ರಾಜಕೀಯ

ಬಜೆಟ್‌ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿಷೇಧ

ಮೀನುಗಾರಿಕೆ ಪ್ರೋತ್ಸಾಹ ಧನ ಹೆಚ್ಚಳ ಅಡಿಕೆ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ 10 ಕೋಟಿ ರೂ. ಮೀಸಲು ಬೆಂಗಳೂರೂ : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆರ ಸರಿಯಾಗಿ ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ. ಬಜೆಟ್‌ ಘೋಷಣೆಯ ಕೆಲವು ಮುಖ್ಯಾಂಶಗಳು ಇಲ್ಲಿವೆ. *ಮೀನುಗಾರಿಕೆ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್, ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು. ಉತ್ತರ ಕನ್ನಡ, ದಕ್ಷಿಣ […]

ಬಜೆಟ್‌ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿಷೇಧ Read More »

ವಿಜಯೇಂದ್ರ, ಸುನಿಲ್‌ ಕುಮಾರ್‌ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್‌ ರಿಲೀಫ್‌

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಅವಮಾನ ಮಾಡಿದ್ದ ಡಿಸಿಎಂ ಬೆಂಗಳೂರು: ಬಿಜೆಪಿ ನಾಯಕರನ್ನು ಟೀಕಿಸುವ ಉದ್ದೇಶದಿಂದ ಆಕ್ಷೇಪಾರ್ಹ ಬರಹಗಳಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಅವರಿಗೆ ಹೈಕೋರ್ಟಿನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್ ದತ್

ವಿಜಯೇಂದ್ರ, ಸುನಿಲ್‌ ಕುಮಾರ್‌ ವಿರುದ್ಧ ಕೀಳು ಟೀಕೆ : ಡಿಕೆಶಿಗೆ ಹೈಕೋರ್ಟ್‌ ರಿಲೀಫ್‌ Read More »

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ

ರಾಷ್ಟ್ರಪತಿ ಭವನದಿಂದ ನೂತನ ನೇಮಕಾತಿ ಆದೇಶ ನವದೆಹಲಿ : ರಾಷ್ಟ್ರಪತಿ ಭವನ ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ Read More »

ನಾಳೆ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ

ಅನುದಾನ, ಅಭಿವೃದ್ಧಿಗಾಗಿ ಕಾದು ಕುಳಿತಿದ್ದಾರೆ ಕರುನಾಡ ಜನ ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಯಿಂದ ಸದುರಾಗಿರುವ ಆರ್ಥಿಕ ಸವಾಲುಗಳ ನಡುವೆ ತನ್ನ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈಗಾಗಲೇ ಅನೇಕ ವಸ್ತು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಭಾರಿ ಟೀಕೆಗೆ ಗುರಿಯಾಗಿರುವ ಸಿದ್ದರಾಮಯ್ಯನವರು ದಾಖಲೆಯ 17ನೇ ಬಜೆಟ್‌ನಲ್ಲಿ ಯಾವ ಕರಾಮತ್ತು ತೋರಿಸಲಿದ್ದಾರೆ ಎಂಬ ನಿರೀಕ್ಷೆ ಬಹಳ ಇದೆ. ಒಂದೆಡೆ ಗ್ಯಾರಂಟಿಯಿಂದಾಗಿ ಬೊಕ್ಕಸ ಬರಿದಾಗಿದೆ ಎಂಬ ಟೀಕೆ, ಇನ್ನೊಂದೆಡೆ ಅಭಿವೃದ್ಧಿ

ನಾಳೆ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ Read More »

ಕೋಝಿಕ್ಕೋಡ್ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ‌ಸಂಜೀವ ಮಠಂದೂರು

ಬೆಂಗಳೂರು: ಮುಂಬರುವ ಕೇರಳ ವಿಧಾನ ಸಭಾ ಚುನಾವಣಾ ಪ್ರಯುಕ್ತ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಂಜೀವ ಮಠಂದೂರು ‌ಅವರನ್ನು ಕೋಝಿಕ್ಕೋಡ್ ವಲಯದ ಚುನಾವಣಾ ಪ್ರಭಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಮೇರೆಗೆ ಮುಂಬರುವ ಕೇರಳ ವಿಧಾನ ಸಭಾ ಚುನಾವಣೆಯ ನಿಮಿತ್ತ ಕೊಝಿಕೋಡ್ ವಲಯದ ಚುನಾವಣಾ ಪ್ರಭಾರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರು ನೇಮಕ ಮಾಡಿರುವುದಾಗಿದೆ.

ಕೋಝಿಕ್ಕೋಡ್ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ‌ಸಂಜೀವ ಮಠಂದೂರು Read More »

ಶಾಸಕ ಅಶೋಕ್ ರೈ ವಿರುದ್ಧ ಎಂಎಲ್‌ಸಿ ಕಿಶೋರ್ ಕುಮಾರ್ ಗರಂ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರು ಮಹಿಳಾ ಕಾಲೇಜಿನ ಪ್ರಾಂಶುಪಾಲರ ಅಮಾನತಿಗೆ ಸಂಬಂಧಿಸಿದ ಹಾಗೆ ಶಾಸಕ ರೈ ಅವರನ್ನು ತರಾಟೆಗೆ ತೆಗೆದು ಕೊಂಡಿರುವ ಅವರು, ಕಾಲೇಜಿನ ವಿದ್ಯಾರ್ಥಿನಿಯರು ತಮಗಾಗುತ್ತಿರುವ ಸಮಸ್ಯೆಗಳ ವಿರುದ್ಧ ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಆ ಕಾಲೇಜಿನ ಪ್ರಭಾರ ‌ಪ್ರಾಂಶುಪಾಲರನ್ನು ಅಮಾನತು ಮಾಡಿಸಲಾಗಿದೆ ಎಂದು ಹೇಳಿದ್ದಾರೆ. ಮಕ್ಕಳ ಹಿತಾಸಕ್ತಿಗೆ ‌ಸ್ಪಂದಿಸಿದ ಒಬ್ಬ ಪ್ರಾಮಾಣಿಕ ಅಧಿಕಾರಿಯನ್ನು ಬಲಿಪಶು ಮಾಡುವ ಬದಲು ನಿಯಮಗಳನ್ನು ಮುರಿದ ಗುತ್ತಿಗೆದಾರರ

ಶಾಸಕ ಅಶೋಕ್ ರೈ ವಿರುದ್ಧ ಎಂಎಲ್‌ಸಿ ಕಿಶೋರ್ ಕುಮಾರ್ ಗರಂ Read More »

ವಿದ್ಯಾರ್ಥಿಗಳ ಬದುಕಿನ ಜೊತೆಗೆ ರಾಜ್ಯ ಸರ್ಕಾರ ಆಟವಾಡುತ್ತಿದೆ: ಎಚ್‌ಡಿ‌ಕೆ

ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರ ಮಾತ್ರ ಅದನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಆಟವಾಡುತ್ತಿರುವುದಾಗಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಕೆಲಸಗಳಿಂದಾಗಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಆದರೆ ಇದರಿಂದಾಗಿ ಹೊರೆಯಾಗುತ್ತಿದೆ ಎನ್ನುವುದು ಸದ್ಯ ಈಗಲಾದರೂ ಡಿಸಿಎಂ ಡಿ. ಕೆ. ಶಿವಕುಮಾರ್ ಅವರಿಗಾದರೂ

ವಿದ್ಯಾರ್ಥಿಗಳ ಬದುಕಿನ ಜೊತೆಗೆ ರಾಜ್ಯ ಸರ್ಕಾರ ಆಟವಾಡುತ್ತಿದೆ: ಎಚ್‌ಡಿ‌ಕೆ Read More »

ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ವರ್ಷದೊಳಗೆ ಆರಂಭ: ಅಶೋಕ್ ರೈ

ಪುತ್ತೂರು: ಒಂದು ವರ್ಷದೊಳಗಾಗಿ ಪುತ್ತೂರಿನಲ್ಲಿ ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡುವ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ಕಚೇರಿ ಆರಂಭವಾಗಲಿದೆ. ಇದಕ್ಕಾಗಿ ನಿವೇಶನ ಮಂಜೂರು ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಪಡ್ನೂರಿನಲ್ಲಿ 0.44 ಸೆಂಟ್ಸ್ ಸ್ಥಳ ಮಂಜೂರಾಗಿದೆ. ಕಳೆದ ಎರಡು ತಿಂಗಳ ಹಿಂದೆ ತಮ್ಮ ಬಳಿ ಇಂಟಲಿಜೆನ್ಸ್ ಎಸ್.ಪಿ. ಅವರು ನಿವೇಶನಕ್ಕಾಗಿ ‌ಮನವಿ ಮಾಡಿದ್ದರು. ಅದರಂತೆ ಪಡ್ನೂರಿನಲ್ಲಿ ಜಾಗ ಮಂಜೂರು ಮಾಡಲಾಗಿದೆ. ಈ ಸಂಸ್ಥೆ ಆರಂಭಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ

ಪುತ್ತೂರಿನಲ್ಲಿ ಸೆಂಟ್ರಲ್ ಇಂಟಲಿಜೆನ್ಸ್ ಸಂಸ್ಥೆ ವರ್ಷದೊಳಗೆ ಆರಂಭ: ಅಶೋಕ್ ರೈ Read More »

ಮಹಿಳಾ‌‌ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕ ಅಶೋಕ್ ರೈ ವಿರುದ್ಧ ಮಾಜಿ ಶಾಸಕ ಮಠಂದೂರು ಗರಂ

ಪುತ್ತೂರು: ಪುತ್ತೂರು ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲರ ಅಮಾನತ್ತಿಗೆ ಸಂಬಂಧಿಸಿದ ಹಾಗೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿದ್ದು, ಶಾಸಕ ಅಶೋಕ್ ಕುಮಾರ್ ರೈ ಅವರ ಸೇಡಿಗೆ ‌ಉದ್ದೇಶಪೂರ್ವಕವಾಗಿ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿಯರು ತಮಗಾಗುತ್ತಿರುವ ಅನ್ಯಾಯಕ್ಕೆ ಪ್ರತಿಭಟನೆ ನಡೆಸಿದ್ದರು. ಈ ಕಾರಣಕ್ಕಾಗಿ ತಮ್ಮ ಸೇಡು ತೀರಿಸಿಕೊಳ್ಳಲು ಸರ್ಕಾರಕ್ಕೆ ಪತ್ರ ಬರೆದು ಪ್ರಾಂಶುಪಾಲರನ್ನೇ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪ್ರಬುದ್ಧರು. ಅವರ ಹಕ್ಕುಗಳನ್ನು ಕೇಳುವ ಸ್ವಾತಂತ್ರ್ಯ ಅವರಿಗೆ ಇದೆ.

ಮಹಿಳಾ‌‌ ಕಾಲೇಜು ಪ್ರಾಂಶುಪಾಲರ ಅಮಾನತು: ಶಾಸಕ ಅಶೋಕ್ ರೈ ವಿರುದ್ಧ ಮಾಜಿ ಶಾಸಕ ಮಠಂದೂರು ಗರಂ Read More »

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್

ಬೆಂಗಳೂರು: ಸಿ ಎಂ ಆಯ್ಕೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರಲ್ಲಿ ಯಾವುದೇ ರೀತಿಯಲ್ಲಿ ತಾವು ಲಾಬಿ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸಿ ಎಂ ಆಗಬೇಕು ಎನ್ನುವ ಅಭಿಮಾನಿಗಳು ಕೂಗುತ್ತಿರುವ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ಯಾವ ಗೊಂದಲಕ್ಕೂ ಒಳಗಾಗಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ನವದೆಹಲಿಗೆ ಹೋಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ಕೆಲವರು ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ತಾವೇನೂ ಮಾಡಲು ಸಾಧ್ಯವಿಲ್ಲ. ಇಂತಹ ಚರ್ಚೆಗೆ ನಾನು

ಸಿ ಎಂ ವಿಷಯದಲ್ಲಿ ತೀರ್ಮಾನ ಹೈಕಮಾಂಡ್‌ನದ್ದು: ಡಾ. ಜಿ. ಪರಮೇಶ್ವರ್ Read More »

error: Content is protected !!
Scroll to Top