ದೇಶ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ

ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿ ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ.ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವಂತೆ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು ನಿಯಂತ್ರಣ ಕೊಠಡಿಗಳ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ […]

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ Read More »

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ 20 ರ‍್ಯಾಲಿ

ಅಧಿಕಾರ ಉಳಿಸಿಕೊಳ್ಳಲು ಮೋದಿ ವರ್ಚಸ್ಸು ಬಳಕೆ ದೆಹಲಿ : ಭಾರತದಲ್ಲಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕವನ್ನು ಉಳಿಸಿಕೊಳ್ಳಲು ತೀವ್ರ ಪ್ರಯತ್ನಪಡುತ್ತಿರುವ ಬಿಜೆಪಿ ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನೇ ಪೂರ್ಣವಾಗಿ ನೆಚ್ಚಿಕೊಂಡಿದೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕನಿಷ್ಠ 20 ರ‍್ಯಾಲಿಗಳಲ್ಲಿ ಮೋದಿ ಭಾಗವಹಿಸುವಂಥ ಯೋಜನೆಯನ್ನು ಪಕ್ಷದ ಚುನಾವಣಾ ರಣತಂತ್ರ ಹೆಣೆಯುತ್ತಿರುವ ತಂಡ ರೂಪಿಸುತ್ತಿದೆ.ಈ ಬಾರಿ ಕಾಂಗ್ರೆಸ್‌ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಅಥವಾ ಬಹುಮತದ ಸಮೀಪಕ್ಕೆ ಬರುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ನುಡಿದಿರುವ ಭವಿಷ್ಯ ಬಿಜೆಪಿ

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ 20 ರ‍್ಯಾಲಿ Read More »

ಕಾಂಗ್ರೆಸ್‌ ಫೈಲ್ಸ್‌ ವೀಡಿಯೊ ಸರಣಿ ಮೂಲಕ ಬಿಜೆಪಿ ತಿರುಗೇಟು

ದೆಹಲಿ : ಕಾಂಗ್ರೆಸ್‌ ಆಡಳಿತ ಕಾಲದಲ್ಲಿ ನಡೆದಿರುವ ಭ್ರಷ್ಟಾಚಾರಗಳ ವೀಡಿಯೊವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ 48,20,69,00,00,000 ರೂ. ಭ್ರಷ್ಟಾಚಾರ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್‌ ಫೈಲ್ಸ್‌ ಎಂಬ ಈ ವೀಡಿಯೊ ಸರಣಿಯಮನ್ನು ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಿದೆ. ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಿಂದಲೇ ವೀಡಿಯೊ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಆಡಳಿತದಲ್ಲಿ ಜನರ ಹಣವನ್ನು ಅಕ್ಷರಶಃ ‘ದರೋಡೆ’ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ಫೈಲ್ಸ್’ ಶೀರ್ಷಿಕೆಯ ಸರಣಿಯ

ಕಾಂಗ್ರೆಸ್‌ ಫೈಲ್ಸ್‌ ವೀಡಿಯೊ ಸರಣಿ ಮೂಲಕ ಬಿಜೆಪಿ ತಿರುಗೇಟು Read More »

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ

ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ 4.5 ಕೋಟಿ ರೂ. ಮೌಲ್ಯದ ಸೀರೆ ವಶ Read More »

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ

ಸಾಬೂನು ಪ್ಯಾಕೆಟ್‌ ಕೊಟ್ಟು ಹಣ ಕಸಿದು ಪರಾರಿಯಾಗುತ್ತಿದ್ದ ಖದೀಮರು ಉಡುಪಿ : ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ಭರವಸೆ ನೀಡಿ ಹಲವು ವ್ಯಕ್ತಿಗಳಿಗೆ ವಂಚಿಸಿದ ಆರೋಪದಡಿ ಉಡುಪಿ ಪೊಲೀಸರು ಆರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದಿಲ್ಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್

ಭಾರತೀಯ ಕರೆನ್ಸಿ ಬದಲಾಗಿ ಯುಎಇ ದಿರ್ಹಾಮ್ ಕಡಿಮೆ ಬೆಲೆಗೆ ನೀಡುವುದಾಗಿ ವಂಚನೆ : 6 ಮಂದಿ ಸೆರೆ Read More »

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಪುನೀತ್‌ ಕೆರೆಹಳ್ಳಿ ನೇತೃತ್ವದ ಗ್ಯಾಂಗ್‌ ಥಳಿಸಿ ಕೊಂದಿದೆ ಎಂಬ ಆರೋಪ ಬೆಂಗಳೂರು : ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡದ ದಾಳಿಗೆ ಸಿಲುಕಿ ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕ ಹತ್ಯೆಯಾಗಿದ್ದಾನೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಇತರ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಂಡ್ಯ ನಿವಾಸಿ ಇದ್ರೀಸ್ ಪಾಷಾ (39) ಎಂಬವರ ಮೃತದೇಹ ಸಾತನೂರು ಪೊಲೀಸ್ ಠಾಣೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿತ್ತು. ಇರ್ಫಾನ್ ಮತ್ತು ಸೈಯದ್

ಗೋವುಗಳನ್ನು ಸಾಗಿಸುತ್ತಿದ್ದವನ ಹತ್ಯೆ : ಪುನೀತ್‌ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ

ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5

ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು

ಮಂಗಳೂರು : ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾ. 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸಂದರ್ಭ, ದೈವ ನರ್ತಕರಾದ ಕಾಂತು ಅಜಿಲ ಸ್ಥಳದಲ್ಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದರು. ಅವರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂ. ಆರ್ಥಿಕ ನೆರವನ್ನು ಏ. 2 ರಂದು ಘೋಷಣೆ ಮಾಡಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ

ಯಕ್ಷಧ್ರುವ ಪಟ್ಲ ಟ್ರಸ್ಟ್ ವತಿಯಿಂದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ನೆರವು Read More »

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ

ಕಾಗೇರಿ ನಿವಾಸಕ್ಕೆ ಭೇಟಿ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಶಿರಸಿ : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಿತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಜೆಡಿಎಸ್​ನ ಎಟಿ ರಾಮಸ್ವಾಮಿ, ಗುಬ್ಬಿ ಶ್ರೀನಿವಾಸ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಅರಸಿಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಅವರು ಕೊನೆಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 400ಕ್ಕೂ ಅಧಿಕ ಮುಖಂಡರ ಜೊತೆ ಏ. 2 ರಂದು ಶಿರಸಿಯಲ್ಲಿರುವ ಸ್ಪೀಕರ್ ನಿವಾಸಕ್ಕೆ ಭೇಟಿ ನೀಡಿ ವಿಶ್ವೇಶ್ವರ

ಜೆಡಿಎಸ್​​ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಲಿಂಗೇಗೌಡ Read More »

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಬೀಡಿ, ಸಿಗರೇಟ್, ಪಾನ್ ಮಸಾಲ ಪತ್ತೆ ಮಂಗಳೂರು : ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆ ಮಂಗಳೂರು ನಗರದ ಕೊಡಿಯಾಲಬೈಲ್​​ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ಎ. 2 ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಬೀಡಿ, ಸಿಗರೇಟ್​​, ಪಾನ್​​ ಮಸಾಲ, ಗುಟ್ಕಾ ಪತ್ತೆಯಾಗಿದೆ. ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿದ ಸುಮಾರು 300 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸತತ 1 ಗಂಟೆ 15 ನಿಮಿಷಗಳ ಕಾಲ ಕಾರಾಗೃಹ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ Read More »

error: Content is protected !!
Scroll to Top