ದೇಶ

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಸುಮಾರು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಾರ್ಚ್ 23 ರಂದು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತುಂಬೆ ವ್ಯಾಪ್ತಿಯ ತಲಪಾಡಿ ನಿವಾಸಿ ಅಬ್ದುಲ್ ಅಜೀಜ್ ಅಲಿಯಾಸ್ ಅಜೀಜ್ (45) ಎಂದು ಗುರುತಿಸಲಾಗಿದೆ.ಈತ ಕೇರಳ ಮತ್ತು ಕರ್ನಾಟಕದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜೀಜ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಲ್ಕು, ಉಳ್ಳಾಲದಲ್ಲಿ ಮೂರು, ಬಂಟ್ವಾಳದಲ್ಲಿ ಒಂದು ಮತ್ತು ಹಾಸನದ ಅರೇಹಳ್ಳಿ ಮತ್ತು ಕೇರಳ ರಾಜ್ಯದ ಕುಟ್ಯಾಡಿಯಲ್ಲಿ ತಲಾ ಒಂದು […]

ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು

ಬೆಳಗಾವಿ : ದೇವರಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ಜಾತ್ರಾ ಸಂದರ್ಭದಲ್ಲಿ ಈ ಅಹಿತಕರ ಘಟನೆ ಆಕಸ್ಮಿಕವಾಗಿ ನಡೆದಿದ್ದು, ಮೃತ ಯುವತಿಯನ್ನು 22 ವರ್ಷ ವಯಸ್ಸಿನ ಐಶ್ವರ್ಯಾ ನಾಯ್ಕ್ ಎಂದು ಗುರುತಿಸಲಾಗಿದೆ.ಐಶ್ವರ್ಯಾ ಅಥಣಿ ತಾಲೂಕಿನ ತನ್ನ ತೀರ್ಥ ಗ್ರಾಮದ ಕೃಷ್ಣಾ ನದಿಯಿಂದ ದೇವಸ್ಥಾನದವರೆಗೆ ದೀರ್ಘ ನಮಸ್ಕಾರ ಹಾಕುವ ಹರಕೆ ತೀರಿಸುವಾಗ ಕಾರು ಆಕೆಯ

ದೀರ್ಘದಂಡ ನಮಸ್ಕಾರ ಮಾಡುತ್ತಿದ್ದ ಯುವತಿ ಮೇಲೆ ಕಾರು ಹರಿದು ಸಾವು Read More »

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ

ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್‌ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ Read More »

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ

ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ನಿರ್ದೇಶಕ ಮುಂಬಯಿ : ಬಾಲಿವುಡ್‌ನ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ (68) ಇಂದು ನಸುಕಿನ ವೇಳೆ ನಿಧನರಾಗಿದ್ದಾರೆ. ಪರಿಣಿತ, ಲಗಾ ಚುನರಿ ಮೇ ದಾಗ್‌, ಮರ್ದಾನಿ, ಹೆಲಿಕಾಪ್ಟರ್‌ ಏಲದಂಥ ಜನಪ್ರಿಯ ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.ಜಾಹೀರಾತು ಚಿತ್ರ ನಿರ್ದೇಶಕರಾಗಿ ಸುದೀರ್ಘ 17 ವರ್ಷ ದುಡಿದು ಬಳಿಕ ಪ್ರದೀಪ್‌ ಸರ್ಕಾರ್‌ ಬಾಲಿವುಡ್‌ಗೆ ಬಂದಿದ್ದರು. ಹಲವು ನೆನಪಿನಲ್ಲಿ ಉಳಿಯುವಂಥ ಜಾಹೀರಾತುಗಳನ್ನು ಅವರು ನಿರ್ದೇಶಿಸಿದ್ದರು. ಪರಿಣಿತ ಅವರು ನಿರ್ದೇಶಿಸಿದ ಮೊದಲ ಚಿತ್ರ. ಮೊದಲ ಚಿತ್ರವೇ

ಬಾಲಿವುಡ್‌ ಖ್ಯಾತ ಸಿನೆಮಾ ನಿರ್ದೇಶಕ ಪ್ರದೀಪ್‌ ಸರ್ಕಾರ್‌ ನಿಧನ Read More »

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ

ಪರೀಕ್ಷೆ ಸಮಯದಲ್ಲಿ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್‌ ತಡೆ ಬೆಂಗಳೂರು: ಇಂದಿನಿಂದ ನಡೆಯಬೇಕಿದ್ದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಶೇ.15ರಷ್ಟು ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಶುಕ್ರವಾರದಿಂದ ಮುಷ್ಕರ ಹೂಡುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈಕೋರ್ಟ್‌ ತಡೆ : ವಿದ್ಯಾರ್ಥಿಗಳು ನಿರಾಳ Read More »

ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ

ದೆಹಲಿ : ಉದ್ಯಮಿ ವಿಜಯ್ ಮಲ್ಯ ಅವರ ಕಿಂಗ್‌ಫಿಶರ್ ಏರ್‌ಲೈನ್ಸ್ ವಿಮಾನ ಸಂಸ್ಥೆಯು ಭಾರಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ಸಂದರ್ಭದಲ್ಲಿಯೇ 2015- 16ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್‌ ದೇಶಗಳಲ್ಲಿ 330 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಖರೀದಿಸಿದ್ದರು. ಭಾರತದಿಂದ ಪರಾರಿಯಾಗುವ ಮುನ್ನ ಈ ವ್ಯವಹಾರ ನಡೆಸಿದ್ದರು ಎಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಮುಂಬಯಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹೇಳಿದೆ.ಐಡಿಬಿಐ ಬ್ಯಾಂಕ್‌ಗೆ 900 ಕೋಟಿ ರೂ ಸಾಲ ವಂಚನೆ ಪ್ರಕರಣದಲ್ಲಿ ಪೂರಕ ಆರೋಪ ಪಟ್ಟಿ ಸಲ್ಲಿಸಿರುವ

ಸಾಲ ಮರುಪಾವತಿಸಲು ಮಲ್ಯ ಬಳಿ ಹಣವಿದ್ದರೂ ವಿದೇಶದಲ್ಲಿ ಆಸ್ತಿ ಖರೀದಿಸಿದರು : ಸಿಬಿಐ ಆರೋಪ Read More »

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.ಸಾರಿಗೆ ನೌಕರರ ಸಂಘದ

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ Read More »

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ

ದೆಹಲಿ : ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೊಮ್ಮೆ ಮುನ್ನೆಚ್ಚರಿಕೆ ಘೋಷಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆ ನಡೆಸಿ ಎಲ್ಲ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಿರುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್-19 ಇನ್ನೂ ಅಂತ್ಯಗೊಂಡಿಲ್ಲ ಎಂಬುದನ್ನು ಒತ್ತಿ ಹೇಳಿದ ಮೋದಿಯವರು, ರೋಗಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ್ದಾರೆ. ಹಿರಿಯ ನಾಗರಿಕರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರು

ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಮೋದಿ ಸೂಚನೆ Read More »

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ

ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ ಶುಕ್ರವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಎಂದು ಆರೋಪಿಸಿದರು. ಕೇಂದ್ರ ಸರಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.

ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನ ವಾಣಿಜ್ಯ ಸಂಕೀರ್ಣವೊಂದರ ಐದನೇ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತೊಕ್ಕೊಟ್ಟು ಕಲ್ಲಾಪುದಲ್ಲಿರುವ ಕಿಯಾಂಜಾ ಯೂನಿವರ್ಸಲ್ ವಾಣಿಜ್ಯ ಸಂಕೀರ್ಣದಲ್ಲಿರುವ ಮನ್ಹಾಸ್ ಮಂಡಿ ಹೋಟೆಲ್‌ನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಅದು ವ್ಯಾಪಿಸಿದೆ.ಇನ್ನು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಐದನೇ ಮಹಡಿ ಹತ್ತಿ ಚಿಮಣಿಗೆ ತಗುಲಿದ ಬೆಂಕಿಯನ್ನು

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ : ತಪ್ಪಿದ ಅನಾಹುತ Read More »

error: Content is protected !!
Scroll to Top