ರಾಜಕೀಯ

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22 […]

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ

ಗುವಾಹಟಿ: ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ Read More »

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ

ಸುಳ್ಯ : ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಸುಮಾರು ಶೇ.64.46 ಮತದಾನವಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 233 ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ.  ಒಟ್ಟು 2 ಲಕ್ಷದ 8 ಸಾವಿರದ 853 ಮಂದಿ ಮತದಾರರಿದ್ದಾರೆ.

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ Read More »

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ನಡೆದಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ. ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ Read More »

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಮೊದಲ 4 ಗಂಟೆಯಲ್ಲಿ ಶೇ.30.96 ಮತದಾನವಾಗಿದೆ. 7 ಗಂಟೆಗೆ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.30.96 ಮತದಾರರು ಮತ ಚಲಾಯಿಸಿದ್ದಾರೆ. ಸುಳ್ಯದಲ್ಲಿ ಅತೀ ಹೆಚ್ಚು ಅಂದರೆ ಶೇ. 35.05 ಮತದಾನ ಆಗಿದೆ. ಬೆಳ್ತಂಗಡಿ 32.39, ಮೂಡಬಿದ್ರೆ 27.46, ಮಂಗಳೂರು ಉತ್ತರ 30.39, ಮಂಗಳೂರು ದಕ್ಷಿಣ 26.54, ಮಂಗಳೂರು 31.63, ಬಂಟ್ವಾಳ 32.28, ಪುತ್ತೂರು 32.98 ಶೇಖಡಾ ಮತದಾನ ಆಗಿದೆ. ಸುಳ್ಯದಲ್ಲಿ 73,209 ಮಂದಿ ಮತ ಚಲಾಯಿಸಿ ಶೆ.35.05 ಮತದಾನ ಆಗಿದೆ.

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ Read More »

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಮತದಾನ ಮಾಡಿದರು. ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ Read More »

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದರು. ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ Read More »

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ

ಪುತ್ತೂರು: ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ ಮತದಾನ ಮಾಡಿದರು. ಗುತ್ತಿಗಾರಿನ ಮೊಗ್ರದಲ್ಲಿ ಮತಯಂತ್ರ ಕೈಕೊಟ್ಟಿದ್ದು, ಇನ್ನೂ ಮತದಾನ ಆರಂಭವಾಗಿಲ್ಲ ಎಂದು ತಿಳಿದು ಬಂದಿದೆ. ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವುದು.

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ Read More »

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು : ಏ. 26ರಂದು 14 ಲೋಕಸಭಾ ವ್ಯಾಪ್ತಿಯಲ್ಲೂ ಸರ್ಕಾರಿ ಕಚೇರಿಗೆ ಕಡ್ಡಾಯ ರಜೆ ಇರಲಿದೆ. ಖಾಸಗಿ ಕಂಪನಿಗಳು ರಜೆ ನೀಡಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಅಂಚೆ ಮತದಾನಕ್ಕೆ ವಿವಿಧ ಇಲಾಖೆಯಿಂದ

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ Read More »

error: Content is protected !!
Scroll to Top