ದೇಶ

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಎಂಟು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಾವೂರಿನ ರಾಜಾ ಅಲಿಯಾಸ್ ರೋಹನ್ ರೆಡ್ಡಿ , ಪಡೀಲ್-ಕಣ್ಣೂರಿನ ಪ್ರಕಾಶ್ ಶೆಟ್ಟಿ, ಕೃಷ್ಣಾಪುರದ ನಿಸ್ಸಾರ್ ಹುಸೇನ್, ಕಸಬಾ ಬೆಂಗ್ರೆಯ ಕಬೀರ್, ಅಚ್ಯುತ್ ಮತ್ತು ಕಾವೂರಿನ ರಿಜ್ವಾನ್ ಬಂಧಿತರಲ್ಲಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂಟು ಆರೋಪಿಗಳ ಪೈಕಿ ರೆಡ್ಡಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ಅಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದನು.ಈತ 2013ರಲ್ಲಿ ಬಸ್ ಚಾಲಕನ ಕೊಲೆ ಪ್ರಕರಣದ […]

ತಲೆಮರೆಸಿಕೊಂಡಿದ್ದ 8 ಕುಖ್ಯಾತ ಆರೋಪಿಗಳ ಬಂಧನ: ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ

ಕನ್ನಡದಲ್ಲೇ ಮಾತನಾಡಿ ಕಾಡಂಚಿನ ಜನರ ಸಮಸ್ಯೆಗಳ ಬಗ್ಗೆ ವಿಶ್ವದ ಗಮನ ಸೆಳೆಯಲಿರುವ ರಿಷಬ್‌ ಬೆಂಗಳೂರು : ಕಾಂತಾರದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಕನ್ನಡದಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಮಾಡಲಿರುವ ಮೊದಲ ಕನ್ನಡಿಗ ಎನ್ನಿಸಿಕೊಳ್ಳಲಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಪ್ರಚಲಿತ ಸಾಮಾನ್ಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿದೆ. ಇದರಲ್ಲಿ ಮಾತನಾಡಲು ರಿಷಬ್‌ ಶೆಟ್ಟಿ ಆಯ್ಕೆಯಾಗಿದ್ದು,

ವಿಶ್ವಸಂಸ್ಥೆಯಲ್ಲಿ ವಿಶೇಷ ಭಾಷಣ ಮಾಡಲು ಕಾಂತಾರದ ರಿಷಬ್‌ಗೆ ಆಹ್ವಾನ Read More »

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ

ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರ ಮುಷ್ಕರ ಆರಂಭಕ್ಕೆ ಮುನ್ನ ಇಂದು ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್ Read More »

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಇದರ ನಡುವೆ ಹೆಚ್​3ಎನ್​2 ಭೀತಿ ಕೂಡ ಹೆಚ್ಚಿದ್ದು, ರಾಜ್ಯದಲ್ಲಿ ಪ್ರಸ್ತುತ ಕಳೆದ 82 ದಿನಗಳಲ್ಲಿ 115 ಹೆಚ್​3ಎನ್​2 ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ H3N2 ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ 30 ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ವ್ಯಾಪ್ತಿ-30, ಶಿವಮೊಗ್ಗ-19, ಧಾರವಾಡ-14, ಮೈಸೂರು-09, ವಿಜಯಪುರ-08, ಬೆಳಗಾವಿ-05, ಹಾಸನ-05, ತುಮಕೂರು-03, ದಾವಣಗೆರೆ-03, ಹಾವೇರಿ-03, ದಕ್ಷಿಣ ಕನ್ನಡ-03, ಬೆಂಗಳೂರು ಗ್ರಾಮಾಂತರ-02, ಗದಗ-02, ರಾಮನಗರ-02, ಚಾಮರಾಜನಗರ-01, ಬಾಗಲಕೋಟೆ-01, ಉತ್ತರ ಕನ್ನಡ-01,

ರಾಜ್ಯದಲ್ಲಿ 115 ಹೆಚ್3ಎನ್2‌ ಪ್ರಕರಣ ಪತ್ತೆ Read More »

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್

ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋ ವೈರಲ್ ಮಂಗಳೂರು: ಸ್ವಪಕ್ಷದ ವಿರುದ್ಧವೇ ಶಾಸಕ ಉಮಾನಾಥ್ ಕೋಟ್ಯಾನ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದ್ದು, ಆಕ್ಷೇಪಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳೂರು ಸಮೀಪದ ಕಿನ್ನಿಗೋಳಿ ಗ್ರಾಮದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲವೆಂದು ಪಕ್ಷದವರು ಹೇಳುತ್ತಾರೆ, ನಾವು ಯಾಕೆ ಮುಸ್ಲಿಮರ ಕೆಲಸ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ನಾನು ಹಾಗಲ್ಲ,‌ ಈ ಎರಡಕ್ಕೂ ವಿರುದ್ಧವಾಗಿ ಕೆಲಸ

ಮುಸ್ಲಿಮರ ಕುರಿತ ಬಿಜೆಪಿ ನಾಯಕರ ನಿಲುವನ್ನು ಒಪ್ಪುವುದಿಲ್ಲ: ಶಾಸಕ ಉಮಾನಾಥ್ ಕೋಟ್ಯಾನ್ Read More »

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ

ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಳಿಕ ಇದೀಗ ವಿದ್ಯುತ್‌ ಇಲಾಖೆಯ ನೌಕರರು ಮುಷ್ಕರಕ್ಕೆ ತಯಾರಾಗಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮಾ.16ರಂದು ಎಲ್ಲ ಎಸ್ಕಾಂಗಳ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳ ನೌಕರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಇದರಿಂದ ವಿದ್ಯುತ್‌ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆಯಿದೆ. ಕೆಪಿಟಿಸಿಎಲ್‌ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ(ಎಸ್ಕಾಂ) ಅಧಿಕಾರಿಗಳು, ನೌಕರರ ಬೇಡಿಕೆಗೆ ಈವರೆಗೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಬುಧವಾರ ತನಕ ಸರ್ಕಾರಕ್ಕೆ ತೀರ್ಮಾನ ಕೈಗೊಳ್ಳಲು

ಮಾ.16: ವಿದ್ಯುತ್‌ ಇಲಾಖೆ ನೌಕರರ ರಾಜ್ಯವ್ಯಾಪಿ ಮುಷ್ಕರ: ವಿದ್ಯುತ್‌ ಪೂರೈಕೆ ವ್ಯತ್ಯಯ ಸಾಧ್ಯತೆ Read More »

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾ.20ರಂದು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿಯ ಕಾರ್ಯಕ್ರಮ ಯಶಸ್ವಿಗೊಳಿಸಲು ಮಾ.16ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಸಭೆಯಲ್ಲಿ ಬೆಳಗಾವಿ ವಿಭಾಗದ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ.ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಮುಖಂಡರು, 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಮಾ.20ರಂದು ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರ್‍ಯಾಲಿ Read More »

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

ಬೆಂಗಳೂರು : ಮೊದಲ ಸಲ ಸಂಸದರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ–2022 ಅತ್ಯುತ್ತಮ ಸಂಸದ ಪ್ರಶಸ್ತಿಗೆ (ಮೊದಲ ಸಲ ಸಂಸದರಾದವರಿಗೆ ನೀಡುವ ಪ್ರಶಸ್ತಿ) ಭಾಜನರಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ತೇಜಸ್ವಿ ಸೂರ್ಯ ಸ್ವೀಕರಿಸಿದ್ದಾರೆ. 17ನೇ ಲೋಕಸಭೆಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ಅವರು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ

ಲೋಕಸಭೆಯ ಅತಿ ಕಿರಿಯ ವಯಸ್ಸಿನ ಸಂಸದ ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ Read More »

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು

ಬಿಜೆಪಿ ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ Read More »

error: Content is protected !!
Scroll to Top