ದೇಶ

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್ : ಔಷಧ, ಆ್ಯಂಬುಲೆನ್ಸ್’ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ್ ಮಾತನಾಡಿ, “ಎಲ್ಲಾ ಸೇವೆಗಳು ಬಹುತೇಕ ಉಚಿತ ಮತ್ತು ಆರೋಗ್ಯ ತುರ್ತು ಸೇವೆಯಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಆರೋಗ್ಯ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕುರಿತು ಕಾರ್ಯಗಳು […]

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್ : ಔಷಧ, ಆ್ಯಂಬುಲೆನ್ಸ್’ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ Read More »

2022-23ನೇ ಸಾಲಿನಲ್ಲಿ 15,920 ಕೋ. ರೂ ರಕ್ಷಣಾ ಪರಿಕರ ರಫ್ತು

ದೆಹಲಿ : ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. 2022–23ನೇ ಹಣಕಾಸು ವರ್ಷದಲ್ಲಿ ಭಾರತವು 15,920 ರೂ ಕೋಟಿ ಮೌಲ್ಯದ ರಕ್ಷಣಾ ಪರಿಕರಗಳನ್ನು ರಫ್ತು ಮಾಡಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.2022–2023ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು

2022-23ನೇ ಸಾಲಿನಲ್ಲಿ 15,920 ಕೋ. ರೂ ರಕ್ಷಣಾ ಪರಿಕರ ರಫ್ತು Read More »

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ

ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್‌. ಪ್ರಾಪರ್ಟಿಸ್‌ ಪ್ರವರ್ತಿತ ಜಿ.ಎಲ್‌. ಒನ್‌ ಶಾಪಿಂಗ್‌ ಮಾಲ್‌ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್‌. ಒನ್‌ ಮಾಲ್‌?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್‌. ತನ್ನದೇ ಆದ ಬ್ರ್ಯಾಂಡ್‌ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್‌, ನೆಲ

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಎ. 2 ರಂದು ಲೋಕಾರ್ಪಣೆ Read More »

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು

ಬೆಂಗಳೂರು : ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ಮಾ.26ರಂದು ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದ 8 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ. ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸಮಯ್ ಶುಕ್ರವಾರದವರೆಗೆ ಒಬ್ಬರ ನಂತರ ಒಬ್ಬರು ಸಾವನ್ನಪ್ಪಿದ್ದಾರೆ. ಸುಟ್ಟು ಗಾಯಗೊಂಡಿದ್ದ 8 ಕಾರ್ಮಿಕರಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ : ಗಾಯಗೊಂಡಿದ್ದ 7 ಕಾರ್ಮಿಕರು ಸಾವು Read More »

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ

ಸಂಘವನ್ನು ಕೌರವರಿಗೆ ಹೋಲಿಸಿ ಟೀಕಿಸಿದ್ದ ರಾಹುಲ್‌ ದೆಹಲಿ : ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೆ ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ Read More »

ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ

ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಸಫಾರಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಏ.9ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಆದರೆ ಈ ಸಲ ಮೋದಿ ಕರ್ನಾಟಕಕ್ಕೆ ಬರುತ್ತಿರುವುದು ಚುನಾವಣಾ ಪ್ರಚಾರಕ್ಕೆ ಅಲ್ಲ. ಹುಲಿ ನೀತಿಯ ಐವತ್ತನೇ ವರ್ಷಾಚರಣೆ ಬಂಡೀಪುರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಮ ಬರುತ್ತಿದ್ದಾರೆ. ಈ ವೇಳೆ ಬಂಡಿಪುರ ಹುಲಿ ರಕ್ಷಿತಾರಣ್ಯದಲ್ಲಿ ಪ್ರಧಾನಿ ಮೋದಿ ಅವರು ಸಫಾರಿ ಕೈಗೊಳ್ಳಲಿದ್ದಾರೆ.ವಿಶೇಷ ಎಂದರೆ ಏ.9ರಂದೇ ರಾಹುಲ್‌ ಗಾಂಧಿ ಕೋಲಾರದಲ್ಲಿ ಕಾಂಗ್ರೆಸಿನ ಜೈ ಭಾರತ್‌ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ.ವಿಧಾನಸಭೆ ಚುನಾವಣೆ

ಏ.9 ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ Read More »

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು

ನೀವು ಅಡ್ಮಿನ್‌ ಆಗಿದ್ದರೆ ಎಚ್ಚರಿಕೆ ವಹಿಸಿಕೊಳ್ಳಿ ಬೆಂಗಳೂರು : ರಾಜ್ಯದಲ್ಲಿ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರ ಮೂಲಗಳಿಂದ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದರೆ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯ. ವಾಟ್ಸಪ್‌, ಫೇಸ್‌ಬುಕ್‌ ಮತ್ತಿತರ ಸೋಷಿಯಲ್‌ ಮೀಡಿಯಾ ಗ್ರೂಪ್‌ಗಳಿಗೂ ಈ ನಿಯಮ ಅನ್ವಯವಾಗುತ್ತದೆ.

ಸೋಷಿಯಲ್‌ ಮೀಡಿಯಾ ಸೇರಿದಂತೆ ಎಲ್ಲ ರೀತಿಯ ಪ್ರಚಾರ ಮಾಧ್ಯಮಗಳ ಮೇಲೆ ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು Read More »

ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂಗೆ 25 ಸಾವಿರ ರೂ. ದಂಡ

ದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಅವರಿಗೆ ಗುಜರಾತ್ ಹೈಕೋರ್ಟ್ ಮಾ. 31 ರಂದು 25 ಸಾವಿರ ರೂ. ದಂಡ ವಿಧಿಸಿದೆ. ಪ್ರಧಾನಿ ಕಾರ್ಯಾಲಯವು ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರಗಳನ್ನು ನೀಡಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಆರ್‌ಟಿಐನಡಿ ಈ ಮಾಹಿತಿಯನ್ನು ಸಿಎಂ ಕೇಜ್ರೀವಾಲ್ ಕೇಳಿದ್ದಕ್ಕೆ ದಂಡ ವಿಧಿಸಲಾಗಿದೆ. ಆರ್‌ಟಿಐನಡಿ ಸಿಎಂ ಅರವಿಂದ ಕೇಜ್ರೀವಾಲ್ ಅರ್ಜಿ ಸಲ್ಲಿಸಿದ್ದ ಮೇರೆಗೆ

ಮೋದಿಯವರ ಪದವಿ ಮತ್ತು ಸ್ನಾತಕೋತ್ತರ ಪ್ರಮಾಣಪತ್ರ ಕೇಳಿದ್ದ ದೆಹಲಿ ಸಿಎಂಗೆ 25 ಸಾವಿರ ರೂ. ದಂಡ Read More »

ಹೊಸ ವಿದೇಶಿ ವ್ಯಾಪಾರ ನೀತಿ- 2023 ಬಿಡುಗಡೆ

ದೆಹಲಿ : ಹೊಸ ವಿದೇಶಿ ವ್ಯಾಪಾರ ನೀತಿ-2023ನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದ್ದು, ಹೊಸ ನೀತಿಯಲ್ಲಿ 2030ರ ವೇಳೆಗೆ ಭಾರತದ ಸರಕು ರಫ್ತು ಪ್ರಮಾಣವನ್ನು 2 ಟ್ರಿಲಿಯನ್ ಡಾಲರ್​ಗೆ ಹೆಚ್ಚಿಸುವ​ ಗುರಿಯನ್ನು ಹೊಂದಲಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರು ಇಂದು ದೆಹಲಿಯಲ್ಲಿ ವಿದೇಶಿ ವ್ಯಾಪಾರ ನೀತಿ 2023 ಅನ್ನು ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ ಗೋಯಲ್ ಅವರು 2030 ರ ವೇಳೆಗೆ ಭಾರತದ ರಫ್ತು ವ್ಯಾಪಾರವು 2 ಟ್ರಿಲಿಯನ್ ಡಾಲರ್ ತಲುಪಲಿದೆ

ಹೊಸ ವಿದೇಶಿ ವ್ಯಾಪಾರ ನೀತಿ- 2023 ಬಿಡುಗಡೆ Read More »

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ

ಇಂದೋರ್ : ರಾಮನವಮಿ ನಿಮಿತ್ತ ಇಂದೋರ್’ನ ಬೇಲೇಶ್ವರ ದೇವಸ್ಥಾನದಲ್ಲಿ ಹೋಮ ಹವನ ಏರ್ಪಡಿಸಲಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಭಾರೀ ಸಂಖ್ಯೆಯಲ್ಲಿ ಜನ ಬಂದು ನೂಕು ನುಗ್ಗಲು ಏರ್ಪಟ್ಟಿತ್ತು. ಈ ವೇಳೆ ದೇಗುಲದ ಬಾವಿ ಬಳಿಯ ಭೂಮಿ ಕುಸಿದಿದ್ದು, ಇದರ ಪರಿಣಾಮ ಅಲ್ಲೇ ಇದ್ದ ಬಾವಿಯ ಕಬ್ಬಿಣದ ಸರಳಿನ ಮೇಲ್ಛಾವಣಿಯೂ ಕುಸಿದು ಬಿದ್ದಿತ್ತು. ಈ ವೇಳೆ ಸ್ಥಳದಲ್ಲಿದ್ದ ಹಲವು ಮಂದಿ ಭಕ್ತರು ಬಾವಿಗೆ ಬಿದ್ದಿದ್ದರು. ದುರ್ಘಟನೆಯಲ್ಲಿ ಈ ವರೆಗೂ 35 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ

ದೇವಾಲಯದ ಮೆಟ್ಟಿಲು ಬಾವಿ ಕುಸಿತ ಪ್ರಕರಣ : ಸ್ಥಳಕ್ಕೆ ಸಿಎಂ ಚೌಹಾಣ್ ಭೇಟಿ Read More »

error: Content is protected !!
Scroll to Top