿದಿರೆಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿದ್ದ ಇವರ ಅಂತ್ಯಸಂಸ್ಕಾರವು ಮಾರ್ನಾಡು ಕಲ್ಲಬೆಟ್ಟು ಗುತ್ತುಮನೆಯಲ್ಲಿ ನಡೆಯಿತು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ Read More »

ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ

ಬೆಂಗಳೂರು : 2 ದಿನಗಳ ಕಾಲ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಏ. 7 ರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ

ಏ. 8 ರಂದು ಸಂಸದೀಯ ಮಂಡಳಿ ಸಭೆ : ಸಿಎಂ ಬೊಮ್ಮಾಯಿ, ಬಿಎಸ್.ವೈ ದೆಹಲಿಗೆ ಭೇಟಿ Read More »

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ

ತುಮಕೂರು : ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಸ್ಫೋಟಗೊಂಡಿದೆ. 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿ ಬಿಜೆಪಿ, ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದ ಕಾಂಗ್ರೆಸ್‌ಗೆ 2ನೇ ಪಟ್ಟಿಯಲ್ಲಿ ಬಂಡಾಯದ ಬೇಗುದಿ ಅಪ್ಪಳಿಸಿದೆ. ಟಿಕೆಟ್ ಸಿಗದ್ದಕ್ಕೆ ರೊಚ್ಚಿಗೆದ್ದಿರುವ ಕೈ ಕಲಿಗಳು ಕಿಚ್ಚು ಹೊತ್ತಿಸಿದ್ದಾರೆ. ಅಲ್ಲದೇ ಟಿಕೆಟ್​ ಕೈತಪ್ಪಿದ್ದಕ್ಕೆ ಒಬ್ಬೊಬ್ಬರೇ ಕಾಂಗ್ರೆಸ್​ಗೆ ಗುಡ್ ಬೈ ಹೇಳುತ್ತಿದ್ದಾರೆ. ತಮಕೂರು, ಚಿತ್ರದುರ್ಗ, ಗೋಕಾಕ್, ಕಲ್ಲಘಟಗಿ ಸೇರಿದಂತೆ ಇತರೆ ಕೆಲ ಕ್ಷೇತ್ರಗಳಲ್ಲಿ ಸಂಭ್ರಮವಿರಬೇಕಾದ ಕಾಂಗ್ರೆಸ್ ಮನೆಯಲ್ಲಿ ಸಮರವೇ ಶುರುವಾಗಿದೆ. ಅದರಂತೆ

ಅಳಿಯನಿಗೆ ಟಿಕೆತ್‌ ಕೈ ತಪ್ಪಿದ ಕಾರಣ ಮಾವ ಕಾಂಗ್ರೆಸ್‌ ಗೆ ರಾಜಿನಾಮೆ Read More »

ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿ ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ತಿರುವನಂತಪುರ : ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ ಏ. 07 ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಾರುಖ್‌ ಸೈಫಿ(24) ಎಂಬವನೇ ಆರೋಪಿ.ಗಾಯಗೊಂಡಿರುವುದರಿಂದ ಆತನನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ಕಸ್ಟಡಿಗೆ ತೆಗೆದುಕೊಂಡ ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರು ಆಸ್ಪತ್ರೆಗೆ ಆಗಮಿಸಿ ಆರೋಪಿ ಶಾರುಖ್‌ ಸೈಫಿಯನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಭಾನುವಾರ ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು,

ಚಲಿಸುತ್ತಿದ್ದ ರೈಲಿಗೆ ಬೆಂಕಿ ಹಚ್ಚಿ ಪ್ರಯಾಣಿಕರ ಸಾವಿಗೆ ಕಾರಣನಾಗಿದ್ದ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ Read More »

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ

ದೆಹಲಿ : ಅವಿಭಜಿತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಒಂದು ಸಾಲಿನ ರಾಜೀನಾಮೆ ಪತ್ರ ಸಲ್ಲಿಸಿದ ಕೆಲವು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು, ಕಿರಣ್ ಕುಮಾರ್ ರೆಡ್ಡಿ ಅವರಿಗೆ ಕೇಸರಿ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ ಸೇರ್ಪಡೆ Read More »

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ

ಚಿಕ್ಕಮಗಳೂರು : ಟಿಕೆಟ್​ ಖಚಿತ ಎಂದು ಭರವಸೆ ಸಿಕ್ಕ ಮೇಲೆಯೇ ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವೈಎಸ್​ವಿ ದತ್ತಾಗೆ ಕಾಂಗ್ರೆಸ್ ಟಿಕೆಟ್​ ತಪ್ಪಿದೆ. ಕಾಂಗ್ರಸ್ ಸಿಗುತ್ತೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಆದ್ರೆ, ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಇದರಿಂದ ದತ್ತಾ ಅಸಮಾಧಾನಗೊಂಡಿದ್ದು, ಅಭಿಮಾನಿಗಳಿಗೆ ಒಂದು ಬಹಿರಂಗಪತ್ರ ಬರೆದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದಿದ್ದು, ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನಿಸಲು ಅಭಿಮಾನಿಗಳ ಸಭೆ ಕರೆದಿದ್ದಾರೆ.ನನ್ನ ಮತ್ತು

ಕೈತಪ್ಪಿದ ಟಿಕೆಟ್​ಗಾಗಿ ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಿಗೊಂದು ಮನವಿ ಮಾಡಿದ ದತ್ತಾ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

error: Content is protected !!
Scroll to Top