ದೇಶ

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ

ಕೊಚ್ಚಿ: ಇಲ್ಲಿನ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತರಬೇತಿ ನಿರತವಾಗಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.55ಕ್ಕೆ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗುತ್ತಿದ್ದಂತೆ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ ಪ್ರಾಥಮಿಕ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.ಈಮಧ್ಯೆ, ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು […]

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ 99ನೇ ಆವೃತ್ತಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮಾಸಿಕ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತದ ಯಶಸ್ಸು, ಮಹಿಳಾ ಸಬಲೀಕರಣ, ಅಂಗದಾನ ಜಾಗೃತಿ, ಕೋವಿಡ್ -19 ಸಾಂಕ್ರಾಮಿಕ ಮತ್ತು ಇತರ ಹಲವು ಪ್ರಮುಖ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮ ಮೊದಲ ಶೋ 3ನೇ ಅಕ್ಟೋಬರ್ 2014 ರಂದು ಪ್ರಸಾರವಾಗಿ ಇಂದು

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ Read More »

error: Content is protected !!
Scroll to Top