ದೇಶ

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ

ಅತಿದೊಡ್ಡ ಅಂತರ್‌ಜಾಲ ಮಾಹಿತಿ ಕಳ್ಳತನ ಪ್ರಕರಣ ಹೈದರಾಬಾದ್ : 66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಸೈಬರ್‌ ಚೋರನೊಬ್ಬನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನ 56 ಲಕ್ಷ ಜನರು ಸೇರಿ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತಿ ದೊಡ್ಡ ಡೇಟಾ ಕಳವು ಪ್ರಕರಣ ಇದು ಎಂದು ಸೈಬರಾಬಾದ್ ಪೊಲೀಸರು ಹೇಳಿದ್ದಾರೆ. ಒಟ್ಟಾರೆ 66.9 ಕೋಟಿ ಜನರ ಮತ್ತು ಖಾಸಗಿ ಸಂಸ್ಥೆಗಳ ವೈಯಕ್ತಿಕ ಮತ್ತು ಗೌಪ್ಯ […]

66.9 ಕೋಟಿ ಭಾರತೀಯರ ಡೇಟಾ ಕದ್ದಿದ್ದ ಖತರ್‌ನಾಕ್‌ ಚೋರನ ಬಂಧನ Read More »

ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ

ದೆಹಲಿ : ಅರ್ಜುನ ಪ್ರಶಸ್ತಿ ಪಡೆದ ಮೊದಲ ಭಾರತೀಯ ಕ್ರಿಕೆಟಿಗ, ಭಾರತದ ಮಾಜಿ ಆಲ್‌ರೌಂಡರ್ ಸಲೀಂ ದುರಾನಿ (88) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಜನವರಿಯಲ್ಲಿ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ಅವರ ತೊಡೆಯ ಮೂಳೆ ಮುರಿತಗೊಂಡಿದ್ದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜೊತೆಗೆ ಕ್ಯಾನ್ಸರ್‌ನಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇನ್ನು ಆಕ್ರಮಣಕಾರಿ ಎಡಗೈ ಬ್ಯಾಟ್ಸ್‌ಮನ್, ದುರಾನಿ ಭಾರತಕ್ಕಾಗಿ 29 ಟೆಸ್ಟ್‌ಗಳಲ್ಲಿ 1202 ರನ್ ಗಳಿಸಿದ್ದು, 75 ವಿಕೆಟ್‌ಗಳನ್ನು ಪಡೆದಿದ್ದರು.ಸಲೀಂ

ಮಾಜಿ ಆಲ್‌ರೌಂಡರ್, ಅರ್ಜುನ ಪ್ರಶಸ್ತಿ ವಿಜೇತ ಮೊದಲ ಭಾರತೀಯ ಕ್ರಿಕೆಟಿಗ ನಿಧನ Read More »

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ

ಮಂಗಳೂರು : ಬಿಟುಮೆನ್ ಆಯಿಲ್ ಫಿಲ್ಲಿಂಗ್ ವೇಳೆ ಪೈಪ್‌ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರಿನ ನವಬಂದರಿನಲ್ಲಿ ನಡೆದ ಈ ದುರಂತ ಹಡಗಿನಿಂದ ನೇರವಾಗಿ ಟ್ಯಾಂಕರ್‌ಗೆ ಬಿಟುಮೆನ್ ಆಯಿಲ್ ವರ್ಗಾಯಿಸುವಾಗ ಸಂಭವಿಸಿದೆ. ಆದರೆ ಶಿಪ್‌ನಲ್ಲಿ ಬಂದ ಬಿಟುಮೆನ್ ಆಯಿಲ್ ಅನ್ನು ಟ್ಯಾಂಕಿಗೆ ಮೊದಲು ವರ್ಗಾಯಿಸುವುದು ನಿಯಮ. ಆಯಿಲ್‌ ಅನ್ನು ಟ್ಯಾಂಕರ್‌ಗೆ ವರ್ಗಾಯಿಸುವ ವೇಳೆ ಪೈಪ್ ಸ್ಪೋಟಗೊಂಡು ಆಯಿಲ್ ಕಾರ್ಮಿಕರ ಮೈ ಮೇಲೆ ಬಿದ್ದಿದ್ದು ತಕ್ಷಣವೇ ಅವರನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ

ಆಯಿಲ್‌ ಫಿಲ್ಲಿಂಗ್ ವೇಳೆ ಪೈಪ್ ಸ್ಪೋಟ : ನಾಲ್ವರಿಗೆ ಗಾಯ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಕರನ್ನು ಹತ್ಯೆ ಮಾಡಿದ್ದ ರೌಡಿಯ ಎನ್‌ಕೌಂಟರ್‌

3 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿದ ಕುಖ್ಯಾತ ಪಾತಕಿ ಲಖನೌ : ಮೂರು ವರ್ಷದ ಹಿಂದೆ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಪೊಲೀಸರು ಹೊಡೆದುರುಳಿಸಿದ್ದಾರೆ. ತ್ರಿವಳಿ ಕೊಲೆ ಸೇರಿದಂತೆ ಹತ್ತಾರು ಡಕಾಯಿತಿ ಮತ್ತು ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿ ರಶೀದ್ ಅಲಿಯಾಸ್ ಚಲ್ತಾ ಫಿರ್ತಾ ಅಲಿಯಾಸ್ ಸಿಪಾಹಿಯಾ ತಲೆಗೆ 50 ಸಾವಿರ ರೂ.ಬಹುಮಾನ ಘೋಷಿಸಲಾಗಿತ್ತು. ನಿನ್ನೆ ರಾತ್ರಿ ಆತ ಪೊಲೀಸರ ಗುಂಡಿಗೆ

ಕ್ರಿಕೆಟಿಗ ಸುರೇಶ್ ರೈನಾ ಸಂಬಂಧಿಕರನ್ನು ಹತ್ಯೆ ಮಾಡಿದ್ದ ರೌಡಿಯ ಎನ್‌ಕೌಂಟರ್‌ Read More »

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏ. 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ Read More »

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಏ. 1 ರಂದು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಎಂಬಾತನೇ ಬಂಧಿತ ಆರೋಪಿ. ಆರೋಪಿಯನ್ನು ಬೆಂಗಳೂರಿನ ಅತ್ತಿಬೆಲೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಪುತ್ತೂರು : ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ

ದೆಹಲಿ : ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ.ಏ. 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ. ಇನ್ನು ಇಂದಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 92 ರೂ ಇಳಿಕೆ ಮಾಡಿದೆ. ಆದರೆ ಗೃಹ ಬಳಕೆಯ 14.2 ಕೆಜಿ ಅಡುಗೆ

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ : 92 ರೂ. ಇಳಿಕೆ Read More »

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಜಟ್ಕಾ ಓಆರ್‌ಗ್ ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ತೀವ್ರ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಗೆ ಬಿಬಿಎಂಪಿ ಬ್ರೇಕ್ ಹಾಕಿತ್ತು. ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್‌ಟಿಎ) ಒಪ್ಪಿಗೆ ನೀಡಿದ ನಂತರವೇ ಈ

ಸ್ಯಾಂಕಿ ಟ್ಯಾಂಕ್‌ ರಸ್ತೆ ಅಗಲೀಕರಣ : ಪ್ರತಿಭಟಿಸಿದ್ದ ಜಟ್ಕಾಗೆ ಪೊಲೀಸ್ ನೋಟಿಸ್ Read More »

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡ್ನೂರು ಗ್ರಾಮದ ಎಲ್ಕಾಜೆ ಎಂಬಲ್ಲಿ ಮಾ.31 ರಂದು ಸಂಭವಿಸಿದೆ. ಯಮುನಾ(72) ಎಂಬುವವರೇ ಆತ್ಮಹತ್ಯೆಗೆ ಶರಣಾದವರು. ಇವರು ರಕ್ತದ ಒತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಪುತ್ತೂರಿನ ವೈದ್ಯರಲ್ಲಿ ಔಷಧಿ ಮಾಡಿಸಿದರೂ ಗುಣಮುಖವಾಗದೇ ಇದ್ದಾಗ ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರದಂದು ಮನೆಯ ಅಡುಗೆ ಕೋಣೆಯ ಛಾವಣಿಗೆ ಸೀರೆಯನ್ನು ಕುಣಿಕೆ ಮಾಡಿ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಂಟ್ವಾಳ : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top